ಯಾರೀತ ಮಂಜುನಾಥ ಅದ್ದೆ….?

ಎಂ.ಮಂಜುನಾಥ ಅದ್ದೆಯ ವ್ಯಯಕ್ತಿಕ,ಪತ್ರಿಕೋದ್ಯಮ ಬರಹಗಳೂ ಹಾಗೂ ಸಾಹಿತ್ಯಕ ಬದುಕು ಮತ್ತು ಸಾಮಾಜಿಕ ಹೋರಾಟಗಳ ಜೀವನವೂ..!

ಪತ್ರಿಕೋದ್ಯಮ, ಸಾಹಿತ್ಯ, ಹೋರಾಟ- ಈ ಮೂರೂ ದೋಣಿಗಳಲ್ಲಿ ಪಯಣಿಸುತ್ತಿರುವ ಮಂಜುನಾಥ ಅದ್ದೆ ಅವರದ್ದು ಪ್ರತಿಭಾವಂತ ವ್ಯಕ್ತಿತ್ವ. ಬೆಂಗಳೂರು ಉತ್ತರ ತಾಲ್ಲೂಕಿನ ಅದ್ದೆ ಗ್ರಾಮದವನಾದ ಮಂಜುನಾಥ ಅದ್ದೆ ಮೂಲತಃ ಕೃಷಿಕ ಕುಟುಂಬಕ್ಕೆ ಸೇರಿದವರು. 1973ರ ನಡುಭಾಗದಲ್ಲಿ ಹುಟ್ಟಿದ ಮಂಜುನಾಥ ಅದ್ದೆಯ ತಂದೆ ಮುನಿಹನುಮಯ್ಯ, ತಾಯಿ-ಲಕ್ಷ್ಮಮ್ಮ ಅಂತ.ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಎಂ.ಎ.ಸ್ನಾತಕೋತ್ತರ ಪದವಿ ಪಡೆದ ನಂತರ ಬದುಕಿನ ಮಾರ್ಗದ ಬಗ್ಗೆ ಮಂಜುನಾಥ ಅದ್ದೆಗೆ ಗೊಂದಲಗಳೇ ಇರಲಿಲ್ಲ. ದೊಡ್ಡಬಳ್ಳಾಪುರದ ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಎರಡು ವರ್ಷಗಳ ಕಾಲ ಉಪನ್ಯಾಸಕನಾಗಿ ಕಾರ್ಯ ನಿರ್ವಹಿಸಿದ್ದರು. ಈ ಹೊತ್ತಿಗಾಗಲೇ ಸಮಾಜಮುಖಿ ಚಳವಳಿ, ಹೋರಾಟಗಳಲ್ಲಿ ತೊಡಗಿಕೊಂಡಿದ್ದ ಮಂಜುನಾಥ ಅದ್ದೆ ಹಲವು ಸಂಸ್ಥೆಗಳನ್ನು ಹುಟ್ಟುಹಾಕಿದ್ದ. ತನ್ನೊಳಗಿನ ವಿಚಾರಗಳನ್ನು ಲೋಕದೊಡನೆ ಹಂಚಿಕೊಳ್ಳಲು ಪತ್ರಿಕೆಯೇ ಸೂಕ್ತ ಅನ್ನಿಸಿದಾಗ ಪತ್ರಿಕೋದ್ಯಮಕ್ಕೆ ನೇರವಾಗಿ ಪ್ರವೇಶಿಸಿದರು.

1997 ರಲ್ಲಿ ಪತ್ರಿಕಾ ಜಗತ್ತಿಗೆ ಕಾಲಿಟ್ಟ ಮಂಜುನಾಥ ಅದ್ದೆ ಗುಂಪಿನಲ್ಲಿ ಕರಗಿಹೋಗಲಿಲ್ಲ. ಅಲ್ಲೂ ಅವರು ಪ್ರತ್ಯೇಕವಾಗಿಯೇ ಕಾಣಿಸಿಕೊಂಡರು. ಸರ್ಕಾರ, ರಾಜಕಾರಣ, ಅಧಿಕಾರಶಾಹಿ, ಸಂಸ್ಥೆಗಳು- ಹೀಗೆ ಯಾವುದೇ ಪ್ರಕಾರಕ್ಕೆ ಸೇರಿದ ಅವ್ಯವಹಾರಗಳನ್ನು ನಿರ್ದಾಕ್ಷಿಣ್ಯವಾಗಿ ತನ್ನ ಹರಿತ ಬರಹಗಳ ಮೂಲಕ ಒಂದು ನಮೂನೆ ದಾಳಿ ನಡೆಸುತ್ತಲೇ ಬಂದಿದ್ದಾರೆ.

ಮಂಜುನಾಥ್ ಅದ್ದೆ ಅವರಲ್ಲಿನ ಮಾನವೀಯ ಸೆಲೆಯ ಹನಿಗಳನ್ನು ಪುಸ್ತಕಗಳ ಮೂಲಕವೂ ಹೊರಹಾಕಿದ್ದಾರೆ. ‘ಒಡಲ ತುಡಿತಕ್ಕೆ ಕೇಡು’ ‘ಗಾಳಿ-ಗಮಲು’, ‘ಸಾಮುದಾಹಯಿಕ ಭೂಮಿ ಮತ್ತು ಜನಜೀವನ’, ‘ಕನ್ನಡಿ ಕಣ್ಣು’, ‘ಈತಕ್ಕೆ- ಈತರ’, ‘ಕಣ್ಣಂಚಿನ ಚಿತ್ರಗಳು’, ಹಾಗೂ ‘ಮಾತಿಗೆ ಮಾತು’ ಕೃತಿಗಳ ಮೂಲಕ ಅವರ ಚಿಂತನೆ ಧಾರೆಧಾರೆಯಾಗಿ ಹರಿದಿದೆ. ಪತ್ರಕರ್ತನಾಗಿ, ಸಾಹಿತಿಯಾಗಿಯೂ ಗುರುತಿಸಿಕೊಂಡಿದ್ದಾರಲ್ಲದೇ ಖೋ-ಖೋ ಕ್ರೀಡಾಪಟುವಾಗಿಯೂ ಮೊದಲು ಬೆಸ್ಟ್ ಜ್ಯೂನಿಯರ್ ಪ್ಲೇಯರ್ ರಾಜ್ಯ ಪ್ರಶಸ್ತಿ ಪಡೆದಿದ್ದ ಮಂಜುನಾಥ ಅದ್ದೆಗೆ ಆನಂತರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ.

ಅವರ ‘ಒಡಲ ತುಡಿತಕ್ಕೆ ಕೇಡು’ ಕೃತಿಗೆ 2008 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ‘ಗಾಳಿ-ಗಮಲು’ ಕೃತಿಗೆ 2010 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಪತ್ರಿಕೋದ್ಯಮದ ಸೇವೆಗಾಗಿ 2014 ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಹಲವಾರು ಗೌರವ ಪ್ರಶಸ್ತಿಗಳು ಮಂಜುನಾಥ ಅದ್ದೆಯನ್ನು ಹುಡುಕಿಕೊಂಡು ಬಂದಿವೆ.ಹೀಗೆಯೇ ಸಾಗುವ ಮಂಜುನಾಥ ಅದ್ದೆಯ ವ್ಯಯಕ್ತಿಕ ಜೀವನ, ಸಾಹಿತ್ಯಿಕ ಪಯಣ, ಅಲ್ಲದೇ ಸಾಮಾಜಿಕ ಹೋರಾಟಗಳ ಯಾತ್ರೆ ಸಾಗುತ್ತದೆ…!ಈಗ ಮಂಜುನಾಥ ಅದ್ದೆಯ ‘ಒಡಲ ತುಡಿತಕ್ಕೆ ಕೇಡು’ ಎಂಬ ಸಂಶೋಧನಾ ಪ್ರಬಂಧದ ಬಗೆಗೆ ನೋಡೋಣ…

‘ಒಡಲ ತುಡಿತಕ್ಕೆ ಕೇಡು’ ಎಂಬ ಪ್ರಬಂಧದ ವಿಚಾರ..!ಮಂಜುನಾಥ ಎಂ. ಅದ್ದೆಯ ಸಂಶೋಧನಾ ಪ್ರಬಂಧ ಕೃತಿ ‘ಒಡಲ ತುಡಿತಕ್ಕೆ ಕೇಡು’ ಎಂಬುದು. ‘ವರದಕ್ಷಿಣೆ ಎಂಬುದು ಹುಟ್ಟದಿರುವ ಹೆಣ್ಣುಮಗುವಿಗೂ ಕಡುವೈರಿ‘. ಅತಿ ಹೆಚ್ಚು ಹೆಣ್ಣು ಭ್ರೂಣಹತ್ಯೆ ನಡೆಯುವ ಜಿಲ್ಲೆಗಳಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನದಲ್ಲಿರುವ ಮಂಡ್ಯ ಜಿಲ್ಲೆ ಕ್ಷೇತ್ರಕಾರ್ಯ ಸಂದರ್ಭದಲ್ಲಿ ಕಂಡುಕೊಂಡ ಅಂಶವಿದು ಎಂದು ಪುಸ್ತಕದ ಮುನ್ನುಡಿಯಲ್ಲಿ ವಿಮೋಚನಾ ಮಹಿಳಾ ಹಕ್ಕುಗಳ ವೇದಿಕೆಯ ಡೋನಾ ಫರ್ನಾಂಡೀಸ್ ಹೇಳುತ್ತಾ ಹೊಗುತ್ತಾರೆ.

ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳಿಗೆ ಕಾರಣಗಳೇನು ಎಂಬುದನ್ನು ಕ್ಷೇತ್ರ ಕಾರ್ಯ ಆಧರಿಸಿದ ಅಧ್ಯಯನದಲ್ಲಿ ಕಂಡುಕೊಂಡ ಅಂಶಗಳನ್ನು ಈ ಕೃತಿ ವಿವರವಾಗಿ ದಾಖಲಿಸಿದೆ. `ಮಂಡ್ಯದ ಏಳು ತಾಲ್ಲೂಕುಗಳ ನೂರಾರು ಹಳ್ಳಿಗಳಲ್ಲಿ ಎಲ್ಲ ವಯೋಮಾನದ ಜನರೂ ಹೆಣ್ಣು ಭ್ರೂಣ ಹತ್ಯೆಗೆ ಕೊಡುವ ದೊಡ್ಡ ಕಾರಣವೆಂದರೆ ವರದಕ್ಷಿಣೆಯಾಗಿದೆ. ತಮ್ಮ ಹೆಣ್ಣುಮಗಳ ಮದುವೆಗಾಗಿ ಸಾಲ ಮಾಡಿ ನರಳುವ, ಅದಕ್ಕಾಗಿ ಇದ್ದ ಹೊಲ ಗದ್ದೆ ಕಳೆದುಕೊಂಡು ನರಳುವ ಜನರು ಮಂಡ್ಯದ ಗ್ರಾಮೀಣ ಭಾಗದಲ್ಲಿ ಸರ್ವೇ ಸಾಮಾನ್ಯ ಎಂದು ಇಲ್ಲಿ ವಿಶ್ಲೇಷಿಸಲಾಗಿದೆ.ಆಧುನಿಕ ಅಭಿವೃದ್ಧಿಯ ನೀತಿಗಳು ಆಳದಲ್ಲಿ ಜನಮಾನಸವನ್ನು ಕಂಗೆಡಿಸುವಂತಹದಾಗಿರುತ್ತದೆ. ಕೃಷ್ಣರಾಜಸಾಗರದ ನೀರಾವರಿಗೆ ಬೃಹತ್ ವಿಸ್ತರಣೆ ಸಿಕ್ಕಂತೆಲ್ಲಾ ಸಾಮಾಜಿಕ ಬದುಕಿನಲ್ಲಿ ತಮಗಿದ್ದ ಪಾತ್ರ ಮತ್ತು ಮನ್ನಣೆ ಎರಡನ್ನೂ ಮಂಡ್ಯದ ಮಹಿಳಾ ಸಂಕುಲ ಕಳೆದುಕೊಳ್ಳುತ್ತಾ ಬಂದಿದೆ ಎಂಬುದನ್ನೂ ಈ ಕೃತಿ ಗುರುತಿಸುತ್ತದೆ. ಇದೇ ರೀತಿ ಸರಿಸುಮಾರು ಸಂಪೂರ್ಣವಾಗಿ ನೀರಾವರಿಗೆ ಒಳಗಾಗಿರುವ ಸಕ್ಕರೆಯ ಕಣಜ ಬೆಳಗಾವಿ ಜಿಲ್ಲೆ ಅತಿ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವ ಜಿಲ್ಲೆಯಾಗಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಆಸಕ್ತಿಯ ಸಂಗತಿ ಎಂದರೆ, 0-6 ವಯೋಮಾನದ ಗಂಡು-ಹೆಣ್ಣು ಮಕ್ಕಳ ಅನುಪಾತ ಹೆಚ್ಚಿರುವ ಜಿಲ್ಲೆಗಳಲ್ಲಿ ಕೊಡಗು ಮೊದಲ ಸ್ಥಾನ ಪಡೆದರೆ ಕೋಲಾರ ಎರಡನೆಯ ಸ್ಥಾನ ಪಡೆದಿದೆ. ‘ವೈದಿಕ ಧರ್ಮಕ್ಕೆ ಹೊರತಾದ ಕೊಡವ ಸಂಸ್ಕೃತಿಯನ್ನು ಹೊಂದಿರುವ ಕೊಡಗು ಹಾಗೂ ವೈದಿಕ ಧರ್ಮಕ್ಕೆ ಪಾರಂಪರಿಕವಾಗಿ ಸೆಡ್ಡು ಹೊಡೆದಿರುವ ಪರಿಶಿಷ್ಟ ಜಾತಿಗಳು ಹೆಚ್ಚಾಗಿರುವ ಕೋಲಾರದಲ್ಲಿ ಹೆಂಗಸರ ಸಂಖ್ಯೆ ಹೆಚ್ಚಾಗಿ ಇರುವುದು ಸಾಮಾಜಿಕವಾಗಿ ಅತಿ ಮಹತ್ವದ ವಿಚಾರವಾಗಿದೆ‘.

ಇದೇ ರೀತಿ ಹುಣಸೂರು ತಾಲ್ಲೂಕಿನಲ್ಲಿ 1000 ಗಂಡು ಮಕ್ಕಳಿಗೆ 1009 ಹೆಣ್ಣು ಮಕ್ಕಳಿರುವ ಸಕಾರಾತ್ಮಕ ಪ್ರವೃತ್ತಿಗೆ, ಈ ಪ್ರದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಆದಿವಾಸಿ ಜನಸಮುದಾಯದ ಕೊಡುಗೆ ಕಾರಣ ಎಂಬಂತಹ ಹೆಚ್ಚಿನ ಸಾಮಾಜಿಕ ಅಧ್ಯಯನಗಳಿಗೆ ಪ್ರೇರಕವಾಗಬಹುದಾದ ಅಂಶಗಳನ್ನೂ, ಈ ಕೃತಿಯಲ್ಲಿ ಚರ್ಚಿಸಲಾಗಿದೆ.ಇಲ್ಲಿ ದಾಖಲಾಗಿರುವ ಮಂಡ್ಯ ಜಿಲ್ಲೆಯ ಏಳೂ ತಾಲ್ಲೂಕುಗಳಲ್ಲಿ ನಡೆದಿರುವ ಹೆಣ್ಣು ಭ್ರೂಣಹತ್ಯೆಗಳ ವೈವಿಧ್ಯಮಯ ಪ್ರಕರಣಗಳು ಮತ್ತು ಪುತ್ರ ವ್ಯಾಮೋಹದ ನೈಜ ಕಥೆಗಳು ಬೆಚ್ಚಿ ಬೀಳಿಸುವಂತಿವೆ. ಹೆಣ್ಣು ಭ್ರೂಣಹತ್ಯೆ ಪಿಡುಗಾಗಿ ಬೆಳೆಯುತ್ತಿರುವುದಕ್ಕೆ ತಂತ್ರಜ್ಞಾನದ ಕೊಡುಗೆಗಳು, ನರ್ಸಿಂಗ್ ಹೋಮ್ ಗಳ ಪಾತ್ರ, ಕಾನೂನಿನ ಮಿತಿ ಹಾಗೂ ಈ ಪಿಡುಗಿನ ವಿರುದ್ಧ ನಡೆಯುತ್ತಿರುವ ಹೋರಾಟಗಳ ಚಿತ್ರಣವನ್ನೂ ಈ ಕೃತಿ ಕಟ್ಟಿ ಕೊಡುತ್ತದೆ. ಕಳೆದ ಎರಡೂವರೆ ದಶಕಗಳಲ್ಲಿ ಆಧುನಿಕ ಭಾರತವು ಪಿಡುಗಾಗಿ ತೀರಾ ನಲುಗಿದೆ. ಅಲ್ಲದೇ ಹೆಣ್ಣು ಭ್ರೂಣ ಹತ್ಯೆ ಬೆಳೆದ ಬಗೆಯ ಅವಲೋಕನ ಇಲ್ಲಿದೆ. ಜಾಗತಿಕ ನೋಟದಿಂದ ಹಿಡಿದು ಭಾರತದಲ್ಲಿ ಇದು ಆವರಿಸಿದ ರೀತಿಯ ಹಿನ್ನೋಟವೂ ಇದೆ. `ಇಂದಿಗೂ ಈ ಪಿಡುಗಿನ ವಿರುದ್ಧ ಇರುವ ಪಿಸಿ ಹಾಗೂ ಪಿಎನ್ಡಿಟಿ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ಬಂದಿಲ್ಲ. ದೇಶದ ಉದ್ದಕ್ಕೆ ಹೆಣ್ಣು ಭ್ರೂಣಹತ್ಯೆಯ ಪ್ರಕರಣಗಳನ್ನು ಕಾನೂನಿನ ಅಡಿಯಲ್ಲಿ ದಾಖಲಿಸಿಕೊಂಡು ಸರಿಯಾದ ಕ್ರಮದಲ್ಲಿ ವಿಚಾರಣೆ ನಡೆಸಿದ ಒಬ್ಬ ಜಿಲ್ಲಾ ಆರೋಗ್ಯ ಅಧಿಕಾರಿಯೂ ನಮಗೆ ನೋಡಲು ಸಿಗುವುದಿಲ್ಲ. ಈ ಕಾಯ್ದೆಯ ಅಡಿಯಲ್ಲೆ ಹೆಣ್ಣು ಭ್ರೂಣ ಹತ್ಯೆಗಳು ಅಬಾಧಿತವಾಗಿ ನಡೆಯುತ್ತಲೇ ಇವೆ ಎಂದು ಹೇಳುವ ಈ ಪುಸ್ತಕ ಹೆಣ್ಣು ಮಗುವಿನ ಉಳಿವಿನ ಬಗ್ಗೆ ಚಿಂತನೆಗೆ ಪ್ರೇರೇಪಿಸುತ್ತದೆ. ಮಂಜುನಾಥ ಅದ್ದೆಯ ಈ ಮಹತ್ವದ ಕೃತಿಗೆ 2008ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಲಭಿಸಿತು.

ಹೀಗೆಯೇ ಸಾಗುತ್ತದೆ ಎಂ.ಮಂಜುನಾಥ ಅದ್ದೆಯ ವ್ಯಯಕ್ತಿಕ ಬದುಕು, ಸಾಹಿತ್ಯಕ ಬರಹದ, ಸಾಮಾಜಿಕ ಹೋರಾಟದ ಬದುಕು..!ಆನಂತರ ಗೆಳೆಯ ಮತ್ತು ನನ್ನ ಅಣ್ಣ ಎಂ.ಮಂಜುನಾಥ ಅದ್ದೆಯ ಉಳಿದ ಕೃತಿಗಳ ಬಗೆಗೆ ನೋಡೋಣ…#

– ಕೆ.ಶಿವು.ಲಕ್ಕಣ್ಣವರ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *