ಉಮೇಶ ಕತ್ತಿಗೆ ಸಚಿವ ‘ಭಾಗ್ಯ’? :ಸಂಪುಟ ವಿಸ್ತರಣೆಗೆ ಮೂಹೂರ್ತ ಫಿಕ್ಸ್: ನಾಳೆ ಸಂಜೆ 4 ಗಂಟೆಗೆ ಪ್ರಮಾಣ ವಚನ; ಯಾರಿಗೆ ಲಕ್? ಯಾರಿಗೆ ಕೊಕ್?

ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು, ಆಕಾಂಕ್ಷಿಗಳ ಆಸೆ ಮತ್ತಷ್ಟು ಗರಿಗೆದರಿದೆ.

ಉಮೇಶ ಕತ್ತಿಗೆ ಸಚಿವ ‘ಭಾಗ್ಯ’?: ಮಂಗಳವಾರ ಬೆಂಗಳೂರಿಗೆ ಆಗಮನ!

ಬಹುನಿರೀಕ್ಷೆ ಹುಟ್ಟಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಬರುವ 13  ಅಥವಾ  14 ನೇ ತಾರೀಖು ವಿಸ್ತರಣೆಯಾಗಲಿದೆ. 

Umesh katti

ಬೆಂಗಳೂರು: ಬಹುನಿರೀಕ್ಷೆ ಹುಟ್ಟಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಬರುವ 13  ಅಥವಾ  14 ನೇ ತಾರೀಖು ವಿಸ್ತರಣೆಯಾಗಲಿದೆ. 

ತಮ್ಮ ಸಂಪುಟಕ್ಕೆ ಸಿಎಂ ಯಡಿಯೂರಪ್ಪ 7 ಶಾಸಕರನ್ನು ಸೇರಿಸಿಕೊಳ್ಳಲಿದ್ದಾರೆ ಎದು ಹೇಳಲಾಗಿದ್ದರೂ ಅವರ ಹೆಸರುಗಳನ್ನು ಬಹಿರಂಗ ಪಡಿಸಿಲ್ಲ. ಆದರೆ ಬೆಳಗಾವಿ ಶಾಸಕ ಉಮೇಶ್ ಕತ್ತಿ ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.  ಉಮೇಶ್ ಕತ್ತಿ ಸೇರಿದಂತೆ ನಾಲ್ಕು ಶಾಸಕರುಗಳ ಹೆಸರನ್ನು ಸಿಎಂ ಪೈನಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಬಾಕಿಯಿರುವ ಎರಡು ಸ್ಥಾನಗಳಿಗಾಗಿ ಮುರುಗೇಶ್ ನಿರಾಣಿ ಸೇರಿದಂತೆ 15 ಮಂದಿ ಆಕಾಂಕ್ಷಿಗಳಿದ್ದಾರೆ ಎಂದು ತಿಳಿದು ಬಂದಿದೆ.

ಹುಕ್ಕೇರಿಯಿಂದ 8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಉಮೇಶ್ ಕತ್ತಿ, ಈ ಹಿಂದೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದಾರೆ.  ಸಂಪುಟಕ್ಕೆ ಯಾರ್ಯಾರು ಸೇರಲಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ, ಆದರೆ ಮಂಗಳವಾರ ನಾನು ಬೆಂಗಳೂರಿಗೆ ತೆರಳುತ್ತಿದ್ದೇನೆ, ಪಟ್ಟಿಯಲ್ಲಿ ನನ್ನ ಹೆಸರಿದ್ದರೆ ಸಚಿವನಾಗಿ ಕೆಲಸ ಮಾಡುತ್ತೇನೆ, ಒಂದು ವೇಳೆ ಸಚಿವನಾಗದಿದ್ದರೇ ಶಾಸಕನಾಗಿಯೇ ಮುಂದುವರಿಯುತ್ತೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಯಡಿಯೂರಪ್ಪ ಅವರ ಆಪ್ತರಾಗಿರುವ ಉಮೇಶ್ ಕತ್ತಿ.  ಸಿಎಂ ಆಗಿ ಯಡಿಯೂರಪ್ಪ  ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ರಚನೆಯಾದಾಗ ಅವರನ್ನು ರಾಜ್ಯ ಸಂಪುಟದಲ್ಲಿ ಸೇರಿಸಿಕೊಳ್ಳಬೇಕಿತ್ತು, ಆದರೆ ಹೈಕಮಾಂಡ್ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಉಮೇಶ್ ಕತ್ತಿಗೆ ಅವಕಾಶ ಸಿಗಲಿಲ್ಲ.

ಇದರಿಂದ ಅಸಮಾಧಾನಗೊಂಡಿದ್ದ ಉಮೇಶ್ ಕತ್ತಿ ಹಲವು ಬಾರಿ ಪಕ್ಷ ಮತ್ತು ಸಿಎಂ  ವಿರುದ್ಧ ಹರಿಹಾಯ್ದಿದ್ದರು.  ಆದರೆ ಈ ಬಾರಿ ಉಮೇಶ್ ಕತ್ತಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ,  ಹೀಗಾಗಿ ಕತ್ತಿ ಬೆಂಗಳೂರಿಗೆ ಮಂಗಳವಾರ ಆಗಮಿಸುತ್ತಿದ್ದಾರೆ. 

ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡಿದರೇ ಬೆಳಗಾವಿ ಜಿಲ್ಲೆಯಿಂದ ಐವರು ಶಾಸಕರು ಸಚಿವರಾಗಿ ಕೆಲಸ ನಿರ್ವಹಿಸುವಂತಾಗುತ್ತದೆ, ಈಗಾಗಲೇ ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಶ್ರೀಮಂತ ಪಾಟೀಲ್, ಹಾಗೂ ಶಶಿಕಲಾ ಜೊಲ್ಲೆ ಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

yediyurappa

ಬೆಂಗಳೂರು: ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು, ಆಕಾಂಕ್ಷಿಗಳ ಆಸೆ ಮತ್ತಷ್ಟು ಗರಿಗೆದರಿದೆ.

ನಾಳೆ ಸಂಜೆ ಅಂದರೆ ಬುಧವಾರ ಸಾಯಂಕಾಲ 4 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ನಿರ್ಧಾರ ಮಾಡಿದ್ದೇನೆ. ನೂತನ ಸಚಿವರಿಗೆ ಮಂಗಳವಾರ ಸಂಜೆ ಮಾಹಿತಿ ನೀಡಲಾಗುವುದು ಎಂದಿದ್ದಾರೆ. ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಗೊಂದಲ ಇಲ್ಲ, ಈ ಬಗ್ಗೆ ಇರುವ ಊಹಾಪೋಹಗಳು ಸತ್ಯಕ್ಕೆ ದೂರವಾಗಿದೆ ಎಂದು ಬಿಎಸ್‌ವೈ ಸ್ಪಷ್ಟಪಡಿಸಿದ್ದಾರೆ.

ಇನ್ನೂ ಖಾಲಿಯಿರುವ 7 ಸಚಿವ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಶಾಸಕರ ಹೆಸರು ಫೈನಲ್ ಆಗಿದ್ದು ಉಳಿದ ಒಂದು ಸ್ಥಾನಕ್ಕಾಗಿ ಅರವಿಂದ ಲಿಂಬಾವಳಿ ಮತ್ತು ಸಿಪಿ ಯೋಗೇಶ್ವರ್ ಲಾಬಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.    ಇನ್ನೂ ಇದೇ ವೇಳೆ ಹಲವು ಸಚಿವರಿಗೆ ಕೊಕ್ ನೀಡಿ ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *