ಸರ್ಕಾರಿ ಪದವಿ, ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌‌

ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜು ಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುವುದು.

Tablet

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜು ಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌ ತಿಳಿಸಿದ್ದಾರೆ.
 
ಕೋವಿಡ್‌ ಹಿನ್ನೆಲೆಯಲ್ಲಿ ಡಿಜಿಟಲ್‌ ಕಲಿಕೆಯನ್ನು ವ್ಯಾಪಕವಾಗಿ ಉತ್ತೇಜಿಸುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು. 

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದʼ ಉತ್ತಮ ಆಡಳಿತ ದಿನʼ(ಗುಡ್‌ ಗವರ್ನೆನ್ಸ್‌ ಡೇ)ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ʼಉನ್ನತ ಶಿಕ್ಷಣದಲ್ಲಿ ಜಾಗತಿಕ ಮಟ್ಟದ ಸಿದ್ಧತೆʼ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಮಾಹಿತಿ ನೀಡಿದರು.
 
ಗೋಷ್ಠಿಯನ್ನು ನಡೆಸಿಕೊಟ್ಟ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಜಮದಗ್ನಿ ಅವರ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದ ಪ್ರದೀಪ್, ಸದ್ಯಕ್ಕೆ ಕೋವಿಡ್‌ ಕಾರಣಕ್ಕೆ ಆನ್‌ಲೈನ್‌ ಶಿಕ್ಷಣ ನಡೆಯುತ್ತಿದೆ. ಇದು ತಾತ್ಕಾಲಿಕ ವ್ಯವಸ್ಥೆ ಮಾತ್ರ. ಕಾಲೇಜುಗಳು ಆರಂಭವಾಗಿಯೇ ಆಗುತ್ತವೆ. ನೇರ ತರಗತಿಗಳೂ ನಡೆಯುತ್ತವೆ. ಆದರೆ, ತಾಂತ್ರಿಕವಾಗಿ ನಮ್ಮ ವಿದ್ಯಾರ್ಥಿಗಳನ್ನು ಜಾಗತಿಕ ಗುಣಮಟ್ಟಕ್ಕೆ ಅಣಿಗೊಳಿಸಲು ಎಲ್ಲ ರೀತಿಯ ಆರ್ಥಿಕ ಸಹಕಾರ ನೀಡಲು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಉದ್ದೇಶಿಸಿದ್ದಾರೆ ಎಂದರು.

ಪ್ರಸಕ್ತ 2020-21ರ ಶೈಕ್ಷಣಿಕ ವರ್ಷದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾ ರ್ಥಿಗಳು, 14 ಸರಕಾರಿ ಎಂಜನಿಯರಿಂಗ್‌ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್‌ಗಳನ್ನು ನೀಡಲಾಗುತ್ತಿದೆ ಎಂದರು.
 
ಟ್ಯಾಬ್ಲೆಟ್‌ಗಳ ಖರೀದಿಗೆ ಒಟ್ಟು 155.4ಕೋಟಿ ರೂ.ವೆಚ್ಚವಾಗುತ್ತಿದ್ದು, ಪ್ರತಿ ಒಂದು ಟ್ಯಾಬ್ಲೆಟ್‌ ಅನ್ನು 10,000 ರೂ.ಬೆಲೆಯಂತೆ ಖರೀದಿ ಮಾಡಲಾಗುತ್ತಿದೆ. ಒಂದು ವೇಳೆ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಈ ಟ್ಯಾಬ್‌ಗಳು ಪೂರಕವಾಗದಿದ್ದರೆ ಅಡ್ವಾನ್ಸ್ಡ್‌ ವರ್ಷನ್‌ ಲ್ಯಾಪ್‌ಟಾಪ್‌ ಖರೀದಿಗೆ ಕಾಲೇಜುಗಳ ಮೂಲಕವೇ ಶಿಕ್ಷಣ ಸಾಲಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಡಿಜಿಟಲ್‌ ಅಥವಾ ಆನ್‌ಲೈನ್‌ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಂತರ್ಜಾಲ ಸಂಪರ್ಕಕ್ಕೆ ಯಾವುದೇ ಅಡಚಣೆ ಆಗದಂತೆ ಈಗಾಗಲೇ ಎಲ್ಲ ಟೆಲಿಕಾಂ ಕಂಪನಿಗಳ ಜತೆ ಮಾತುಕತೆ ನಡೆಸಿ ಬಹುತೇಕ ಕಡೆ ಸಮಸ್ಯೆಯನ್ನು ನೀಗಿಸಲಾಗಿದೆ. ಸರಕಾರಿ ಸ್ವಾಮ್ಯದ ಪ್ರತೀ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ನಡೆಸಲು ಹಾಗೂ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಹೈ-ಸ್ಪೀಡ್‌ ಇಂಟರ್‌ನೆಟ್‌ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಪ್ರದೀಪ್‌ ಮಾಹಿತಿ ನೀಡಿದರು.

ಈ ಗೋಷ್ಠಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ, ಲ್ಯಾಬ್‌ ಇನ್ ಆಪ್‌ನ ಪವನ್‌ ಶಿಂದೆ ಪಾಲ್ಗೊಂಡಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *