

ಕೊನೆಗೂ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಸರ್ಕಸ್ ಮುಕ್ತಾಯವಾಗಿದ್ದು, 7 ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸುವುದಾಗಿ ಹೇಳಿದ್ದಾರೆ.
ಸಿದ್ದಾಪುರ,
ರಾಜ್ಯ ಸರಕಾರದಿಂದ ಕಳೆದ 10 ತಿಂಗಳುಗಳಿಂದ ಕೊರೊನಾ ನೆಪದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಬಿಜೆಪಿಯವರಿಗೆ ಅಧಿಕಾರವಿದ್ದರೂ ಜನಪರ ಕಾರ್ಯಗಳ ಬಗ್ಗೆ ಸಂಪೂರ್ಣ ನಿರ್ಲಕ್ಷ ಮಾಡುತ್ತಿದ್ದಾರೆ. ಬೆಲೆ ಏರಿಕೆ ಹೆಚ್ಚಾಗಿದೆ. ಕೊರೊನಾ ಕಾರಣದಿಂದ ಬಹುತೇಕ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕೇಂದ್ರ , ರಾಜ್ಯ ಸರಕಾರಗಳು ಗಮನ ಹರಿಸುತ್ತಿಲ್ಲ ಎಂದು ಕೆ.ಪಿ.ಸಿ.ಸಿ.ಸದಸ್ಯ ಪ್ರಶಾಂತ ದೇಶಪಾಂಡೆ ಆರೋಪಿಸಿದರು.
ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದವರಿಗೆ ಈವರೆಗೆ ಸೂಕ್ತ ಸೌಲಭ್ಯ ದೊರಕಿಲ್ಲ. ರಸ್ತೆಗಳು ಸಂಚಾರಕ್ಕೆ ಬಾರದಷ್ಟು ಅಯೋಗ್ಯವಾಗಿವೆ. ಒಟ್ಟಾರೆ ಅಭಿವೃದ್ಧಿಗೆ ಚಾಲನೆ ಸಿಗುತ್ತಿಲ್ಲ. ಇವನ್ನೆಲ್ಲ ಮುಂದಿಟ್ಟುಕೊಂಡು ಜನರ ಮುಂದೆ ಹೋಗಬೇಕಾಗಿದೆ. ಕಾಂಗ್ರೆಸ್ ಧುರೀಣರು, ಕಾರ್ಯಕರ್ತರು ಒಗ್ಗಟ್ಟಾಗಿ ಬಿಜೆಪಿ ಸರಕಾರದ ವಿಫಲತೆಯನ್ನು ಜನರ ಮುಂದಿಡಬೇಕಿದೆ ಎಂದರು.
ಗ್ರಾಪಂ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಿದ ಕಾರಣ ನಮ್ಮ ಪಕ್ಷದ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಗೊಂಡಿದ್ದಾರೆ. ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಎಲ್ಲ ಧುರೀಣರ ನೇತೃತ್ವದಲ್ಲಿ ಬರುವ ತಾಪಂ ಹಾಗೂ ಜಿಪಂ ಚುನಾವಣೆ ಎದುರಿಸುವ ಸಿದ್ಧತೆಗಳು ನಡೆಯುತ್ತಿವೆ. ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ರಾಜ್ಯಾದ್ಯಂತ ಹೆಚ್ಚು ಸಕ್ರೀಯರಾಗಿ ಪಕ್ಷದ ಸಂಘಟನೆ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಎಲ್ಲ ನಾಯಕರೂ ಪಕ್ಷದ ಸಂಘಟನೆ ಕುರಿತು ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುತ್ತಿದ್ದಾರೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಶಾಂತ ದೇಶಪಾಂಡೆ ಪಕ್ಷದ ಕುರಿತಾದ ವಿಚಾರಗಳು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಆಗಬೇಕು. ಬಹಿರಂಗ ಚರ್ಚೆಯಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ನಮಗೂ, ಬಿಜೆಪಿಗೂ ಇರುವ ವ್ಯತ್ಯಾಸವನ್ನು ತೋರಿಸಬೇಕು. ಈ ನಿಟ್ಟಿನಲ್ಲಿ ನಾಯಕರ ಪಾತ್ರ, ಜವಾಬ್ದಾರಿ ಹೆಚ್ಚಿನದು. ಸಫಲ ರಾಜಕಾರಣಿಯಾಗಲು ಜನರಿಗೆ ಸ್ಪಂದಿಸುವದು ಮುಖ್ಯ ಎಂದರು.
ಹಳಿಯಾಳದಲ್ಲಿ ಶಾಸಕ ಸ್ಥಾನಕ್ಕೆ ವೆಕೆನ್ಸಿ ಇಲ್ಲ. ಆರ್.ವಿ.ದೇಶಪಾಂಡೆ 8 ಬಾರಿ ಅಲ್ಲಿಂದ ಆಯ್ಕೆಯಾಗಿದ್ದಾರೆ. ಮುಂದೆಯೂ ಅವರೇ ಸ್ಪರ್ಧಿಸುತ್ತಾರೆ. ಈ ಮೊದಲು ಹಳಿಯಾಳ ಕ್ಷೇತ್ರಕ್ಕೆ ಮುಂಡಗೋಡ ಭಾಗ ಸೇರ್ಪಡೆಗೊಂಡಿತ್ತು. ದೇಶಪಾಂಡೆಯವರ ಗೆಲುವಿಗೆ ಸಹಕರಿಸಿತ್ತು. ಪಕ್ಷದ ಸಂಘಟನೆ ದೃಷ್ಟಿಯಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ. ರಾಜಕಾರಣದಲ್ಲಿ, ಪಕ್ಷದ ಕೆಲಸದಲ್ಲಿ ಸಕ್ರೀಯನಾಗಿದ್ದೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ, ಕಾಂಗ್ರೆಸ್ ವಕ್ತಾರ ದೀಪಕ ದೊಡ್ಡೂರು, ಪಕ್ಷದ ಧುರೀಣ ಜಿ.ವಿ.ಹೆಗಡೆ ಬಿಸಲಕೊಪ್ಪ, ರಾಜು ಕಟ್ಟೇಮನೆ,ಎಚ್.ಕೆ.ಶಿವಾನಂದ ಮುಂತಾದವರಿದ್ದರು.
- ಯಾವತ್ತೂ ನಾವು ಕಾಂಗ್ರೆಸ್ ಬೆಂಬಲಿಗರು. ಕಾಂಗ್ರೆಸ್ ಪಕ್ಷ ಪ್ರೀತಿ,ವಿಶ್ವಾಸ ಕೊಟ್ಟಿದೆ. ಇದನ್ನು ಬಿಟ್ಟು ಬೇರೆ ಪಕ್ಷಕ್ಕೆ ಯಾಕೆ ಹೋಗಬೇಕು? ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗೋದಿಲ್ಲ- ಪ್ರಶಾಂತ ದೇಶಪಾಂಡೆ
- ಸಿದ್ದಾಪುರ
ರಾಜ್ಯ ಅಮೇಚೂರ ಯೋಗ ಸ್ಪೋಟ್ರ್ಸ ಅಸೋಸಿಯೇಶನ್ ಡಿ.22ರಂದು ಆಯೋಜಿಸಿದ್ದ ರಾಜ್ಯ ಮಟ್ಟದ ಆನ್‍ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಸಿದ್ದಾಪುರದ ಯೋಗ ಶಿಕ್ಷಕ ಮಂಜುನಾಥ ಎಂ.ನಾಯ್ಕ ದ್ವಿತೀಯ ಸ್ಥಾನ ಪಡೆದು ಯೋಗ ಪೆಡರೇಶನ್ ಆಪ್ ಇಂಡಿಯಾ ಇವರು ಜ.30ರಂದು ನಡೆಸುವ ರಾಷ್ಟ್ರಮಟ್ಟದ ಆನ್ ಲೈನ್ ಯೋಗಾಸನ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.
ಕಳೆದ ವರ್ಷ ರಾಜಸ್ಥಾನದ ಜೈಪುರದಲ್ಲಿ ನಡೆದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮಂಜುನಾಥ ಎಂ. ನಾಯ್ಕ ದ್ವಿತೀಯ ಸ್ಥಾನಪಡೆದಿದ್ದರು.

ಬೆಂಗಳೂರು: ಕೊನೆಗೂ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಸರ್ಕಸ್ ಮುಕ್ತಾಯವಾಗಿದ್ದು, 7 ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸುವುದಾಗಿ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಘೋಷಣೆ ಮಾಡಿರುವಂತೆ ಉಮೇಶ್ ಕತ್ತಿ, ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ಅವರ ಹೆಸರನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

https://imasdk.googleapis.com/js/core/bridge3.433.1_debug_en.html#goog_1339546116
ಅದರಂತೆ ಬಿಜೆಪಿ ಸರ್ಕಾರ ರಚನೆಗೆ ಸಹಾಯವಾಗಿದ್ದ ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಜೊತೆಗೆ ಶಾಸಕರಾದ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಬಿಳಗಿ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಶಾಸಕ ಎಸ್.ಅಂಗಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಏಳು ಸಚಿವರಿಗೆ ಇಂದು ಮಧ್ಯಾಹ್ನ ವಜುಭಾಯಿ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ.
ನಾಗೇಶ್ ಗೆ ಕೊಕ್: ಮುನಿರತ್ನಕ್ಕಿಲ್ಲ ಸ್ಥಾನ
ಇದೇ ವೇಳೆ ಮುನಿರತ್ನಗೆ ಸಚಿವ ಸ್ಥಾನದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಯಾವುದೇ ಉತ್ತರ ಕೊಡದೆ ಯಡಿಯೂರಪ್ಪ ಮುಂದೆ ನಡೆದಿದ್ದಾರೆ. ಅಂತೆಯೇ ಅಬಕಾರಿ ಸಚಿವ ಎಚ್. ನಾಗೇಶ್ ಅವರನ್ನು ಸಂಪುಟದಿಂದ ಕೈ ಬಿಡಲು ನಿರ್ಧರಿಸಲಾಗಿದೆ. ಆದರೆ ಇಂದು ಅವರ ರಾಜೀನಾಮೆ ಪಡೆಯುವುದಿಲ್ಲ. ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ನಾಳೆ ರಾಜೀನಾಮೆ ಪಡೆಯುತ್ತೇನೆ ಎಂದು ಬಿಎಸ್ ವೈ ಹೇಳಿದರು.
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಈ ಬಾರಿ ಕೂಡ ಅವಕಾಶ ಸಿಕ್ಕಿಲ್ಲ. ವರಿಷ್ಠರ ಸೂಚನೆ ಮೇರೆಗೆ ಮುನಿರತ್ನ ಅವರಿಗೆ ಈ ಬಾರಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿಲ್ಲ ಎನ್ನಲಾಗಿದೆ. (kpc)
