ಡಾ.ಹರೀಶ್ ಕುಮಾರ್ ಸೇರಿ 9 ಜಿಲ್ಲಾಧಿಕಾರಿಗಳ ವರ್ಗಾವಣೆ

Yediyurappa

ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ ಹರೀಶ್ ಕುಮಾರ್ ಉದ್ಯೋಗ ಮತ್ತು ತರಬೇತಿ ಕೇಂದ್ರದ ಕಮೀಷನರ್ ಆಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಅವರ ಜಾಗಕ್ಕೆ ಮುಲ್ಲಾ ಎಂ. ರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ 9 ಜಿಲ್ಲಾಧಿಕಾರಿಗಳು ಸೇರಿದಂತೆ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಆಯುಕ್ತರಾಗಿ ಕೆ.ವಿ. ತ್ರಿಲೋಕಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ತ್ರಿಲೋಕ್ ಅವರು ಈ ಹಿಂದೆ ಕರ್ನಾಟಕ ಕೋವಿಡ್ -19 ಕ್ರಿಟಿಕಲ್ ಕೇರ್ ಸಪೋರ್ಟ್ ಕಮಿಟಿಯ ಮುಖ್ಯಸ್ಥರಾಗಿದ್ದರು.

ಐಎಎಸ್ ಅಧಿಕಾರಿ ತುಷಾರ್‌ ಗಿರಿನಾಥ್‌ ಅವರಿಗೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ನೀಡಲಾಗಿದೆ.

ವರ್ಗಾವಣೆಗೊಂಡ ಇತರೆ ಅಧಿಕಾರಿಗಳು
ರಾಮ್‍ಪ್ರಸಾದ್ ಮನೋಹರ್-ವ್ಯವಸ್ಥಾಪಕ ನಿರ್ದೇಶಕರು ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮ.
ಆರ್.ವೆಂಕಟೇಶ್ ಕುಮಾರ್- ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕಲ್ಬುರ್ಗಿ).
ಜಿ.ಎನ್.ಶಿವಮೂರ್ತಿ – ಆಯುಕ್ತರು. ಕೇನ್ ಡೆವಲಪ್‍ಮೆಂಟ್ ಮತ್ತು ನಿರ್ದೇಶಕರು, ಸಕ್ಕರೆ ಇಲಾಖೆ (ಬೆಂಗಳೂರು).
ಜೆ.ಮಂಜುನಾಥ್-ಜಿಲ್ಲಾಧಿಕಾರಿಗಳು. ಬೆಂಗಳೂರು ನಗರ.
ಡಾ.ಬಿ.ಆರ್.ಮಮತಾ- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾರ್ವಜನಿಕ ಭೂ ನಿಗಮ. (ಬೆಂಗಳೂರು).
ಹೆಬ್ಸಿಬಾ ರಾಣಿ ಕೋರ್ಲಪತಿ – ಜಂಟಿ ವ್ಯವಸ್ಥಾಪಕ ನಿರ್ದೇಶಕರು ಕೆಯುಐಡಿಎಫ್‍ಸಿ (ಬೆಂಗಳೂರು).
ಡಾ.ರಾಕೇಶ್ ಕುಮಾರ್ -ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ (ಬೆಂಗಳೂರು).
ಡಾ.ಸೆಲ್ವಮಣಿ – ಜಿಲ್ಲಾಧಿಕಾರಿ (ಕೋಲಾರ).
ರಶ್ಮಿ ಮಹೇಶ್- ಪ್ರಧಾನ ಕಾರ್ಯದರ್ಶಿ. ಹಿಂದುಳಿದ ವರ್ಗ ಮತ್ತು ಕಲ್ಯಾಣ ಇಲಾಖೆ (ಬೆಂಗಳೂರು).
ಡಾ.ಜೆ.ರವಿಶಂಕರ್ -ಕಾರ್ಯದರ್ಶಿ. ಕನ್ನಡ ಮತ್ತು ಸಂಸೃತಿ ಇಲಾಖೆ.
ಡಾ.ಕೆ.ವಿ.ತ್ರಿಲೋಕ್‍ಚಂದ್ರ- ಆಯುಕ್ತರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
ಡಾ.ಎಂ.ಬಿ.ವೆಂಕಟೇಶ್- ಆಯುಕ್ತರು, ವಾಟರ್ ಶೆಡ್ ಡೆವಲಪ್‍ಮೆಂಟ್ ಬೋರ್ಡ್.
ಡಾ.ಬಗಾದಿ ಗೌತಮ್- ಹೆಚ್ಚುವರಿ ಆಯುಕ್ತರು , ವಾಣಿಜ್ಯ ತೆರಿಗೆ ಇಲಾಖೆ ಜಾರಿ (ಬೆಂಗಳೂರು). (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *