
: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿ ದಿನೇಶ್ ಕಲ್ಲಹಳ್ಳಿ
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಿಜೆಪಿ ಸೋಲಿಸುವಂತೆ ಚುನಾವಣೆ ನಡೆಯುವ ಐದು ರಾಜ್ಯಗಳ ರೈತರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಮನವಿ
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ತನ್ನ ನಾಯಕರನ್ನು ಚುನಾವಣೆ ನಡೆಯುವ…

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ತನ್ನ ನಾಯಕರನ್ನು ಚುನಾವಣೆ ನಡೆಯುವ ಐದು ರಾಜ್ಯಗಳಿಗೆ ಕಳುಹಿಸಲಿದ್ದು, ಅವರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಂತೆ ಅಲ್ಲಿನ ರೈತರಿಗೆ ಮನವಿ ಮಾಡಲಿದ್ದಾರೆ ಎಂದು ರೈತ ಸಂಘಟನೆಯ ಮುಖಂಡರು ಮಂಗಳವಾರ ಹೇಳಿದ್ದಾರೆ.
ದೆಹಲಿ ಗಡಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ 100 ದಿನ ಪೂರ್ಣಗೊಳಿಸುತ್ತಿರುವುದರಿಂದ ಪ್ರತಿಭಟನಾ ನಿರತ ರೈತರು ಮಾರ್ಚ್ 6 ರಂದು ಕೆಎಂಪಿ (ವೆಸ್ಟರ್ನ್ ಪೆರಿಫೆರಲ್) ಎಕ್ಸ್‌ಪ್ರೆಸ್‌ವೇಯನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ.
ಮಾರ್ಚ್ 6 ರಂದು ಬೆಳಗ್ಗೆ 11 ಗಂಟೆಯಿಂದ ಐದು ಗಂಟೆಗಳ ಕಾಲ ಎಕ್ಸ್‌ಪ್ರೆಸ್‌ವೇಯನ್ನು ವಿವಿಧ ಕಡೆಗಳಲ್ಲಿ ಬಂದ್ ಮಾಡಲಾಗುವುದು ಎಂದು ಎಸ್‌ಕೆಎಂ ಮುಖಂಡ ಯೋಗೇಂದ್ರ ಯಾದವ್ ಅವರು ತಿಳಿಸಿದ್ದಾರೆ.
ಚುನಾವಣೆ ನಡೆಯುವ ರಾಜ್ಯಗಳ ರೈತರ ಮನವೊಲಿಸಲು ಎಸ್‌ಕೆಎಂ ನಾಯಕರು ಮಾರ್ಚ್ 12 ರಂದು ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.
ಎಸ್‌ಕೆಎಂ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಮಾತನಾಡಿ, ಎಸ್‌ಕೆಎಂ ತಂಡಗಳು ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ ಐದು ರಾಜ್ಯಗಳಿಗೆ ಭೇಟಿ ನೀಡಿ, ಬಿಜೆಪಿಯನ್ನು ಸೋಲಿಸುವಂತೆ ಅಲ್ಲಿನ ರೈತರಿಗೆ ಮನವಿ ಮಾಡುತ್ತವೆ ಎಂದರು.

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಿರುಚಿತ್ರ ನಿರ್ಮಿಸಲು ಬಂದ ಆರ್.ಟಿ ನಗರದಲ್ಲಿ ವಾಸವಿರುವ ಉತ್ತರ ಕರ್ನಾಟಕದ ಯುವತಿಯೊಬ್ಬರಿಗೆ ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ಆಕೆಯನ್ನು ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ನಂತರ ಉದ್ಯೋಗವೂ ನೀಡದೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.

ಇನ್ನು ಯುವತಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿದಾಗ, ಆಕೆಗೆ ಜೀವ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಪ್ರಕರಣದ ತನಿಖೆ ನಡೆಸಿ ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಸಂತ್ರಸ್ತೆ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಯುಕ್ತರಿಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ನೀಡಿದ್ದೇವೆ. ನಮ್ಮ ದೂರನ್ನು ಪರಿಶೀಲಿಸಿದ ಆಯುಕ್ತರು ಪ್ರಕರಣವನ್ನು ಕಬ್ಬನ್ ಪಾರ್ಕ್ ಠಾಣೆಗೆ ರವಾನಿಸಿದ್ದಾರೆ. ಅಲ್ಲಿ ಮತ್ತೆ ದೂರು ನೀಡಲಿದ್ದೇನೆ ಎಂದರು.

ಇದೊಂದು ಸೂಕ್ಷ್ಮ ವಿಚಾರ ಯುವತಿಯ ವಿವರ ಬಹಿರಂಗ ಮಾಡಲು ಸಾಧ್ಯವಿಲ್ಲ. ಅವರ ಕುಟುಂಬ ಸದಸ್ಯರು ನನ್ನನ್ನು ಸಂಪರ್ಕಿಸಿ, ನನ್ನ ನೆರವು ಕೋರಿದ್ದಾರೆ. ಅವರ ಕುಟುಂಬ ಸದಸ್ಯರು ಸೋಮವಾರ ಸಿಡಿ ನೀಡಿದ್ದಾರೆ. ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಆದ್ದರಿಂದ ನ್ಯಾಯ ಒದಗಿಸಿ ಕೊಡಿ ಎಂದು ಕೇಳಿದ್ದರು. ನಮ್ಮ ವಕೀಲರೊಂದಿಗೆ ಚರ್ಚಿಸಿ ಸಿಡಿ, ದಾಖಲೆ ಇರಿಸಿಕೊಂಡಿದ್ದೇನೆ. ಈ ಕುರಿತು ತನಿಖೆಯಾಗಲಿ ಸತ್ಯಾಸತ್ಯತೆ ಹೊರಬರಲಿ ಎಂದು ದೂರು ನೀಡಿದ್ದೇನೆ ಎಂದರು. (kpc)
