

ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಶಿರಸಿಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಗುರುವಾರ ಸಿದ್ಧಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಮಂಗಳವಾರ ಶಿರಸಿಯಲ್ಲಿ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಗುರುವಾರದ ಸಿದ್ಧಾಪುರ ತಾಲೂಕಾ ಕಾಂಗ್ರೆಸ್ ಸಂಘಟನೆಯ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.
ಈ ಪ್ರತಿಭಟನೆ ಬೆಳಿಗ್ಗೆ 10 ಗಂಟೆಗೆ ನಗರದ ಸಾಗರ ವೃತ್ತದಿಂದ ಪ್ರಾರಂಭವಾಗಲಿದ್ದು ಮಧ್ಯಾ ಹ್ನ12- ಗಂಟೆಯ ನಂತರ ತಹಸಿಲ್ಧಾರ ಕಚೇರಿಯಲ್ಲಿ ಸಮಾವೇಶಗೊಳ್ಳಲಿದೆ ಎಂದು ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ತಿಳಿಸಿದ್ದಾರೆ.



