

https://www.youtube.com/watch?v=0kOKQ9Xrn9k&t=134s
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ
ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದಾರೆ.
ಈ ಸಂಬಂಧ ಶುಕ್ರವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ತಿಳಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನು ಬಳಿಗಾರ್ ಅವರು, ಹಾವೇರಿಯಲ್ಲಿ ಫೆಬ್ರವರಿ 26ರಿಂದ 28ರವರೆಗೆ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
‘ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ, ಎಸ್.ಆರ್. ಗುಂಜಾಳ್, ಕೆ.ಎಸ್. ಭಗವಾನ್ ಸೇರಿದಂತೆ ವಿವಿಧ ಸಾಹಿತಿಗಳ ಹೆಸರು ಚರ್ಚೆಗೆ ಬಂದಿದ್ದವು. ಅಂತಿಮವಾಗಿ ದೊಡ್ಡರಂಗೇಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಮನು ಬಳಿಗಾರ್ ತಿಳಿಸಿದರು.
ಪ್ರತಿಭೆ ಮತ್ತು ಅರ್ಹತೆ ಇದ್ದವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನ ನಡೆಸಲು ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿ, ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು. (kpc)
ಹಾವೇರಿಯಲ್ಲಿ ಫೆ.೨೬ ರಿಂದ ೨೮ ರ ವರೆಗೆ ನಡೆಯಲಿರುವ ಅಖಿಲ ಭಾರತ ೮೬ ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಕವಿ ದೊಡ್ಡರಂಗೇಗೌಡ ಅವರು ಆಯ್ಕೆ ಆಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ೩.೩೦ ಕ್ಕೆ ನಡೆದ ಕೇಂದ್ರ ಕ.ಸಾ.ಪ. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಕ.ಸಾ.ಪ. ಉತ್ತರ ಕನ್ನಡ ಜಿಲ್ಲಾಧ್ಯಕ್ಷ -ಅರವಿಂದ ಕರ್ಕಿಕೋಡಿ ದೊಡ್ಡರಂಗೇ ಗೌಡ
ಅವರಿಗೆ ಪ್ರೀತಿಯ ಅಭಿನಂದನೆಗಳನ್ನು ತಿಳಿಸಿದ್ದಾರೆ.

