psi,s transfer-ಟ್ರಾಫಿಕ್ ಪೊಲೀಸರು ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ

: ಗೃಹ ಸಚಿವ ಬೊಮ್ಮಾಯಿ

ಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬಾರ್ಕಿ ಬೆಂಗಳೂರಿಗೆ…. ಹನುಮಂತಪ್ಪ ಕುಂಬಾರ ಸಿದ್ಧಾಪುರಕ್ಕೆ ಸಿದ್ಧಾಪುರದಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ಉಪ ನಿರೀಕ್ಷಕರಾಗಿ ಕೆಲಸ ಮಾಡಿದ್ದ ಮಂಜುನಾಥ ಬಾರ್ಕಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ. ಇವರಿಂದ ತೆರವಾಗಿರುವ ಸಿದ್ಧಾಪುರ ಠಾಣೆಗೆ ಕಾರವಾರದಿಂದ ಮಹಾಂತಪ್ಪ (ಮಹಾಂತೇಶ್) ತಪ್ಪ ಕುಂಬಾರ ಆಗಮಿಸಿದ್ದಾರೆ. ಮಹಾಂತೇಶ್ ಇಂದು ಸಿದ್ಧಾಪುರ ಪಿ.ಎಸ್.ಆಯ್. ಆಗಿ ಅಧಿಕಾರ ಸ್ವೀಕರಿಸಿದರು.

Bengaluru traffic police

ಬೆಂಗಳೂರು: ಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ  ಜೆಡಿಎಸ್ ಸದಸ್ಯ ಎಚ್.ಎಂ.ರಮೇಶ್‍ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿಸಿಟಿವಿ ಕ್ಯಾಮೆರಾ ಇಲ್ಲದ ಕಡೆಗಳಲ್ಲಿ ಸಿಗ್ನಲ್ ಜಂಪ್, ಅತಿ ವೇಗ ವಾಹನಗಳನ್ನು ಪತ್ತೆಹಚ್ಚಲು ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ನಿಯಮ ಉಲ್ಲಂಘಿಸಿದ ಸಂದರ್ಭದಲ್ಲಿ ವಾಹನ ಮತ್ತು ಸವಾರರನ್ನು ಹಿಡಿಯಲು ಪೊಲೀಸರು ರಸ್ತೆಯಲ್ಲಿ ಅಡ್ಡಬರುವುದು ಗಮನಕ್ಕೆ ಬಂದಿದೆ. ಅಂತಹ ಸಂದರ್ಭದಲ್ಲಿ ಅಪಘಾತವಾಗದಂತೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಾನುಸಾರ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಅಂತೆಯೇ ಸದ್ಯ, ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೂರ್ವ, ಪಶ್ಚಿಮ ಮತ್ತು ಉತ್ತರ ವಲಯ ಇವೆ. ಹೊಸದಾಗಿ, ನಾಲ್ಕನೇ ವಲಯ ಅಥವಾ ದಕ್ಷಿಣ ವಲಯ ರಚಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯನ್ನು ಶೀಘ್ರವೇ ಮರು ರಚಿಸಲಾಗುವುದು ಎಂದು ಹೇಳಿದ ಬೊಮ್ಮಾಯಿ, ‘ಈ ಸಂಬಂಧ ಪೊಲೀಸ್‌ ಕಮಿಷನರ್‌ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸಮಿತಿಯಿಂದ ವರದಿ ಬರಲಿದ್ದು, ಪೊಲೀಸ್‌ ಠಾಣೆಗಳ ಗಡಿ ಪುನರ್‌ರಚಿಸಲಾಗುವುದು’ ಎಂದರು.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *