‘ನಾವಿಬ್ಬರು, ನಮ್ಮವರಿಬ್ಬರು’: ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ. 

Rahul Gandhi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ. 

ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ಕೇವಲ ರೈತರದ್ದಲ್ಲ, ಇಡೀ ದೇಶದ ಚಳುವಳಿ ಎಂದು ಹೇಳಿರುವ ರಾಹುಲ್ ಗಾಂಧಿ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯಲೇಬೇಕಾಗುತ್ತದೆ ಎಂದಿದ್ದಾರೆ. 

ಇದೇ ವೇಳೆ ಲೋಕಸಭೆಯಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಪ್ರತಿಭಟನೆ ವೇಳೆ ಮೃತಪಟ್ಟ 200 ರೈತರಿಗೆ ಸಂತಾಪ ಸೂಚಿಸಲು ರಾಹುಲ್ ಗಾಂಧಿ ತಮ್ಮ ಪಕ್ಷದ ಸದಸ್ಯರು, ಟಿಎಂಸಿ, ಡಿಎಂಕೆ ಸದಸ್ಯರೊಂದಿಗೆ 2 ನಿಮಿಷಗಳ ಕಾಲ ಮೌನಾಚರಣೆ ಮಾಡಿದರು. ಸರ್ಕಾರ ಗೌರವ ನೀಡಿಲ್ಲ ಆದ್ದರಿಂದ ನಾವು ಮಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಭಾಷಣವನ್ನು ಮುಂದುವರೆಸಿ ಮಾತನಾಡಿರುವ ರಾಹುಲ್ ಗಾಂಧಿ, ಮೊದಲನೆಯ ಕೃಷಿ ಕಾಯ್ದೆಯ ಉದ್ದೇಶ ಭಾರತದ ಎಲ್ಲಾ ಬೆಳೆಗಳನ್ನೂ ಖರೀದಿಸುವುದಕ್ಕೆ ಓರ್ವ ಸ್ನೇಹಿತನಿಗೆ ಹಕ್ಕು ನೀಡುವುದಾಗಿದೆ. ಇದರಿಂದ ಯಾರಿಗೆ ನಷ್ಟ?  ಗಾಡಿಯಲ್ಲಿ ಮಾರಾಟ ಮಾಡುವವರಿಗೆ, ಸಣ್ಣ ವ್ಯಾಪಾರಸ್ಥರಿಗೆ, ಹಾಗೂ ಮಂಡಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಆಗಲಿದೆ. 

ಎರಡನೇ ಕಾಯ್ದೆಯ ಉದ್ದೇಶ 2 ನೇ ಸ್ನೇಹಿತನಿಗೆ ಲಾಭ ಮಾಡಿಕೊಡುವುದಾಗಿದೆ. ಈ ಎರಡನೇ ಸ್ನೇಹಿತ ದೇಶದ ಶೇ.40 ರಷ್ಟು ಬೆಳೆಗಳನ್ನು ತನ್ನ ಬಳಿ ಸಂಗ್ರಹಿಸಿಟ್ಟುಕೊಳ್ಳಲಿದ್ದಾನೆ. ಆಯ್ಕೆಗಳನ್ನು ನೀಡಿರುವುದಾಗಿ ಪ್ರಧಾನಿ ಹೇಳುತ್ತಾರೆ. ಹೌದು, ನೀವು ಮೂರು ಆಯ್ಕೆಗಳನ್ನು ನೀಡಿದ್ದೀರಿ, ಅವು ಹಸಿವು, ನಿರುದ್ಯೋಗ ಹಾಗೂ ಆತ್ಮಹತ್ಯೆ ಎಂದು ಸರ್ಕಾರವನ್ನು ರಾಹುಲ್ ಗಾಂಧಿ ತಿವಿದಿದ್ದಾರೆ. 

ಇದೇ ವೇಳೆ ಹಳೆಯ ಕುಟುಂಬ ಯೋಜನೆಯ ಘೋಷ ವಾಕ್ಯವನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್, ನಾವಿಬ್ಬರು, ನಮ್ಮವರಿಬ್ಬರು ಎಂಬಂತೆ ಕೇವಲ 4-5 ಜನರು ದೇಶವನ್ನು ನಡೆಸುತ್ತಿದ್ದಾರೆ. ಹೊಸ ಕೃಷಿ ಕಾಯ್ದೆಗಳು ಭಾರತದ ಆಹಾರ ಭದ್ರತೆಯ ವ್ಯವಸ್ಥೆಯನ್ನು ನಾಶ ಮಾಡಲಿದ್ದು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ಬೀಳಲಿದೆ ಎಂದು ಹೇಳಿದ್ದಾರೆ. ರೈತರು ಎಲ್ಲಿಗೂ ಹೋಗುವುದಿಲ್ಲ ಆದರೆ ಈ ಸರ್ಕಾರವನ್ನು ಇಳಿಸಲಿದ್ದಾರೆ ಎಂದು ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *