
ಚಿಕ್ಕಮಗಳೂರು:ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದ್ದು ಆಘಾತವನ್ನುಂಟುಮಾಡಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ.

ಚಿಕ್ಕಮಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದ್ದು ಆಘಾತವನ್ನುಂಟುಮಾಡಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ.
ಎಸ್ ಎಲ್ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ಕೇಳಿದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಘಾತ ವ್ಯಕ್ತಪಡಿಸಿದ್ದಾರೆ. ಧರ್ಮೇಗೌಡರು ತಾಳ್ಮೆಯ ಸಭ್ಯ ವ್ಯಕ್ತಿಯಾಗಿದ್ದರು. ಅವರ ನಿಧನ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಹ ಎಸ್ ಎಲ್ ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ಕೇಳಿ ವಿಷಾದ ವ್ಯಕ್ತಪಡಿಸಿದ್ದಾರೆ. (kpc)



