ನಾಳೆಯಿಂದ ಬಜೆಟ್ ಅಧಿವೇಶನ: ಮೊದಲೆರಡು ದಿನ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆ

ಮಾರ್ಚ್ 4ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆಗೆ ಸಾಕ್ಷಿಯಾಗಲಿದೆ. 

ಬೆಂಗಳೂರು: ಮಾರ್ಚ್ 4 ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆಗೆ ಸಾಕ್ಷಿಯಾಗಲಿದೆ. ಚರ್ಚೆಯ ನಂತರ ಎರಡೂ ಸದನಗಳ ಅಭಿಪ್ರಾಯಗಳನ್ನು ರಾಷ್ಟ್ರ ರಾಜಧಾನಿ ನವದೆಹಲಿಗೆ ರವಾನಿಸಲಾಗುವುದು.. ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಆಗಲಿದ್ದು ಅಧಿವೇಶನವು ಮಾರ್ಚ್ 31 ರವರೆಗೆ ನಡೆಯಲಿದೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿವೇಶನ ಮಾರ್ಚ್ 4 ರಿಂದ ಪ್ರಾರಂಭವಾಗಲಿದ್ದು, ಮೊದಲ ಎರಡು ದಿನಗಳನ್ನು “ಒಂದು ರಾಷ್ಟ್ರ ಒಂದು ಚುನಾವಣೆ” ಪರಿಕಲ್ಪನೆಯ ಚರ್ಚೆಗೆ ಮೀಸಲಿಡಲಾಗುವುದು ಎಂದು ಹೇಳಿದರು.

ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. “ನಾವು ಯಾವುದೇ ನಿರ್ಣಯವನ್ನು ರವಾನಿಸಲು ಅಥವಾ ನೀತಿಯನ್ನು ರೂಪಿಸಲು ಸಾಧ್ಯವಿಲ್ಲ. ಆದರೆ ಚರ್ಚಿಸಬಹುದು ಮತ್ತು ನಮ್ಮ ಅಭಿಪ್ರಾಯವನ್ನು ರಾಷ್ಟ್ರಪತಿ, ಪ್ರಧಾನಿ ಮತ್ತು ಭಾರತದ ಮುಖ್ಯ ಚುನಾವಣಾ ಆಯೋಗಕ್ಕೆ ಕಳುಹಿಸಬಹುದು, ’’ ಕಾಗೇರಿ ಹೇಳಿದ್ದಾರೆ.

ಅಧಿವೇಶನಕ್ಕೆ ಹಾಜರಾಗದ ಅಥವಾ ಗೈರು ಹಾಜರಾಗಿರುವ ಅಧಿಕಾರಿಗಳು ಮತ್ತು ಶಾಸಕರನ್ನು ಗಮನದಲ್ಲಿಟ್ಟುಕೊಂಡು ಕಾಗೇರಿ ಹಲವಾರು ದೂರುಗಳು ಬಂದಿವೆ ಎಂದು ಗಮನ ಸೆಳೆದರು. “ಶಿಸ್ತು ತರಲು, ನಾನು ಎರಡೂ ಪಕ್ಷಗಳ ಮುಖ್ಯ ನಾಯಕರೊಂದಿಗೆ ಹಾಗೂ ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದೇನೆ,” ಎಂದು ಅವರು ಹೇಳಿದರು. ಶಾಸಕಾಂಗ ಮಂಡಳಿ ಅಧ್ಯಕ್ಷ ಬಸವರಾಜ್ ಹೊರಟ್ಟಿ ಅವರೂ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪದ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಸದನದಲ್ಲಿ ಹೆಚ್ಚಿನ ಶಿಸ್ತು ತರಲು ಒತ್ತು ನೀಡುವುದಾಗಿ ಅವರು ಇದೇ ವೇಳೆ ಹೇಳಿದ್ದಾರೆ.. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *