ಪ್ರೊ.ಕೆ.ಎನ್.ಹೊಸಮನಿರಿಗೆ “ಆಧಾರಶ್ರೀ” ಪ್ರಶಸ್ತಿ


ಉತ್ತರಾಖಂಡ ಹಿಮ ಪ್ರವಾಹ: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಹತ್ತು ಮೃತದೇಹಗಳು ಪತ್ತೆ 

ಚಿಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ವಿವಿಧ ಸೇನಾಪಡೆಗಳಿಂದ ಸಮಾರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಈ ಘಟನೆಯಿಂದ 150 ಮಂದಿ ನಾಪತ್ತೆಯಾಗಿದ್ದು, ಹತ್ತು ಮಂದಿಯ ಮೃತದೇಹಗಳು ಸಿಕ್ಕಿರುವುದಾಗಿ ರಕ್ಷಣಾ ತಂಡಗಳು ತಿಳಿಸಿವೆ.

SDRF_Team1

ಉತ್ತರಾಖಂಡ: ಚಿಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ವಿವಿಧ ಸೇನಾಪಡೆಗಳಿಂದ ಸಮಾರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಈ ಘಟನೆಯಿಂದ 150 ಮಂದಿ ನಾಪತ್ತೆಯಾಗಿದ್ದು, ಹತ್ತು ಮೃತದೇಹಗಳು ಸಿಕ್ಕಿರುವುದಾಗಿ ರಕ್ಷಣಾ ತಂಡಗಳು ತಿಳಿಸಿವೆ.

ಜೋಶಿಮಠ್ ಪ್ರದೇಶದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡವನ್ನು ನಿಯೋಜಿಸಲಾಗಿದೆ ಎಂದು ಎನ್ ಡಿಆರ್ ಎಫ್ ಡೈರೆಕ್ಟರ್ ಜನರಲ್ ಎಸ್.ಎನ್. ಪ್ರಧಾನ್ ಹೇಳಿದ್ದಾರೆ. ಇನ್ನೂ ಮೂರ್ನಾಲ್ಕು ತಂಡಗಳನ್ನು ದೆಹಲಿಯಿಂದ ಡೆಹ್ರಡೂನ್ ಗೆ ಏರ್ ಲಿಫ್ಟ್ ಮಾಡಿ, ನಂತರ ಜೋಶಿಮಠ್ ಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

600 ಸೇನಾ ಸಿಬ್ಬಂದಿಯನ್ನೊಳಗೊಂಡ ಆರು ತುಕಡಿಗಳು ಈಗಾಗಲೇ ಪ್ರವಾಹ ಭಾದಿತ ಪ್ರದೇಶಕ್ಕೆ ಆಗಮಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್ ನ್ನು ಕೂಡಾ ನಿಯೋಜಿಸಲಾಗಿದೆ. ಒಂದು ಎಂಜಿನಿಯರಿಂಗ್ ಕಾರ್ಯಪಡೆಯನ್ನು ರಿಂಗಿ ಗ್ರಾಮಕ್ಕೆ ಕಳುಹಿಸಲಾಗಿದ್ದು, ಎರಡು ವೈದ್ಯಕೀಯ ತಂಡಗಳು ಕಾರ್ಯಾಚರಣೆಗೆ ಸೇರ್ಪಡೆಗೊಂಡಿವೆ.
 
ಪ್ರವಾಹ ಉಂಟಾದ ಬಳಿಕ ಇಂಡೋ-ಟಿಬೆಟನ್ ಬಾರ್ಡರ್ ಗಸ್ತು ಸಿಬ್ಬಂದಿ ತಪೋವನ್ ಮತ್ತು ರೆನಿ ಪ್ರದೇಶಕ್ಕೆ ಆಗಮಿಸಿದ್ದು, ಸ್ಥಳೀಯ ಆಡಳಿತದೊಂದಿಗೆ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಯ ಚುರುಕಿನಿಂದ ಸಾಗಿದೆ ಎಂದು ರಿಷಿಕೇಶಿ ಬಳಿಯ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

ಅಸಂಖ್ಯಾತ ಶಿಷ್ಯರಿಗೆ ವಿದ್ಯೆ ನೀಡಿದ ಗುರುವಿನ ಸೇವೆಗೆ ಸಂದ ಗೌರವ
ಶಿರಸಿ ;- ಆಧಾರ ಶಿಕ್ಷಣ, ಸ್ವ-ಉದ್ಯೋಗ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ) ಸಿದ್ದಾಪುರ ಪ್ರತಿವರ್ಷ ಜಿಲ್ಲಾ ಮಟ್ಟದಲ್ಲಿ ನೀಡುವ ದಿ.ಎಂ.ಟಿ.ಕೊಡಿಯ ಅವರ ನೆನಪಿನ ‘ಆಧಾರಶ್ರೀ ಪ್ರಶಸ್ತಿ’ಗೆ ಚಿಂತಕರಾದ ಶಿರಸಿಯ ನಿವೃತ್ತ ಪ್ರಾಚಾರ್ಯ ಪ್ರೊ.ಕೆ.ಎನ್.ಹೊಸಮನಿ ಅವರನ್ನು ಆಯ್ಕೆ ಮಾಡಲಾಗಿದೆ. ಫೆ.10 ರಂದು ನಡೆಯಲಿರುವ ಸಂಸ್ಥೆಯ ‘ಸಂಕಲ್ಪ ದಿನಾಚರಣೆ’ಯಂದು ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ದಿ.ಎಂ.ಟಿ.ಕೊಡಿಯ ಅವರು ಸಿದ್ದಾಪುರ ತಾಲೂಕಿನ ನಿವೃತ್ತ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷರು, ಆಧಾರ ಶಿಕ್ಷಣ, ಸ್ವಯಂ ಉದ್ಯೋಗ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರು. ಸಂಸ್ಥೆಯ ಆರಂಭದ ದಿನದಿಂದ ಅವರ ಕೊನೆಯ ದಿನಗಳವರೆಗೂ ಸಂಸ್ಥೆಗೆ ಮಾರ್ಗದರ್ಶಕರಾಗಿ ಆಧಾರ ಆಗಿದ್ದರು. ಅವರು ತಮ್ಮ ವೃತ್ತಿಯ ಹಾಗೂ ನಿವೃತ್ತಿಯ ಬದುಕಿನಲ್ಲಿ ಜನಸಾಮಾನ್ಯರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಸಮಾಜಮುಖಿಯಾಗಿದ್ದ ಅವರು ಶೋಷಿತರ ಪರವಾದ ಧ್ವನಿಯಾಗಿದ್ದರು. ಸಮಾಜಕ್ಕೆ ಆದರ್ಶವಾಗಿದ್ದರು. ಇವರ ಹೆಸರನ್ನು ಜೀವಂತವಾಗಿಡುವ ಪುಟ್ಟ ಪ್ರಯತ್ನವಾಗಿ ಅವರ ನೆನಪಿನಲ್ಲಿ ಆಧಾರಶ್ರೀ ಪ್ರಶಸ್ತಿಯನ್ನು ಸಂಸ್ಥೆ ಪ್ರತಿವರ್ಷ ಜಿಲ್ಲಾ ಮಟ್ಟದಲ್ಲಿ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಹಲವರು ಸರ್ಕಾರಿ ಉದ್ಯೋಗದಲ್ಲಿನ ನಿವೃತ್ತಿಯ ನಂತರ ತಮ್ಮ ಮನೆ, ಹೆಂಡತಿ, ಮಕ್ಕಳು ಮೊಮ್ಮಕ್ಕಳ ಜೊತೆ ಸಂತೋಷದಿಂದ ಕಾಲಕಳೆಯುತ್ತಾ ನೆಮ್ಮದಿಯ ಜೀವನವನ್ನರಸುತ್ತಾರೆ. ಆದರೆ ಅಪರೂಪಕ್ಕೆ ಕೆಲವರು ಮಾತ್ರ ತಮ್ಮ ಬದುಕಿನ ವಿಶ್ರಾಂತ ಸಮಯವನ್ನು ಸಾಮಾಜಿಕ ಚಟುವಟಿಕೆಗಳಿಗೆ ಮೀಸಲಿಟ್ಟು ಆದರ್ಶಪ್ರಾಯರೆನಿಸಿಕೊಳ್ಳುತ್ತಾರೆ. ಅಂತಹ ಅಪರೂಪದ ವ್ಯಕ್ತಿಗಳಲ್ಲೊಬ್ಬರು ಮಾರಿಗುಡಿ ಸರಕಾರಿ ಪದವಿ ಪೂರ್ವ ಕಾಲೇಜ್‍ನ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿರುವ ಪ್ರೊ.ಕೆ.ಎನ್.ಹೊಸಮನಿ ಅವರು.
ಮೂಲತಃ ಹಾವೇರಿಯವರಾದ ಪ್ರೊ. ಕೆ.ಎನ್ ಹೊಸಮನಿ ಅವರು ಈಗ ನಮ್ಮವರೆ ಆಗಿದ್ದಾರೆ. ಅವರ ವೃತ್ತಿ ಬದುಕಿನ ಹೆಚ್ಚು ಸೇವೆಯನ್ನು ಶಿರಸಿಯಲ್ಲಿಯೆ ಸಲ್ಲಿಸಿದ್ದಾರೆ. ಈಗಲೂ ಇಲ್ಲಿಯೆ ಇದ್ದು ತಮ್ಮ ಅನುಭವವನ್ನು ಸಮಾಜಕ್ಕೆ ಧಾರೆ ಎರೆಯುತ್ತಿದ್ದಾರೆ. ಆರಂಭದಲ್ಲಿ ಹರಪ್ಪನಹಳ್ಳಿಯ ಬಿ.ಎಡ್ ಕಾಲೇಜ್‍ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಪ್ರಾರಂಭಿಸಿದ್ದರು. ನಂತರದಲ್ಲಿ ದಾವಣಗೇರಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜ್‍ನಲ್ಲಿ ಕನ್ನಡ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದರು. 1987 ರಿಂದ ಶ್ರೀ ಮಾರಿಕಾಂಬಾ ಸರ್ಕಾರಿ ಪದವಿಪೂರ್ವ ಕಾಲೇಜ್‍ನಲ್ಲಿ ಕನ್ನಡ ಉಪನ್ಯಾಸಕರಾಗಿ ಕರ್ತವ್ಯವನ್ನು ಆರಂಭಿಸಿದ್ದರು. ನಂತರ 2011 ರಿಂದ ಮಾರಿಗುಡಿ ಕಾಲೇಜ್‍ನ ಪ್ರಾಚಾರ್ಯರಾಗಿ 2016 ರಲ್ಲಿ ನಿವೃತ್ತಿ ಹೊಂದಿದ್ದಾರೆ. ತಮ್ಮ ಸುದೀರ್ಘ ಸೇವಾ ಅವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಗುರುವಾಗಿ, ಅನೇಕರ ಬದುಕಿಗೆ ದಾರಿದೀಪವಾಗಿದ್ದಾರೆ.
ಇವರ ವೃತ್ತಿ ಬದುಕಿನಲ್ಲಿ ಸತತ 28 ವರ್ಷಗಳ ಕಾಲ ದ್ವೀತಿಯ ಪಿ.ಯು.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಇವರು ಕಲಿಸಿದ ವಿದ್ಯಾರ್ಥಿಗಳ ಫಲಿತಾಂಶ “ನೂರಕ್ಕೆ ನೂರು” ಆಗಿರುವುದು ಬಹು ದೊಡ್ಡ ಸಾಧನೆಯಾಗಿದೆ. ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ವಿಶೇಷ ಪ್ರಸಂಶೆಗಳಿಸಿದ್ದು ಇವರ ಹಿರಿಮೆ ಎನ್ನಬಹುದು. ಇವರಿಗೆ ಅತ್ಯುತ್ತಮ ಉಪನ್ಯಾಸಕ, ಕದಂಬ ರತ್ನ, ಕನ್ನಡ ನುಡಿ ಕಿಂಕರ ಪುರಸ್ಕಾರಗಳು ಇವರ ಸಾಧನೆಗೆ ಸಂದ ಗೌರವವಾಗಿದೆ.
ಕನ್ನಡ ಉಪನ್ಯಾಸಕರಾಗಿದ್ದರೂ ಇತಿಹಾಸ ಭೋದನಾ ಮಾರ್ಗದರ್ಶಿ, ಶಿಕ್ಷಣ ಭಾಗ-1, ಶಿಕ್ಷಣ ಭಾಗ-2, ಮನೋವಿಜ್ಞಾನದಲ್ಲಿ ಶೈಕ್ಷಣಿಕ ಪ್ರಯೋಗಗಳು ಎನ್ನುವ ಕೃತಿಗಳನ್ನು ರಚಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ. ತಮ್ಮ ನಿವೃತ್ತಿಯ ನಂತರವೂ ಶಿರಸಿ ಶೈಕ್ಷಣಿಕ ಜಿಲ್ಲೆಯ ಭಾರತ ಸೇವಾದಳದ ಸದಸ್ಯರಾಗಿ, ಶಿರಸಿ ಅರ್ಬನ್ ಬ್ಯಾಂಕ್‍ನ ನಿರ್ದೇಶಕರಾಗಿ, ಶ್ರೀನಿಕೇತನ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಡದಿ ಮೈನಾವತಿ ಹೊಸಮನಿ ಅಂಚೆ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದು, ಮಕ್ಕಳಾದ ನೇತ್ರ ತಜ್ಞರಾದ ಡಾ.ವಿಶ್ವಾಸ ಕೆ. ಹೊಸಮನಿ, ಅರಿವಳಿಕೆ ತಜ್ಞ ಡಾ.ವಿವೇಕ ಕೆ. ಹೊಸಮನಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
………………………..
ಆಧಾರಶ್ರೀ ಪ್ರಶಸ್ತಿ; ದಿ.ಎಂ.ಟಿ.ಕೊಡಿಯ ಅವರ ನೆನಪಿನ ‘ಆಧಾರಶ್ರೀ ಪ್ರಶಸ್ತಿ’ಯು ಜಿಲ್ಲಾ ಮಟ್ಟದಾಗಿದೆ. ಸರಕಾರಿ ನೌಕರಿಯಲ್ಲಿ ಇದ್ದವರು ಅಥವಾ ನಿವೃತ್ತರಾಗಿದ್ದವರು ಮಾಡಿರುವ ಜನಪರವಾದ ಕೆಲಸ ಕಾರ್ಯಗಳನ್ನು ಗಮನಿಸಿ ಪ್ರಶಸ್ತಿಗೆ ಅಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಗೆ ಯಾವುದೆ ಕಾರಣಕ್ಕೂ ಅರ್ಜಿ ಸ್ವೀಕರಿಸಲಾಗುವುದಿಲ್ಲ. ಪ್ರಶಸ್ತಿ ಫಲಕದೊಂದಿಗೆ ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಫಲತಾಂಬೂಲ, ಐದು ಸಾವಿರ ನಗದು ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಪ್ರತಿ ವರ್ಷ ಫೆ.10 ರಂದು ಸಂಸ್ಥೆಯ ಸಂಕಲ್ಪ ದಿನಾಚರಣೆಯ ದಿನದಂದು ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *