4 ಜನ ಉ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರರು, ಚುನಾವಣೆ ಗೆಲ್ಲಲು ಜನರ ಹೃದಯ ಗೆಲ್ಲುವುದು ಅತ್ಯಂತ ಮುಖ್ಯ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ…

DK Shivakumar

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಶಂಭು ಕೆ.ಶೆಟ್ಟಿ (ಕಾರವಾರ) ಸುಜಾತಾ ಗಾಂವ್ಕರ್ (ಅಂಕೋಲಾ) ರವೀಂದ್ರ ನಾಯ್ಕ (ಶಿರಸಿ) ಆಯ್ಕೆಯಾಗಿದ್ದಾರೆ. ಇವರೊಂದಿಗೆ ಶಿರಸಿಯ ದೀಪಕ್ ದೊಡ್ಡೂರು ಪುನರ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಕೆ.ಪಿ.ಸಿ.ಸಿ. ಇದರ ಪ್ರತಿಯೊಂದನ್ನು ಜಿಲ್ಲಾಧ್ಯಕ್ಷರಿಗೆ ರವಾನಿಸಿದೆ.

ಕಲಬುರಗಿ: ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಕಲಬುರಗಿ ವಿಭಾಗದ ವಿಭಾಗೀಯ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಶಿವಕುಮಾರ್, ಯಾವುದೇ ಚುನಾವಣೆಯಲ್ಲಿ ಗೆಲ್ಲಲು ಜನರ ಹೃದಯ ಗೆಲ್ಲುವುದು ಅತ್ಯಂತ ಮುಖ್ಯ. ಇದಕ್ಕಾಗಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಒಂದಾಗಬೇಕು. ಯಾವುದೇ ವ್ಯಕ್ತಿಯನ್ನು ಆರಾಧಿಸುವುದಕ್ಕಿಂತ ಪಕ್ಷದ ಪೂಜೆ ಮತ್ತು ಅದರ ನೀತಿಗಳನ್ನು ಪಾಲಿಸುವುದು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್‌ನಲ್ಲಿ ಎಲ್ಲರೂ ಸಮಾನರು ಎಂದು ಹೇಳಿದರು.

https://imasdk.googleapis.com/js/core/bridge3.433.2_en.html#goog_1148052933VideoCopy video urlPlay / PauseMute / UnmuteReport a problemLanguageMox Playeradvertisement

ಕಾಂಗ್ರೆಸ್ ಕಾರ್ಯಕರ್ತರು ಜನರ ಬಳಿಗೆ ಹೋಗಿ, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅವುಗಳನ್ನು ಪರಿಹರಿಸಲು ಹೋರಾಟ ನಡೆಸಬೇಕು ಎಂದು ಶಿವಕುಮಾರ್ ಕರೆ ನೀಡಿದರು.

ರೈತರು, ದೀನ ದಲಿತರು ಮತ್ತು ಕಾರ್ಮಿಕ ವರ್ಗ ಸೇರಿದಂತೆ ಸಾಮಾನ್ಯರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಜನರಿಗೆ ಹತ್ತಿರವಾಗಲು ಕಾಂಗ್ರೆಸ್ ಪಂಚಾಯತ್ ಮತ್ತು ಬೂತ್ ಮಟ್ಟದ ಸಮಿತಿಗಳನ್ನು ರಚಿಸುತ್ತದೆ. ಇದು ಡಿಜಿಟಲ್ ಯುಗವಾದ್ದರಿಂದ, ಮಾಧ್ಯಮಗಳಿಗೆ, ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ವಿದ್ಯಾವಂತ ಯುವಕರನ್ನು ಬೂತ್ ಮಟ್ಟದಲ್ಲಿ ನೇಮಿಸಬೇಕು ಎಂದು ಅವರು ಒತ್ತಿ ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *