ನಿಲ್ಕುಂದ-ಬಡಾಳ ಸರ್ವಋತು ರಸ್ತೆಗಾಗಿ ಫೆ.18 ರಂದು ಪಾದಯಾತ್ರೆ

ಸಿದ್ದಾಪುರ: ಪುರಾತನ ಕಾಲದಿಂದಲೂ ಬ್ರಿಟಷರ ಆಶ್ರಯದಲ್ಲಿಯೂ ಲೋಕೊಪಯೋಗಿ ರಸ್ತೆಯೆಂದು ಸರಕಾರದ ದಾಖಲೆಯಲ್ಲಿ ಪ್ರಸ್ತಾಪಿಸಲ್ಪಟ್ಟ ನಿಲ್ಕುಂದ ಮಾರ್ಗವಾಗಿ ಬಡಾಳ ವರೆಗೂ ಕುಮಟಾ ಸಂಪರ್ಕ ರಸ್ತೆ ಸರಕಾರ ಮತ್ತು ಜನಪ್ರತಿನಿದಿಗಳ ನಿರ್ಲಕ್ಷ್ಯದಿಂದ ಸಂಚಾರಕ್ಕೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸರ್ವಋತು ರಸ್ತೆಗೆ ಅಗ್ರಹಿಸಿ ದಿನಾಂಕ 18 ಗುರುವಾರ ಬೃಹತ್ ಪಾದಯಾತ್ರೆಯನ್ನು ಸಂಘಟಿಸಲು ತಿರ್ಮಾನಿಸಲಾಗಿದೆ.

ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ನೇತೃತ್ವದಲ್ಲಿ, ತಂಡಾಗುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬೀರಾ ಗೌಡ ಅವರ ಅಧ್ಯಕ್ಷತೆಯಲ್ಲಿ ನಿಲ್ಕುಂದದಲ್ಲಿ ದಿನಾಂಕ 12 ಸಾಯಂಕಾಲ ಜರುಗಿದ ಸಾರ್ವಜನಿಕ ಸಭೆಯಲ್ಲಿ ನಿರ್ಣಯಿಸಲಾಗಿದ್ದು ರಸ್ತೆಗಾಗಿ ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿರುವುದು ವಿಶೇಷವಾಗಿದೆ.

ಪುರಾತನ ಕಾಲದಿಂದಲೂ ಕರಾವಳಿ ಭಾಗಕ್ಕೆ ಘಟ್ಟದ ಮೇಲಿನ ಪ್ರದೇಶಕ್ಕೆ ಏಕೈಕ ಸಂಪರ್ಕ ರಸ್ತೆ ಇದಾಗಿತ್ತು. ತದನಂತರ ದೇವಿಮನೆ ಘಟ್ಟದ ರಸ್ತೆ ಮಾಡಲ್ಪಟ್ಟಿದ್ದು ವಿಶೇಷವಾಗಿದೆ. ತದನಂತರ ನಿಲ್ಕುಂದ-ಕುಮಟ ಸಂಪರ್ಕದ ರಸ್ತೆ ಸರಕಾರ ಮತ್ತು ಜನಪ್ರತಿನಿಧಿಗಳಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ವಿಷಾಧಕರ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹೋರಾಟ ಅನಿವಾರ್ಯವೆಂದು ಸಭೆಯಲ್ಲಿ ತಿರ್ಮಾನಿಸಲಾಯಿತು. ಈ ರಸ್ತೆಯ ನಂತರ ಸ್ಥಾಪಿತವಾದ ದೇವಿಮನೆ ರಸ್ತೆ ಅಭಿವೃದ್ದಿಗೆ ಸರಕಾರ ಲಕ್ಷ್ಯ ವಹಿಸಿತ್ತೆ ವಿನಹ ನಿಲ್ಕುಂದ-ಬಡಾಳ ರಸ್ತೆ ಸಂಪೂರ್ಣ ನಿರ್ಲಕ್ಷಿಸಲ್ಪಟ್ಟಿದೆ.

ಸಿದ್ಧಾಪುರ ತಾಲೂಕಿನ ನಿಲ್ಕುಂದ, ತಂಡಾಗುಂಡಿ, ಹೆಗ್ಗರಣೆ, ಜಾನ್ಮನೆ ಕೆಲವು ಭಾಗದವರಿಗೆ ಕೇವಲ 30-35 ಕೀ.ಮಿ ಅಂತರದಲ್ಲಿ ಕುಮಟಕ್ಕೆ ತಲುಪಲು ಅವಕಾಶವನ್ನು ಅಸಮರ್ಪಕ ರಸ್ತೆ ನಿರ್ವಹಣೆಯಿಂದ ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಈ ಭಾಗದವರು ಈಗ 55-60 ಕೀಮಿ ದೂರ ಪ್ರಯಾಣಿಸಿ ಕುಮಟಕ್ಕೆ ತಲುಪುವ ಪ್ರಯಾಸ ಮಾಡುತ್ತಿದ್ದಾರೆ. ಹಿಗಾಗಿ ಸಿದ್ಧಾಪುರ ತಾಲೂಕಿನ 7 ಕೀ.ಮಿ, ಕುಮಟ ತಾಲೂಕಿನ 7 ಕೀ.ಮಿ ದುರಸ್ತಿ ಮತ್ತು ಕಾಮಗಾರಿ ಕಾರ್ಯ ಆಗಬೇಕಾಗಿದೆ. ಈ ದಿಶೆಯಲ್ಲಿ ಸರಕಾರದ ಗಮನ ಸೆಳೆಯಲು ಈ ಭಾಗದ ಜನಸಾಮಾನ್ಯರ ಮೂಲಭೂತ ಸೌಕರ್ಯದಲ್ಲಿ ಒಂದಾದ ಈ ಸರ್ವಋತು ರಸ್ತೆಯನ್ನಾಗಿ ಮಾಡಲು ನಿರಂತರ ಹೋರಾಟ ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದೆ.

ಸಭೆಯಲ್ಲಿ ನಾಗುಪತಿ ಗೌಡ ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ರವೀಶ್ ಗೌಡ, ಸೀತಾರಾಮ ಗೌಡ ನೀರಗಾನ ಜಿಲ್ಲಾ ಸಂಚಾಲಕರು, ಎಪಿಎಂಸಿ ಸದಸ್ಯರು ಸೀತಾರಾಮ ನಿಂಗಾ ಗೌಡ, ದೇವೆಗೌಡ ಹೆಗ್ಗೆ, ರಮೇಶ ನಾಯ್ಕ, ಮಂಜುನಾಥ ನಾಯ್ಕ ಹೊಂಡಗದ್ದೆ, ಸೀತಾರಾಮ ಗೌಡ ಹುಕ್ಕಳಿ, ಹರಿಹರ ನಾಯ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 300 ಕ್ಕೂ ಹೆಚ್ಚು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಾದಯಾತ್ರೆ:

ಸರ್ವಋತು ರಸ್ತೆಗೆ ಅಗ್ರಹಿಸಿ ಫೆಬ್ರವರಿ 18 ಗುರುವಾರ ಮುಂಜಾನೆ 9:30 ಗಂಟೆಗೆ ನಿಲ್ಕುಂದದಿಂದ ಬೃಹತ್ ಪಾದಯಾತ್ರೆ ಪ್ರಾರಂಭವಾಗಿ ಕರ್ಮನಘಟಗಿಯಿಂದ 2 ಕೀ.ಮಿ ದೂರದಲ್ಲಿರುವ ಸಿದ್ಧಾಪುರ-ಕುಮಟ ಗಡಿಯಾದ ಪೆರಲಮಾರಿಯಲ್ಲಿಯವರೆಗೂ 7 ಕೀ.ಮಿ ಪಾದಯಾತ್ರೆಯೂ 11 ಗಂಟೆಗೆ ತಲುಪಿ ಸಭೆಯಾಗಿ ಪರಿವರ್ತನೆಗೊಳ್ಳುವುದು. ಸದ್ರಿ ಸಭೆಗೆ ಕಂದಾಯ, ಪೋಲಿಸ್, ಲೋಕೊಪಯೋಗಿ ಹಾಗೂ ಅರಣ್ಯ ಇಲಾಖೆಯವರಿಗೆ ಮುಂಚಿತವಾಗಿ ಸಭೆಯಲ್ಲಿ ಉಪಸ್ಥಿತರಿದ್ದು, ರಸ್ತೆ ದುರಸ್ಥಿಗೆ ಮತ್ತು ವಿಳಂಬಕ್ಕೆ  ಕಾರಣದ ಸ್ಪಷ್ಪೀಕರಣ ನೀಡುವಂತೆ ಅಗ್ರಹಿಸಲಾಗುವುದೆಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *