ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರೀ ಅವಘಡದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ; 9 ಕಾರ್ಮಿಕರ ಸಾವು
ನೆರೆಯ ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ಹೋಗುತ್ತಿದ್ದ 9 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಹೈದರಾಬಾದ್: ನೆರೆಯ ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ಹೋಗುತ್ತಿದ್ದ 9 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ತೆಲಂಗಾಣದ ನಲ್ಗೊಂಡ ಜಿಲ್ಲೆಯ ದೇವರಕೊಂಡಮಂಡಲದ ಪೆದ್ದಅಡಿಶರ್ಲಪಲ್ಲಿಯ ಅಂಗಡಿಪೇಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ಕಂಟೇನರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 9 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಕಾರ್ಮಿಕರೆಲ್ಲರೂ ಚಿಂತಬಾವಿ ಗ್ರಾಮದ ನಿವಾಸಿಗಳಾಗಿದ್ದು, ಕೂಲಿ ಕೆಲಸ ಮುಗಿಸಿಕೊಂಡು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಹಲವರಿಗೆ ಗಂಭೀರಗಾಯಗಳಾಗಿದ್ದು, ಎಲ್ಲರನ್ನೂ ದೇವರಕೊಂಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರನ್ನು ಆಟೊ ಚಾಲಕ ಮಲ್ಲೇಶ, ಕೂಲಿಗಳಾದ ನೋಮಲ ಪೆದ್ದಮ್ಮ, ನೋಮಲ ಸೈದಮ್ಮ, ಕೊಟ್ಟಂ ಪೆದ್ದಮ್ಮ, ಗೊಡುಗು ಇದ್ದಮ್ಮ, ಮಲ್ಲಮ್ಮ, ಅಂಜಮ್ಮ ಎಂದು ಗುರುತಿಸಲಾಗಿದೆ. ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆಟೊದಲ್ಲಿ 20ಕ್ಕೂ ಹೆಚ್ಚು ಜನರು ಇದ್ದರು ಎಂದು ತಿಳಿದುಬಂದಿದೆ.
shimoga blast- ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರೀ ಅವಘಡದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ಸಂಭವಿಸಿರುವ ಸ್ಫೋಟ ಘಟನೆಯಲ್ಲಿ ಹಲವಾರು ಜೀವ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಎಲ್ಲಾ ರೀತಿ ಪರಿಹಾರಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.
ಇದರಂತೆ ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು, ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಡೈನಾಮೈಟ್ ಲಾರಿ ಸ್ಫೋಟಗೊಂಡು 6ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಕುಟಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಈ ದುರ್ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ಟೀಟ್ ಮಾಡಿ, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಭವಿಷ್ಯದಲ್ಲಿ ಈ ರೀತಿಯ ದುರಂತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ. ದುರಂತದ ಬಗ್ಗೆ ಆಳವಾದ ತನಿಖೆಯ ಆಗಬೇಕಿದೆ ಎಂದು ತಿಳಿಸಿದ್ದಾರೆ.
ಮಲೆನಾಡಿನಲ್ಲಿ ಕೇಳಿದ ಭಾರೀ ಶಬ್ಧಕ್ಕೆ ಇದೇ ಕಾರಣ ಎಂದು ಹೇಳಲಾಗುತ್ತಿದೆ. ಲಾರಿಯೊಂದಕ್ಕೆ ತುಂಬಿದ್ದ ಜೆಲಿಟಿನ್ ಸ್ಫೋಟಗೊಂಡು ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸ್ಪಷ್ಟ ಚಿತ್ರಣಗಳು ಇನ್ನಷ್ಟೇ ಸಿಗಬೇಕಿದೆ.
ಶಿವಮೊಗ್ಗ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದರ ಒಂದು ಭಾಗವಾಯಿಯೇ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ಸ್ಫೋಟದಿಂದಾಗಿಯೇ ಭಾರೀ ಬೆಳಕು ಮತ್ತು ಶಬ್ದ ಬಂದಿದೆ ಎಂದು ಇದೀಗ ಊಹಿಸಲಾಗುತ್ತಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಶಿವಮೊಗ್ಗ ಕೇಂದ್ರವಾಗಿರಿಸಿಕೊಂಡು ಈ ಸ್ಫೋಟ ಸಂಭವಿಸಿತು. ಆದರೆ, ಆ ಬಳಿಕ ಈ ಸ್ಫೋಟದ ಮೂಲ ತಿಳಿಯಿತು. ಈ ಘಟನೆಯಲ್ಲಿ ಸುಮಾರು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ. ಘಟನೆ ನಡೆದ ಸ್ಥಳದಲ್ಲಿ ಎಲ್ಲೆಂದ ರಲ್ಲಿ ಛಿದ್ರವಾದ ದೇಹದ ಚೂರುಗಳು ಕಾಣಿಸುತ್ತಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಕತ್ತಲು ಅವರಿಸಿದೆ. ಶಿವಮೊಗ್ಗ ಸುತ್ತಮುಕ್ಕ ಅಕ್ರಮ ಗಲ್ಲು ಗಣಿಗಾರಿಕೆ ಸಾಕಷ್ಟು ಪ್ರಮಾಣದಲ್ಲಿ ನಡೆಯುತ್ತಿದ್ದು, ಕೆಲವೊಮ್ಮೆ ದಾಳಿ ಕೂಡ ನಡೆದಿತ್ತು. ಆದರೂ ಇದನ್ನು ಮೀರಿ ಈ ರೀತಿಯ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಸ್ಥಳೀಯರು ಬದಲಾಗಿ ಬಿಹಾರಿ ಕಾರ್ಮಿಕರನ್ನೇ ಹೆಚ್ಚಾಗಿ ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಹೀಗಾಗಿ ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಬಿಹಾರಿ ಕಾರ್ಮಿಕರೇ ಹೆಚ್ಚಾಗಿದ್ದಾರೆಂದು ಹೇಳಲಾಗುತ್ತಿದೆ. ಇದೀಗ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. (kpc)