ಅಬ್ಬಿ ಜಲಪಾತದಲ್ಲಿ ಭೂಕುಸಿತ: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ದುರಂತ ಸಾವು

ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.


ಕ್ರಿಕೆಟ್ ಪಂದ್ಯಾವಳಿ-

ಗಣರಾಜ್ಯೋತ್ಸವದ ಅಂಗವಾಗಿ ತಾಲೂಕಾ ಆಡಳಿತದ ಸಂಯೋಜನೆ ಹಾಗೂ ತಾಲೂಕಾ ಪತ್ರಕರ್ತರ ಸಂಘದ ಅಯೋಜನೆಯಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಕಡಕೇರಿ ಶಾಲಾ(ಮಹಾತ್ಮಾ ಗಾಂಧಿ) ಮೈದಾನದಲ್ಲಿ ಆಯೋಜಿಸಲಾಗಿತ್ತು.

ಪಂದ್ಯಾವಳಿಯ ನ್ನು ತಹಶೀಲ್ದಾರ್ ಮಂಜುಳ ಭಜಂತ್ರಿ ಉದ್ಘಾಟಿಸಿ ಮಾತನಾಡಿ ಕ್ರೀಡೆ ಸಂತೋಷ ನೀಡುತ್ತದೆ. ಕ್ರೀಡೆಯಲ್ಲಿ ಸಂತೋಷ ದಿಂದ ಪಾಲ್ಗೊಳ್ಳಬೇಕು ಎಂದರು.
ಎಸಿಎಫ್ ಅಜೀಜ್ ಮಾತನಾಡಿ ಗುಂಪು ಕ್ರೀಡೆಗಳಿಂದ ನಾಯಕತ್ವ ಗುಣ ಬೆಳೆಯುತ್ತದೆ. ಮನರಂಜನೆ, ದೈಹಿಕ ಸಾಮರ್ಥ್ಯ ಬೆಳೆಯುತ್ತದೆ. ಸೋಲು ಗೆಲುವು ಮುಖ್ಯ ವಲ್ಲ ಕ್ರೀಡಾ ಮನೋಭಾವದಿಂದ ಆಡಬೇಕು ಎಂದರು.
ಸಿಪಿಐ ಎನ್ ಮಹೇಶ್ ಮಾತನಾಡಿ ಕ್ರೀಡಾ ಮನೋಭಾವದಿಂದ ಆಡೋಣ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಗ್ರಾಮ ಪಂಚಾಯತ್ ಸದಸ್ಯ ಕ್ರಷ್ಣಮೂರ್ತಿ ಮಡಿವಾಳ, ಪ್ರಾಥಮಿಕ ಶಾಲಾ ನೌಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಗಣೇಶ ಭಟ್ ಮಾತನಾಡಿದರು.
ನಿರ್ಣಾಯಕ ಟಿ ಬಿ ಗೌಡ ಉಪಸ್ಥತರಿದ್ದರು
ಸುರೇಶ ಕಡಕೇರಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.

ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣಾ ಘಟಕ, ಪೊಲೀಸ್, ಧರ್ಮಸ್ಥಳದ ವಿಪತ್ತು ನಿರ್ವಹಣಾ ತಂಡ ಮತ್ತು 150 ಕ್ಕೂ ಹೆಚ್ಚು ಸ್ಥಳೀಯರು ಮಣ್ಣಿನ ಪದರಗಳನ್ನು ಸರಿಸಲು ಇಡೀ ದಿನ ಮಾಡಿದ ಪ್ರಯತ್ನಗಳು ಯಶಸ್ವಿಯಾಗಿಲ್ಲ. ಸಂಜೆ 6 ಗಂಟೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ದುರ್ಗಮ ಪ್ರದೇಶವಾದ ಕಾರಣ ಜೆಸಿಬಿಗಳು ಘಟನಾ ಸ್ಥಳ ತಲುಪಲು ಸಾಧ್ಯವಾಗಿಲ್ಲ. ಅಲ್ಲದೆ ಮಣ್ಣಿನ ಪದರವು ಇಡೀ ಜಲಪಾತವನ್ನು ಆವರಿಸಿದೆ.

ಈ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ ಮೊದಲ ಘಟನೆ ಇದಾಗಿದೆ, ಕೆಲವು ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್‌ನಲ್ಲಿನ ಸೋರಿಕೆ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ಹೇಳಿದ್ದಾರೆ. ಶಾಸಕ ಹರೀಶ್ ಪೂಂಜ, ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ,, ಹಂಗಾಮಿ ತಹಶೀಲ್ದಾರ್ ರಮೇಶ್ ಬಾಬು ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸನತ್ ಅವರ ಸಹೋದರ ಶಮಿತ್ ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *