

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಇದಕ್ಕೆ ಮುನ್ನ ಅವರು ಎಲ್ಲಾ ಮಾದರಿಯ ಕ್ರಿಕೆಟ್ ನ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಿದ್ದಾಪುರ: ನಬಾರ್ಡ ಸಹಯೋಗದೊಂದಿಗೆ ಕೆಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಶಿವಶಂಕರ್ ಎನ.ಕೆ ಉದ್ಘಾಟಿಸಿ ಮಾತನಾಡಿ ಬ್ಯಾಂಕುಗಳಲ್ಲಿ ಸಿಗುವ ಸೌಲಭ್ಯಗಳು , ಬ್ಯಾಂಕುಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಬಳಸಿಕೊಂಡು ವ್ಯವಹರಿಸುವ ರೀತಿ ನೀತಿಗಳು ಎಟಿಎಂ ಕಾರ್ಡ್ ಬಳಕೆ ಮೊಬೈಲ್ ಬ್ಯಾಂಕಿಂಗ್ ಇಂಟರ್ನೆಟ್ ಬ್ಯಾಂಕಿಂಗ್ , ಬ್ಯಾಂಕನಲ್ಲಿ ಸಿಗುವ ವಿಮಾ ಸೌಲಭ್ಯಗಳು, ಉದ್ಯೋಗ ತರಬೇತಿಗಳು ,ಶಿಕ್ಷಣ ಸಾಲ ಸೌಲಭ್ಯಗಳು, ಸಂಘಗಳಿಗೆ ಸಿಗುವ ಸಾಲ ಸೌಲಭ್ಯಗಳು ,ವೈಯಕ್ತಿಕ ಮತ್ತು ಕೃಷಿ ಚಟುವಟಿಕೆಗಳಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು .
ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಾದ ಶ್ರೀಧರ್ ಎಸ್ ಭಟ್, ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಕಾರ್ಯದರ್ಶಿ ಎಂ ವೈ ಮಾಳವಿ ಸಂಘಗಳ ಪ್ರೇರಕಿ ಸುಮಿತ್ರ ನಾಯ್ಕ ಉಪಸ್ಥಿತರಿದ್ದರು.



ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಇದಕ್ಕೆ ಮುನ್ನ ಅವರು ಎಲ್ಲಾ ಮಾದರಿಯ ಕ್ರಿಕೆಟ್ ನ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್ ನಲ್ಲಿ ಕ್ರಿಕೆಟಿಗ ತನ್ನ ನಿರ್ಧಾರವನ್ನು ದೃಢಪಡಿಸಿದ್ದಾರೆ.”ನನ್ನ ಹೃದಯ ಸ್ಪಷ್ಟ ನಿರ್ಧಾರ ತಾಳಿದೆ.ಮತ್ತು ಹೊಸ ಅಧ್ಯಾಯಕ್ಕೆ ಕಾಲಿಡಲು ಸಮಯ ಸರಿಯಾಗಿದೆ.” ಎಂದು ಬರೆದುಕೊಂಡಿದ್ದಾರೆ.
ಫಾಫ್ ಡು 69 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು, 40.02 ರ ಸರಾಸರಿಯಲ್ಲಿ 4,163 ರನ್ ಗಳಿಸಿದ್ದಾರೆ. ಮಾಜಿ ನಾಯಕ ತನ್ನ ಟೆಸ್ಟ್ ವೃತ್ತಿಜೀವನದಲ್ಲಿ 10 ಶತಕ ಮತ್ತು 21 ಅರ್ಧಶತಕಗಳನ್ನು ಗಳಿಸಿದ್ದರು. ಶ್ರೀಲಂಕಾ ವಿರುದ್ಧ 199 ರನ್ ಗಳಿಕೆ ಅವರ ಗರಿಷ್ಠ ಸ್ಕೋರ್ ಆಗಿತ್ತು.ಇದು ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಪಂದ್ಯದಿಂದ ಗಳಿಸಿದ್ದಾಗಿದೆ.
2012ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಇವರು ಪಾಕಿಸ್ತಾನ ವಿರುದ್ಧ ಫೆಬ್ರವರಿ 4ಅಂದು ತಮ್ಮ ಕಡೆಯ ಪಂದ್ಯವನ್ನಾಡಿದ್ದರು. (kpc)

