

ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರುಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ.

ರಾಜಭವನ ಚಲೋ, ರೈತ ವಿರೋಧಿ ಸರ್ಕಾರದ ಅಂತ್ಯಕ್ಕೆ ಮುನ್ನುಡಿ: ಪ್ರಿಯಾಂಕ್ ಖರ್ಗೆ
ಕೇಂದ್ರ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದಿಂದ ನಡೆಸಲಾಗುತ್ತಿರುವ ರಾಜಭವನ ಚಲೋ ಪ್ರತಿಭಟನೆ ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಕಲಬುರಗಿ: ಕೇಂದ್ರ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದಿಂದ ನಡೆಸಲಾಗುತ್ತಿರುವ ರಾಜಭವನ ಚಲೋ ಪ್ರತಿಭಟನೆ ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ರೈತರ ಈ ಹೋರಾಟ ಕಠಿಣವಾದ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆಯುವವರೆಗೆ ನಿಲ್ಲುವುದಿಲ್ಲ ಎಂದು ಎಚ್ಚರಿಸಿರುವ ಅವರು, ರಾಜಭವನ ಚಲೋ ಕಾರ್ಯಕ್ರಮ ರೈತವಿರೋಧಿ ಸರಕಾರ ಕೊನೆಗಾಣಿಸಲು ಮುನ್ನುಡಿಯಾಗಲಿದೆ ಎಂದು ಬರೆದಿದ್ದಾರೆ. ಈ ಮೂಲಕ ರಾಜಭವನ ಚಲೋ ಪ್ರತಿಭಟನೆಯ ಫೋಟೋಗಳನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರುಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಗೆ ಇವರುಗಳನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ದೆಹಲಿ ಕಾಂಗ್ರೆಸ್ ಮುಖ್ಯ ಘಟಕ ಆದೇಶಿಸಿದೆ.
ಇಗಾಗಲೇ ಕೆಪಿಸಿಸಿನಲ್ಲಿ ಸತೀಶ್ ಜಾರಕಿಹೊಳಿ, ಸಲೀಂ ಇಬ್ರಾಹಿಂ ಮತ್ತು ಈಶ್ವರ್ ಖಂಡ್ರೆ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಇದೀಗ ರಾಮಲಿಂಗಾ ರೆಡ್ಡಿ ಹಾಗೂ ಧ್ರುವ ನಾರಾಯಣ್ ಇನ್ನಿಬ್ಬರು ಹೊಸ ಕಾರ್ಯಾಧ್ಯಕ್ಷರಾಗುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಕೈ ಪಾಳಯ ಯೋಜಿಸಿದೆ ಎನ್ನಲಾಗಿದೆ. (kpc)
