ಅರಣ್ಯ ಇಲಾಖೆಗೆ ಕೇಂದ್ರದಿಂದ ಅಪಾರ ಹಣ: ಅನುದಾನ ಬಳಕೆಗೆ ಗೊಂದಲದಲ್ಲಿರುವ ಅಧಿಕಾರಿಗಳು!

ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಸಿಂಹ ಪಾಲು ಪಡೆದಿದೆ. 

Representational image

ಬೆಂಗಳೂರು: ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಸಿಂಹ ಪಾಲು ಪಡೆದಿದೆ. 

ಮೊದಲ ಬಾರಿಗೆ 1,350 ಕೋಟಿ ರು. ಅನುದಾನ ದೊರೆತಿದ್ದು, ಅದನ್ನು ಬಳಸಲು ಇಲಾಖೆ ಗೊಂದಲದಲ್ಲಿ ಕುಳಿತಿದೆ. ಎಲ್ಲಾ ಹುಲಿ ಮೀಸಲು ಅರಣ್ಯ, ವನ್ಯಜೀವಿ ಅಭಯಾರಣ್ಯಗಳು ಮತ್ತು ಇತರ ಕಾಡುಗಳ ನಿರ್ವಹಣೆಗೆ ಅರಣ್ಯ ಇಲಾಖೆಯು ಪಡೆಯುವ ಮೊತ್ತಕ್ಕಿಂತ ಈ ವರ್ಷ ರಾಜ್ಯದ ಪಾಲು ಹೆಚ್ಚು ಅನುದಾನ ಸಿಕ್ಕಿದೆ.

https://imasdk.googleapis.com/js/core/bridge3.438.0_debug_en.html#goog_1963966494

ಸಾಮಾನ್ಯವಾಗಿ ರಾಜ್ಯಕ್ಕೆ ಸುಮಾರು 80-100 ಕೋಟಿ ರೂ. ಅನುದಾನ ಸಿಗುತ್ತಿತ್ತು. ಕಳೆದ ವರ್ಷ, ಅರಣ್ಯ ಇಲಾಖೆಯು ಅವರು ಕೈಗೊಳ್ಳಬೇಕಾದ ಕೆಲಸಗಳಿಗಾಗಿ 269 ಕೋಟಿ ರೂ. ನೀಡಲಾಗಿತ್ತು. ಈ ವರ್ಷ ಅರಣ್ಯ ಸಂರಕ್ಷಣೆಗಾಗಿ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಒಟ್ಟು 48,000 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.

ಈ ಮೊತ್ತವು ಅಪಾರವಾಗಿದ್ದು ಹಣವನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಇಲಾಖೆ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ, ಅರಣ್ಯ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡುವ ಬದಲು, ಅರಣ್ಯ ಇಲಾಖೆಯು ಬುಡಕಟ್ಟು ಜನಾಂಗದವರ ಪುನರ್ವಸತಿಗಾಗಿ ಕೆಲಸ ಮಾಡಬೇಕು, ಏಕೆಂದರೆ ಅರಣ್ಯ ಸಂರಕ್ಷಣೆಗೆ ಸಿದ್ಧರಿದ್ದಾರೆ ಎಂದು ಇಲಾಖೆಯ ಕೆಲ ಅದಿಕಾರಿಗಳು ತಿಳಿಸಿದ್ದಾರೆ. 

ಹಣವನ್ನು ಯಾವುದಕ್ಕೆ ಬಳಸಬೇಕು, ಯಾವ ಕೆಲಸಕ್ಕೆ ಬಳಸಬಾರದು ಎಂಬು ಬಗ್ಗೆ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸೂಕ್ತ ಸಮಯ ಎಂದು ತಿಳಿಸಿದ್ದಾರೆ. ಅರಣ್ಯ ಕಾವಲುಗಾರರಿಗೆ ಪಡಿತರ, ಬಟ್ಟೆ ಇತ್ಯಾದಿಗಳನ್ನು ಒದಗಿಸುವಂತಹ ಕೆಲಸಗಳನ್ನು 4-5 ಕೋಟಿ ರೂ. ಗಳಲ್ಲಿ ಮಾಬಡಬಹುದು, ಇದರ ಬದಲಿಗೆ ಅವರು ಅರಣ್ಯ ಕಾವಲುಗಾರರ ವೇತನವನ್ನು ಪಾವತಿಸುವ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ. 

ಕ್ಯಾಂಪಾ ನಿಧಿಯ ರಾಜ್ಯದ ಪಾಲನ್ನು ಒಂದೇ ಸಮಯದಲ್ಲಿ ಬಳಸಲಾಗುವುದಿಲ್ಲ. ಖರ್ಚು ಮಾಡುವ ಮೊದಲು ರಾಷ್ಟ್ರೀಯ ಕ್ಯಾಂಪಾ ಫಂಡ್ ಮಂಡಳಿಯ ಅನುಮೋದನೆ ಅಗತ್ಯವಿದೆ ಎಂದು ಕ್ಯಾಂಪಾದ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಪುನೀತ್ ಪಾಠಕ್ ಹೇಳಿದ್ದಾರೆ. 

ಈ ಹಣವನ್ನು ಅರಣ್ಯೀಕರಣ, ವನ್ಯಜೀವಿ, ಸಂರಕ್ಷಣೆ ಮುಂತಾದವುಗಳಿಗೆ ಮಾತ್ರ ಬಳಸಬಹುದು, ಶಾಶ್ವತ ಸ್ಥಾಪನೆ ಯೋಜನೆಗಳಿಗಾಗಿ ಬಳಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *