![](https://i0.wp.com/samajamukhi.net/wp-content/uploads/2020/11/cong-s2.jpg?resize=820%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ…
![ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ DK Shivakumar](https://i0.wp.com/media.kannadaprabha.com/uploads/user/imagelibrary/2021/1/13/w900X450/DKS.jpg?w=760&ssl=1)
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಶಂಭು ಕೆ.ಶೆಟ್ಟಿ (ಕಾರವಾರ) ಸುಜಾತಾ ಗಾಂವ್ಕರ್ (ಅಂಕೋಲಾ) ರವೀಂದ್ರ ನಾಯ್ಕ (ಶಿರಸಿ) ಆಯ್ಕೆಯಾಗಿದ್ದಾರೆ. ಇವರೊಂದಿಗೆ ಶಿರಸಿಯ ದೀಪಕ್ ದೊಡ್ಡೂರು ಪುನರ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಕೆ.ಪಿ.ಸಿ.ಸಿ. ಇದರ ಪ್ರತಿಯೊಂದನ್ನು ಜಿಲ್ಲಾಧ್ಯಕ್ಷರಿಗೆ ರವಾನಿಸಿದೆ.
ಕಲಬುರಗಿ: ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ಕಲಬುರಗಿ ವಿಭಾಗದ ವಿಭಾಗೀಯ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಶಿವಕುಮಾರ್, ಯಾವುದೇ ಚುನಾವಣೆಯಲ್ಲಿ ಗೆಲ್ಲಲು ಜನರ ಹೃದಯ ಗೆಲ್ಲುವುದು ಅತ್ಯಂತ ಮುಖ್ಯ. ಇದಕ್ಕಾಗಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಒಂದಾಗಬೇಕು. ಯಾವುದೇ ವ್ಯಕ್ತಿಯನ್ನು ಆರಾಧಿಸುವುದಕ್ಕಿಂತ ಪಕ್ಷದ ಪೂಜೆ ಮತ್ತು ಅದರ ನೀತಿಗಳನ್ನು ಪಾಲಿಸುವುದು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್‌ನಲ್ಲಿ ಎಲ್ಲರೂ ಸಮಾನರು ಎಂದು ಹೇಳಿದರು.
![](https://i0.wp.com/samajamukhi.net/wp-content/uploads/2020/12/IMG-20201231-WA0013.jpg?resize=580%2C580&ssl=1)
https://imasdk.googleapis.com/js/core/bridge3.433.2_en.html#goog_1148052933VideoCopy video urlPlay / PauseMute / UnmuteReport a problemLanguageMox Playeradvertisement
![](https://i0.wp.com/samajamukhi.net/wp-content/uploads/2020/12/IMG-20201230-WA0074.jpg?resize=723%2C1024&ssl=1)
![](https://i0.wp.com/samajamukhi.net/wp-content/uploads/2020/12/IMG-20201225-WA0033.jpg?resize=760%2C537&ssl=1)
ಕಾಂಗ್ರೆಸ್ ಕಾರ್ಯಕರ್ತರು ಜನರ ಬಳಿಗೆ ಹೋಗಿ, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವುಗಳನ್ನು ಪರಿಹರಿಸಲು ಹೋರಾಟ ನಡೆಸಬೇಕು ಎಂದು ಶಿವಕುಮಾರ್ ಕರೆ ನೀಡಿದರು.
ರೈತರು, ದೀನ ದಲಿತರು ಮತ್ತು ಕಾರ್ಮಿಕ ವರ್ಗ ಸೇರಿದಂತೆ ಸಾಮಾನ್ಯರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಜನರಿಗೆ ಹತ್ತಿರವಾಗಲು ಕಾಂಗ್ರೆಸ್ ಪಂಚಾಯತ್ ಮತ್ತು ಬೂತ್ ಮಟ್ಟದ ಸಮಿತಿಗಳನ್ನು ರಚಿಸುತ್ತದೆ. ಇದು ಡಿಜಿಟಲ್ ಯುಗವಾದ್ದರಿಂದ, ಮಾಧ್ಯಮಗಳಿಗೆ, ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ವಿದ್ಯಾವಂತ ಯುವಕರನ್ನು ಬೂತ್ ಮಟ್ಟದಲ್ಲಿ ನೇಮಿಸಬೇಕು ಎಂದು ಅವರು ಒತ್ತಿ ಹೇಳಿದರು. (kpc)
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)