

ಜನವರಿ 12 ರಂದು ನಡೆಯುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: ಜನವರಿ 12 ರಂದು ನಡೆಯುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.
ಇನ್ನೂ ಇದೇ ವೇಳೆ ಜನವರಿ 12 ರಂದು ಆನ್ ಲೈನ್ ಚುನಾವಣೆ ನಡೆಸಬೇಕೆ ಅಥವಾ ಬೇಡವೇ ಎಂದು ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಗೊಂದಲದಲ್ಲಿದೆ, ಅಧ್ಯಕ್ಷ ಸ್ಥಾನಕ್ಕೆ ಮೊಹಮದ್ ನಲಪಾಡ್, ಎಚ್ ಎಸ್ ಮಂಜುನಾಥ್ ಸ್ಪರ್ಧಿಸಲು ಮುಂದಾಗಿದ್ದಾರೆ. ಮಿಥುನ್ ರೈ ಈಗಾಗಲೇ ನಾಮಪತ್ರ ವಾಪಸ್ ಪಡೆದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಇತರೆ ಹಿರಿಯ ಕೈ ನಾಯಕರು ಅಭ್ಯರ್ಥಿಗಳು ನಾಮಪತ್ರ ವಾಪಸ್ ತೆಗೆದುಕೊಳ್ಳಲು ಮನವೊಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
2018 ರ ವಿಧಾನ ಸಭೆ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಎನ್ ಎಸ್ ಯು ಐ ಅಧ್ಯಕ್ಷ ಎಚ್ ಎಸ್ ಮಂಜುನಾಥ ಗೌಡ ಅವರ ಪರವಾಗಿ ಪಕ್ಷದ
ನಾಯಕರು ಒಲವು ತೋರುತ್ತಿಲ್ಲ. ಇನ್ನೂ ನಲಪಾಡ್ ಹ್ಯಾರಿಸ್ ಬಗ್ಗೆ ಪಕ್ಷದ ಹೈ ಕಮಾಂಡ್ ಅನುಮೋದನೆ ನೀಡಿಲ್ಲ.
ತಮ್ಮ ನಾಮಪತ್ರ ವಾಪಸ್ ಪಡೆಯುವುದಾಗಿ ಮಿಥುನಾ ರೈ ಫೇಸ್ ಬುಕ್ ನಲ್ಲಿ ಬರೆದು ಕೊಂಡಿದ್ದಾರೆ. 2023ರ ವಿಧಾನ ಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. 35 ವರ್ಷದ ರಕ್ಷ ರಾಮಯ್ಯ ಕಾಂಗ್ರೆಸ್ ಹಿರಿಯ ನಾಯಕ ಎಂ ಆರ್ ಸೀತಾರಾಮ್ ಪುತ್ರ. (kpc)


