

ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ


ಬೆಂಗಳೂರು: ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದರಿಂದ ಪೊಲೀಸ್ ಸಿಬ್ಬಂದಿಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಮತ್ತು ಕೋವಿಡ್ -19 ಕಾರಣದಿಂದಾಗಿ ನಾಗರಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕೂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರಿನ ವಕೀಲೆ ಗೀತಾ ಮಿಶ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರತಿವಾದಿಗಳಾದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ನಗರ ಪೊಲೀಸ್ ಆಯುಕ್ತ ಮತ್ತು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಬೆಂಗಳೂರು ನಗರದಲ್ಲಿ ಕರ್ತವ್ಯನಿರತ ಪೊಲೀಸರು ಸಮವಸ್ತ್ರಕ್ಕೆ ಅಳವಡಿಸಿಕೊಳ್ಳಲು 75 ಲಕ್ಷ ರು. ವೆಚ್ಚದಲ್ಲಿ 50 ಬಾಡಿ ಕ್ಯಾಮೆರಾ ಖರೀದಿಸಲಾಗಿದೆ. ಆದರೆ, ಬಳಕೆ ಮಾಡಿಲ್ಲ. 2020ರ ಸೆ.10ರಂದು ನಗರ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈವರೆಗೆ ಮನವಿ ಪರಿಗಣಿಸಿಲ್ಲ’ . ‘ಬಾಡಿ ಕ್ಯಾಮೆರಾ ಧರಿಸುವುದರಿಂದ ಪೊಲೀಸ್ ಸಿಬ್ಬಂದಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು. ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯನ್ನು ಠಾಣೆಯಿಂದಲೇ ಹಿರಿಯ ಅಧಿಕಾರಿಗಳು ಗಮನಿಸಿ ಮೇಲ್ವಿಚಾರಣೆ ನಡೆಸಬಹುದು.
ಬಾಡಿ ಕ್ಯಾಮೆರಾ ಧರಿಸುವುದರಿಂದ ಪೊಲೀಸರಿಗೆ ರಕ್ಷಣೆ ಸಿಗಲಿದೆ. ಕಿಡಿಗೇಡಿಗಳಿಗೂ ಭಯ ಹುಟ್ಟುತ್ತದೆ’ ಎಂದು ಹೇಳಿದರು. ‘ಈಗಾಗಲೇ ಖರೀದಿಸಿರುವ ಕ್ಯಾಮೆರಾ ಬಳಸಲು ನಗರಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. (kpc)




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
