

ಹೆಚ್ಚುತ್ತಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ ಪಿ ಕೆಎಂ ಶಾಂತರಾಜು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೃಷಿ ಕಾನೂನು ವಿರೋಧಿಸಿ ರಾಜ್ಯಾದ್ಯಂತ ನಾಳೆ ಹೆದ್ದಾರಿ ತಡೆ
ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ದೇಶಾದ್ಯಂತ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ದೇಶಾದ್ಯಂತ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ. ಮಧ್ಯಾಹ್ನ 12ರಿಂದ 3 ಗಂಟೆವರೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಧರಣಿ ನಡೆಸಲು ಕರೆ ನೀಡಲಾಗಿದೆ.
ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಾಳೆ ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ, ಬೆಂಗಳೂರು-ಮೈಸೂರು ರಸ್ತೆಯಲ್ಲಿ 2 ಕಡೆ ಹೆದ್ದಾರಿ ತಡೆ ನಡೆಯಲಿದೆ.
ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಬಿಡದಿ, ಮಂಡ್ಯ, ರಾಯಚೂರಿನ ಅಸ್ಕಿಹಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಯಲಿದೆ. ಚಾಮರಸ ಮಾಲಿ ಪಾಟೀಲ್ ನೇತೃತ್ವದಲ್ಲಿ ನಾಳೆ ರಾಜ್ಯದ ಹಲವೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಿಗೆ ತಡೆಯಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.



ಶಿವಮೊಗ್ಗ: ಹೆಚ್ಚುತ್ತಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ ಪಿ ಕೆಎಂ ಶಾಂತರಾಜು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಬಾರ್ ಒಂದರಲ್ಲಿ ಇತ್ತೀಚೆಗೆ ಗಲಾಟೆ ನಡೆದು ಯುವಕನೊಬ್ಬನ ಹತ್ಯೆ ಮಾಡಲಾಗಿತ್ತು. ಹೀಗಾಗಿನಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಗರದಲ್ಲಿ ರೌಡಿಗಳ ಪರೇಡ್ ನಡೆಸಿ, 156 ಕ್ಕೂ ಹೆಚ್ಚು ರೌಡಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ರೌಡಿಗಳ ಕೇಸುಗಳ ಬಗ್ಗೆ ಮಾಹಿತಿ ಪಡೆದು, ಚಟುವಟಿಕೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ ಪಿ ಎಚ್ಚರಿಸಿದರು. ಯಾವುದೆ ರೀತಿಯ ರೌಡಿ ಚಟವಟಿಕೆ ನಡೆಸದಂತೆ ಸೂಚನೆ ಕೊಟ್ಟರು.
ಶಿವಮೊಗ್ಗ ಉಪ ವಿಭಾಗದ ದೊಡ್ಡಪೇಟೆ, ಕೋಟೆ, ಜಯನಗರ , ವಿನೋಬನಗರ, ಶಿವಮೊಗ್ಗ ಗ್ರಾಮಾಂತರ, ತುಂಗಾ ನಗರ, ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು ಪರೇಡ್‌ನಲ್ಲಿ ಪಾಲ್ಗೊಂಡಿದ್ದರು.
ಬಾರ್‌ಗಳಲ್ಲಿ ಕುಡಿದು ಕಿರಿಕ್ ಮಾಡುವ ರೌಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಹೇಳಿದರು. ರಸ್ತೆ ತಡೆ ಟೀ ಅಂಗಡಿ ಮುಂದೆ ಗುಂಪುಗೂಡಿ ಗಲಾಟೆ ಮಾಡುವುದು ಸೇರಿದಂತೆ ಶಾಂತಿ ಕದಡುವವರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ ಎಂದು ವಾರ್ನಿಂಗ್ ನೀಡಿದ್ದಾರೆ. (kpc)
