ಅರ್ಧಂಬರ್ಧ ಕಾಮಗಾರಿಯಾಗಿದ್ದ ರಸ್ತೆಯಲ್ಲಿ ಸಂಚರಿಸಿದ್ದೇ ಕೇಂದ್ರ ಸಚಿವರ ಕಾರು ಅಪಘಾತಕ್ಕೀಡಾಗಲು ಕಾರಣ..!

ವಿಧಿಯ ಆಟ ಬಲ್ಲವರಾರು ಎಂಬುದಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶ್ರೀಪಾದ ನಾಯ್ಕ್ ಅವರ ಪತ್ನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆಯೇ ಸಾಕ್ಷಿಯಾಗಿದೆ. 

Sripad Naik

ಬೆಂಗಳೂರು: ವಿಧಿಯ ಆಟ ಬಲ್ಲವರಾರು ಎಂಬುದಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶ್ರೀಪಾದ ನಾಯ್ಕ್ ಅವರ ಪತ್ನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆಯೇ ಸಾಕ್ಷಿಯಾಗಿದೆ. 

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಅವರ ಕಾರು ಹೆದ್ದಾರಿ ಬದಲು ಕಡಿಮೆ ದೂರ ಇರುವ ಕಾರಣ ಒಳ ರಸ್ತೆಯಲ್ಲಿ ಸಂಚರಿಸಿದ್ದು ಹಾಗೂ ಅರ್ಧಂಬರ್ಧ ರಸ್ತೆ ಕಾಮಗಾರಿಯಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 

ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಸಚಿವರ ಪತ್ನಿ ವಿಜಯಾ ಹಾಗೂ ಆರ್.ಎಸ್.ಎಸ್ ಪ್ರಚಾರಕ ದೀಪಕ್ ದುಬೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಲ್ಲಾಪುರದ ಚಂದಗುಳಿ ಗಂಟೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಗೋಕರ್ಣಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಯಲ್ಲಾಪುರ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಆಗಮಿಸಬೇಕಾಗಿದ್ದವರು, ಕಡಿಮೆ ದೂರದ ಹಿನ್ನೆಲೆಯಲ್ಲಿ ಯಲ್ಲಾಪುರ ಹೊಸಕಂಬಿ ಗೋಕರ್ಣದ ಕಿರಿದಾದ ರಸ್ತೆಯಲ್ಲಿ ಆಗಮಿಸಿದ್ದರು. ಆ ವೇಳೆ ಬೆಂಗಾವಲು ವಾಹನ ಹಿಂದೆಯೇ ಇತ್ತು ಎನ್ನಲಾಗಿದೆ. ಆದರೆ ಮಾರ್ಗಮಧ್ಯೆ ಹೊಸಕಂಬಿ ಬಳಿ ರಸ್ತೆ ಕಾಮಗಾರಿ ಅರೆಬರೆಯಾಗಿತ್ತು. ವೇಗವಾಗಿ ಬಂದ ಕಾರಿನ ಗಾಲಿಗಳು ರಸ್ತೆ ಒಂದು ಬದಿ ಹೊಂಡಕ್ಕೆ ಬಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದು ಮರಕ್ಕೆ ಬಡಿದಿದೆ. 

ಕೂಡಲೇ ಸಚಿವರನ್ನು ಹಾಗೂ ಅವರ ಪತ್ನಿಯನ್ನು ಬೆಂಗಾವಲು ವಾಹನ ‌ಹಾಗೂ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಗಂಭೀರವಾಗಿ ಗಾಯಗೊಂಡಿದ್ದ ಸಚಿವರ ಪತ್ನಿ ವಿಜಯಾ ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದಾರೆ. ಬಳಿಕ ಆರ್‌.ಎಸ್.ಎಸ್ ಪ್ರಚಾರಕ ದೀಪಕ್ ದುಬೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ. ಸಚಿವ ಶ್ರೀಪಾದ್ ಎಡಗೈಗೆ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಗೋವಾದ ಬಾಂಬೋಲಿಗೆ ಸಾಗಿಸಲಾಗಿದೆ.

ಗಂಭೀರ ಗಾಯಗೊಂಡಿದ್ದ ಗನ್‌ಮ್ಯಾನ್ ತುಕಾರಾಮ ಪಾಟೀಲ್, ಚಾಲಕ ಚಂದನ್ ಹಾಗೂ ಸಾಯಿಕಿರಣ ಶೆಟಿಯಾ ಎಂಬುವವರಿಗೆ ಅಂಕೋಲಾ ಖಾಸಗಿ ಆಸ್ಪತ್ರೆಯಿಂದ ಕಾರವಾರ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ರಸ್ತೆ ಅರ್ಧಂಬರ್ಧ ಕಾಮಗಾರಿಯಲ್ಲಿದ್ದರೂ ಅಲ್ಲಿ ಯಾವುದೇ ರೀತಿಯ ಬ್ಯಾರಿಕೇಡ್ ಆಗಲೀ ಸೂಚನೆಗಳನ್ನು ಹಾಕಲಾಗಿರಲಿಲ್ಲ. ಘಟನೆ ಬಳಿಕ ಕೆಲ ಸ್ಥಳೀಯರು ಹಾಗೂ ಸಂಘಟನೆಗಳು ಅವೈಜ್ಞಾನಿಕ ರಸ್ತೆ ನಿರ್ಮಾಣವೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. 

ಶ್ರೀಪಾದ್ ಅವರ ಸಾಕಷ್ಟು ಸಂಬಂಧಿಕರು ಉತ್ತರ ಕನ್ನಡ ಭಾಗದವರೇ ಆಗಿದ್ದು, ಆಗಾಗಲ ಜಿಲ್ಲೆಗೆ ಭೇಟಿ ನೀಡುತ್ತಲೇ ಇರುತ್ತಾರೆ. 

ದುರ್ಘಟನೆ ಸಂಭವಿಸುವ ದಿನ ಶ್ರೀಪಾದ್ ನಾಯ್ಕ್ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಂಟೆ ಗಣಪತಿ‌ ದೇವಾಲಯಕ್ಕೆ ತೆರಳಿ‌ ವಿಶೇಷ ಪೂಜೆ ಸಲ್ಲಿಸಿದ್ರು. ಅಲ್ಲಿಯೆ ಕೆಲಹೊತ್ತು ತಂಗಿ ಧಾರ್ಮಿಕ ಕಾರ್ಯ ನೆರವೇರಿಸಿದರು, ಬಳಿಕ ಇನ್ನೊಂದು ಖಾಸಗಿ ಕಾರ್ಯಕ್ರಮದಲ್ಲಿ‌ ಭಾಗಿಯಾಗಿ‌ ಹೋಮ‌-ಹವನ ನೆರವೇರಿಸಿದ್ರು . ಈಶ್ವರ‌ ದೇವಾಲಯಕ್ಕೆ ತೆರಳಿ ಪೂಜೆ ನೆರವೇರಿಸಿದರು. ಹೀಗೆ ಯಲ್ಲಾಪುರದಲ್ಲಿ ಕಾರ್ಯಕ್ರಮ ಮುಗಿಸಿ ವಾಪಾಸ್ ಬರುತ್ತಾ ಗೋಕರ್ಣ ಮಹಾಬಲೇಶ್ವರ ದರ್ಶನ ಪಡೆದು ಗೋವಾಗೆ ಹೋದರಾಯಿತು ಎಂದು ಗೋಕರ್ಣ ಹೋಗುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *