

ಪಕ್ಷದ ನಿರ್ಧಾರ ಮತ್ತು ಪಕ್ಷದ ಸಿದ್ಧಾಂತಗಳಿಂದ ಅಸಂತುಷ್ಟವಾಗಿರುವ ನಾಯಕರು ಪಕ್ಷ ಬಿಟ್ಟು ಹೋಗಬಹುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಪಕ್ಷದ ನಿರ್ಧಾರ ಮತ್ತು ಪಕ್ಷದ ಸಿದ್ಧಾಂತಗಳಿಂದ ಅಸಂತುಷ್ಟವಾಗಿರುವ ನಾಯಕರು ಪಕ್ಷ ಬಿಟ್ಟು ಹೋಗಬಹುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಮತ್ತು ಉನ್ನತ ನಾಯಕರೊಂದಿಗೆ ಅಸಮಾಧಾನ ಹೊಂದಿರುವ ಪಕ್ಷದ ಶಾಸಕರು ರಾಜೀನಾಮೆ ನೀಡಿ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಬಹುದು.ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಪಕ್ಷವು ಸಹಿಸುವುದಿಲ್ಲ. ಪಕ್ಷದ ಮುಖಂಡರನ್ನು ಗುರಿಯಾಗಿಸಿಕೊಂಡು ಮಾತನಾಡುತ್ತಿರುವವರು ಪಕ್ಷ ತ್ಯಜಿಸಲು ಸ್ವತಂತ್ರರು. ಅಲ್ಲವೇ ಪಕ್ಷವೇ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
ಸಕಲೇಶಪುರ ಶಾಸಕರೂ ಕೂಡ ಆಗಿರುವ ಕುಮಾರಸ್ವಾಮಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಘೋಷಿಸಬೇಕು. ಪರಿಸ್ಥಿತಿಯ ಲಾಭ ಪಡೆಯಲು ಸರ್ಕಾರ ಮೀಸಲಾತಿಯನ್ನು ವಿಳಂಬಗೊಳಿಸುತ್ತದೆ ಎಂದು ಆರೋಪಿಸಿದರು. ಇದೇ ವೇಳೆ ಜೆಡಿಎಸ್ ಬೇರೆ ಯಾವುದೇ ಪಕ್ಷದೊಂದಿಗೆ ವಿಲೀನಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷವನ್ನು ಬಲಪಡಿಸಲು ನಾಯಕರು ಜನವರಿ 15 ರ ನಂತರ ರಾಜ್ಯ ಪ್ರವಾಸವನ್ನು ಪ್ರಾರಂಭಿಸುತ್ತಾರೆ. ಮಲೆನಾಡಿನ ರೈತರ ಹಿತದೃಷ್ಟಿಯಿಂದ ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿಯನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು. (kpc)




