ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ, ರಾಜ್ಯ ಸರ್ಕಾರಿ ನೌಕರರ ವತಿಯಿಂದ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಎಂ. ವೆಂಕಟೇಶ್ ತಿಳಿಸಿದ್ದಾರೆ.
ಬೆಂಗಳೂರು: ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ, ರಾಜ್ಯ ಸರ್ಕಾರಿ ನೌಕರರ ವತಿಯಿಂದ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಎಂ. ವೆಂಕಟೇಶ್ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ಒಕ್ಕೂಟದ ಎಲ್ಲ ಜಿಲ್ಲಾ, ತಾಲ್ಲೂಕು ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದರು.
ಕೋವಿಡ್ -19 ನಿಂದಾಗಿ ರಾಜ್ಯ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ರದ್ದುಗೊಳಿಸಿದ್ದು, ಖಾಲಿ ಹುದ್ದೆ ಭರ್ತಿ ಮಾಡದಿರುವುದು,ಕೇಂದ್ರ ಸರ್ಕಾರದ ಕಡ್ಡಾಯ ನಿವೃತ್ತಿ ಕುರಿತ ಆದೇಶ ಸೇರಿ ವಿವಿಧ ಕ್ರಮಗಳಿಂದ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಷೇರು ಮಾರುಕಟ್ಟೆ ಆಧಾರಿತ ಎನ್ ಪಿ ಎಸ್ ರದ್ದುಪಡಿಸಿ, ಸುಧಾರಣೆ ನೆಪದಲ್ಲಿ ಇಲಾಖೆ, ಹುದ್ದೆಗಳ ಕಡಿತ, ಪೆನ್ಷನ್ ಖಾಸಗೀಕರಣ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (kpc)