ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ

ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ.

hukkeri and jarkiholi

ಬೆಂಗಳೂರು: ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ.

ನಿರೀಕ್ಷೆಯಂತೆ ಸತೀಶ್ ಜಾರಕಿಹೊಳಿ, ಪ್ರಕಾಶ್ ಹುಕ್ಕೇರಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜು ಹಟ್ಟಿಹೊಳಿ ಅವರ ಹೆಸರು ಈ ಪಟ್ಟಿಯಲ್ಲಿದೆ. ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರಿಗೆ ಅಂತಿಮವಾಗಿ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಖಾಲಿ ಬಿದ್ದಿದೆ. ಹೀಗಾಗಿ, ಕಾಂಗ್ರೆಸ್ ಭ್ಯರ್ಥಿಗಳನ್ನ ಆಯ್ಕೆ ಮಾಡಲು ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಯಿತು.

ನಾನು ಬೆಳಗಾವಿ ಲೋಕಸಭೆ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಈ ಮೊದಲು ಸತೀಶ್ ಜಾರಕಿಹೊಳಿ ಹೇಳಿದ್ದರು.  ಕೋವಿಡ್ ಮಹಾಮಾರಿಗೆ ಎಂ ನಾರಾಯಣರಾವ್ ಬಲಿಯಾಗುವುದರೊಂದಿಗೆ ತೆರವುಗೊಂಡಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆದಿದೆ. ಕೆಪಿಸಿಸಿ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಿದೆ. 

ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಮತ್ತು ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರ ಹೆಸರು ಅಂತಿಮಗೊಂಡಿದ್ದು ಹೈಕಮಾಂಡ್ ಅಂಗಳಕ್ಕೆ ಪಟ್ಟಿ ಕಳುಹಿಸಲು ನಿರ್ಧರಿಸಲಾಗಿದೆ. ಮಾಜಿ ಬೀದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಬುಲ್ಲಾ ಅವರ ಹೆಸರೂ ರೇಸ್​ನಲ್ಲಿತ್ತು. 

ಉಪಚುನಾವಣೆಗಳ ಬಗ್ಗೆ ಹಲವು ಸಲಹೆಗಳಿವೆ ಮತ್ತು ಅನೇಕ ಹೆಸರುಗಳ ಬಗ್ಗೆಯೂ ಚರ್ಚಿಸಿದ್ದೇವೆ ನಾವು ಕೇಂದ್ರ ನಾಯಕರಿಗೆ ಹೆಸರುಗಳನ್ನು ಕಳುಹಿಸುತ್ತೇವೆ ಮತ್ತು ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಭೆಯ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *