ಗ್ರಾ.ಪಂ.ಫಲಿತಾಂಶ- ಪವಾಡಗಳು-ಮೂರ್ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಟಾಸ್!

ರಾಜ್ಯದಾದ್ಯಂತ ಇಂದು ಗ್ರಾ.ಪಂ. ಫಲಿತಾಂಶ ಪ್ರಕಟವಾಗಿದ್ದು ಅನೇಕ ಕಡೆ ಪವಾಡಗಳು ನಡೆದಿವೆ. ಸಿದ್ಧಾಪುರ ತಾಲೂಕಿನ ವಾಜಗೋಡು ಪಂಚಾಯತ್ ಕೆರೆಮನೆ ವಾರ್ಡನಲ್ಲಿ ಸ್ಫರ್ಧಿಸಿದ್ದ ಎಸ್.ಎಂ.ಭಟ್, ಕೃಷ್ಣ ಭರಮ ನಾಯ್ಕ, ವಿನಾಯಕ ನಾಯ್ಕ ಮೂವರೂ ತಲಾ 198 ಮತಗಳನ್ನು ಪಡೆದರು!. ನಂತರ ಎಲ್ಲರ ಒಪ್ಪಿಗೆಯಂತೆ ಚೀಟಿ ಎತ್ತಲಾಗಿ ಎಸ್.ಎಂ.ಭಟ್ ಆಯ್ಕೆಯಾದರು.

ಇಂಥದ್ದೇ ಮತ್ತೊಂದು ಪ್ರಕರಣದಲ್ಲಿ ತಲಾ ತೊಂಭತ್ತು ಮತಗಳನ್ನು ಪಡೆದು ಸಮಾನ ಮತಗಳ ಚೀಟಿ ಎತ್ತುವ ಆಯ್ಕೆಯಲ್ಲಿ ಶರಾವತಿ ಹನುಮಂತ ನಾಯ್ಕ ಹುಲಿಮನೆ ಆಯ್ಕೆಯಾದರು. ಬೇಡ್ಕಣಿ ಗ್ರಾಮ ಪಂಚಾಯತ್ ಭಾನ್ಕುಳಿ ವಾರ್ಡನಲ್ಲಿ ಈ ಸಮಾನ ಮತಗಳನ್ನು ಪಡೆದವರು ಶರಾವತಿ ಹನುಮಂತ ನಾಯ್ಕ ಮತ್ತು ಪವಿತ್ರ ಸುರೇಶ್ ಗೌಡ.

ಗ್ರಾ.ಪಂ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿ: ಇತ್ತೀಚಿನ ಟ್ರೆಂಡ್, ಮಾಹಿತಿಗಳು ಹೀಗಿವೆ…ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ನಿರ್ಣಾಯಗ ಘಟ್ಟ ತಲುಪಿದೆ. 

Karnataka Gram Panchayat Election Results

Posted By : Srinivas Rao BVSource : Online Desk

ಬೆಂಗಳೂರು: ರಾಜ್ಯದ 5,728 ಗ್ರಾಮ ಪಂಚಾಯಿತಿಗಳ 82,616 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. 

ಸಂಜೆ ಅಥವಾ ರಾತ್ರಿಯ ವೇಳೆಗೆ ಅಂತಿಮ ಫಲಿತಾಂಶ ಸಿಗುವ ನಿರೀಕ್ಷೆ ಇದ್ದು, ಇತ್ತೀಚಿನ ವರದಿಗಳ ಪ್ರಕಾರ, ಬಿಜೆಪಿ ಬೆಂಬಲಿತ 5,340 ಕಾಂಗ್ರೆಸ್ ಬೆಂಬಲಿತ 3095, ಜೆಡಿಎಸ್  ಬೆಂಬಲಿತ 1570 ಸದಸ್ಯರು ಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಮತ ಎಣಿಕೆ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಚುನಾವಣಾಧಿಕಾರಿ ಸಾವು

ಮತ ಎಣಿಕೆ ವೇಳೆ ಕೆಲವು ಅವಘಡಗಳೂ ವರದಿಯಾಗಿದ್ದು, ಮತ ಎಣಿಕೆ ಕಾರ್ಯದಲ್ಲಿ ನಿರತರಾಗಿದ್ದ ಮೈಸೂರಿನಲ್ಲಿ ಚುನಾವಣಾಧಿಕಾರಿಯಾಗಿದ್ದ, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬೋರೇಗೌಡ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. 

ಮತ ಎಣಿಕೆ ಕೇಂದ್ರಕ್ಕೆ ಚಾಕು ತಂದಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ 
ಮತ ಎಣಿಕೆ ಕೇಂದ್ರಕ್ಕೆ ಚಾಕು ತಂದಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ವರದಿಯಾಗಿದೆ. ಅಭ್ಯರ್ಥಿಯ ಪರ ಏಜೆಂಟ್ ಆಗಿ ಶಹಾಪುರ ನಗರದ ಪದವಿ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಮತ ಎಣಿಕೆ ಕೇಂದ್ರಕ್ಕೆ ಅಷ್ಫಾಕ್ ಎಂಬಾತಚಾಕು ಹಿಡಿದು ಬಂದಿದ್ದ, ಈತ ಪೊಲೀಸ್ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.

ಬೆಳಗಾವಿಯಲ್ಲಿ ಮತ ಎಣಿಕೆ ಕೇಂದ್ರದ ಬಳಿ ಮಾಟ, ಮಂತ್ರ! 

ಮತದಾನಕ್ಕೂ ಮುನ್ನ ವಾಮಾಚಾರ, ಮಾಟ ಮಂತ್ರಗಳ ಬಗ್ಗೆ ಈ ಹಿಂದೆ ವರದಿ ಪ್ರಕಟವಾಗಿತ್ತು. ಆದರೆ ಈಗ ಮತ ಎಣಿಕೆ ದಿನದಂದು ಮತ ಎಣಿಕೆ ಕೇಂದ್ರದ ಎದುರು ವಾಮಾಚಾರ ನಡೆದಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ. 

ಚಿಕ್ಕೋಡಿಯಲ್ಲಿ ಈ ಘಟನೆ ನಡೆದಿದ್ದು, ಸಣ್ಣ ಪೇಪರ್ ತುಂಡು ಹಾಗೂ ವಾಮಾಚಾರಕ್ಕೆ ಬಳಕೆ ಮಾಡುವ ಪದಾರ್ಥಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *