

ರೈತರ ಹೋರಾಟ ರಾಜ್ಯಕ್ಕೆ ವಿಸ್ತರಣೆ: ರೈತರ ಪ್ರತಿಭಟನೆಯ ಮುಖಂಡರಾಗಿ ಗುರುತಿಸಿಕೊಂಡಿರುವ ರಾಕೇಶ್ ಟಿಕಾಯತ್ ಈ ತಿಂಗಳ ಅಂತ್ಯದಲ್ಲಿ ಉತ್ತರ ಕರ್ನಾಟಕದಲ್ಲಿ ಮಹಾ ಪಂಚಾಯತ್ ಎಂಬ ಸಾಮೂಹಿಕ ರ್ಯಾಲಿಯನ್ನು ನಡೆಸಲಿದ್ದಾರೆ.

ಮೈಸೂರು: ರೈತರ ಪ್ರತಿಭಟನೆಯ ಮುಖಂಡರಾಗಿ ಗುರುತಿಸಿಕೊಂಡಿರುವ ರಾಕೇಶ್ ಟಿಕಾಯತ್ ಈ ತಿಂಗಳ ಅಂತ್ಯದಲ್ಲಿ ಉತ್ತರ ಕರ್ನಾಟಕದಲ್ಲಿ ಮಹಾ ಪಂಚಾಯತ್ ಎಂಬ ಸಾಮೂಹಿಕ ರ್ಯಾಲಿಯನ್ನು ನಡೆಸಲಿದ್ದಾರೆ.
ತಮ್ಮ ಪ್ರತಿಭಟನೆಗೆ ಇನ್ನಷ್ಟು ಸಂಖ್ಯೆಯಲ್ಲಿ ರೈತರನ್ನು ಸೇರಿಸಲು ಟಿಕಾಯತ್ ಕರ್ನಾಟಕಕ್ಕೆ ಬರುತ್ತಿದ್ದಾರೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಬಡಗಲ್ಪುರ ನಾಗೇಂದ್ರ, ರಾಜ್ಯ ಬಜೆಟ್ ಅಧಿವೇಶನ ಸಂದರ್ಭದಲ್ಲಿ ರೈತರು ವಿಧಾನ ಸೌಧ ಚಲೋ ರ್ಯಾಲಿಯನ್ನು ನಡೆಸಿ ಕೃಷಿ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಲಿದ್ದಾರೆ ಎಂದರು.
ಪ್ರತಿ ಜಿಲ್ಲೆಯಿಂದ ಸೇರಿದಂತೆ 50 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ. ಕೇರಳ ರಾಜ್ಯದಲ್ಲಿ ರೇಷ್ಮೆ ಮತ್ತು ಇತರ ಬೆಳೆಗಳಿಗೆ ಇರುವಂತೆ ಕಾಫಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಲಿದ್ದಾರೆ. ಅಲ್ಲದೆ ಪ್ರತಿಭಟನಾಕಾರರು, ಬೆಂಗಳೂರಿನಲ್ಲಿ ದಕ್ಷಿಣ ಭಾರತ ರೈತರ ದುಂಡು ಮೇಜಿನ ಸಮ್ಮೇಳನ ನಡೆಸಲಿದ್ದಾರೆ. (kpc)
