jaarkiholi & hebbaar story-ಮುಂದಿನ ಟಾರ್ಗೆಟ್ ನಾನೇ……!

ಮುಂದಿನ ಟಾರ್ಗೆಟ್ ನಾನೇ ಆಗಿರಬಹುದು: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

ನೀವು ಗಂಟೆಗಟ್ಟಲೆ ವಿಡಿಯೋ ಹಾಕಿ, ಪಂಚ್ ಮಾಡ್ತೀರಿ. ನಮ್ಮ ಸೇಫ್ಟಿಗೋಸ್ಕರ ಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ತೇಜೋವಧೆ ಮಾಡಿದರೆ ನಮಗೆ ಗತಿಯಾರು?

ಸೆಕ್ಸ್ ಸಿಡಿಯಲ್ಲಿರುವ ಮಹಿಳೆಗಾಗಿ ಪೊಲೀಸರ ಭೇಟೆ: ಆಕೆಯ ಬಗ್ಗೆ ಮಾಹಿತಿ ನೀಡಲು ಜಾರಕಿಹೊಳಿ ನಿರಾಕರಣೆ

ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ.

Ramesh jarkiholi

ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ.  ಮಹಿಳೆ ಬಗ್ಗೆ ವಿವರಣೆ ಕೇಳಲು ಪೊಲೀಸರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ, ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ.

ಬಿಜೆಪಿ ನಾಯಕನ ಜೊತೆಗಿನ ದೂರವಾಣಿ ಕರೆಗಳು, ಕಾಲ್ ರೆಕಾರ್ಡ್ ಮುಂತಾದವುಗಳ ಆಧಾರದ ಮೇಲೆ, ಸೆಕ್ಸ್ ಟೇಪ್ ನಲ್ಲಿರುವ ಮಹಿಳೆ ಆರ್ ಟಿ ನಗರದಲ್ಲಿರುವ ಮಹಿಳೆಯರ ವಸತಿ ಗೃಹದಲ್ಲಿದ್ದಳು ಎಂದು ತಿಳಿದು ಬಂದಿದೆ.

https://imasdk.googleapis.com/js/core/bridge3.445.1_en.html#goog_2082563047

2018 ರಲ್ಲಿ ಪಿಜಿಗೆ ಸೇರಿದ್ದ ಆಕೆ ರಾಜಾಜಿನಗರದ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುವುದಾಗಿ ಹೇಳಿದ್ದಳು, ಆದರೆ ಯಾವ ಕಂಪನಿ ಎಂದು ತಿಳಿಸಿರಲಿಲ್ಲ. ಸೋಮವಾರ ಸೆಕ್ಸ್ ವಿಡಿಯೋ ವೈರಲ್ ಆಗುವುದಕ್ಕೂ ಮೊದಲು ಆಕೆ ಪಿಜಿ ಖಾಲಿ ಮಾಡಿದ್ದಾಳೆ. ಆಕೆಯ ಇಬ್ಬರು ಸ್ನೇಹಿತೆಯರಿಗೂ ಕೂಡ ಅವಳ ಬಗ್ಗೆ ಮಾಹಿತಿಯಿಲ್ಲ, ಸೋಮವಾರ ಕೊನೆಯದಾಗಿ ಆಕೆಯನ್ನು ನೋಡಿದ್ದಾಗಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನೂ ಮಹಿಳಾ ಹೋರಾಟಗಾರ್ತಿ ಕೆಎಚ್ ಇಂದಿರಾ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ  ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ, ದಿನೇಶ್ ಕಲ್ಲಹಳ್ಳಿ ಮತ್ತು ರಾಜಶೇಖರ್ ಮುಲಾಲಿ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

Shivaram hebbar

ಕಾರವಾರ: ನೀವು ಗಂಟೆಗಟ್ಟಲೆ ವಿಡಿಯೋ ಹಾಕಿ, ಪಂಚ್ ಮಾಡ್ತೀರಿ. ನಮ್ಮ ಸೇಫ್ಟಿಗೋಸ್ಕರ ಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ತೇಜೋವಧೆ ಮಾಡಿದರೆ ನಮಗೆ ಗತಿಯಾರು? ಇದೇ ಕಾರಣದಿಂದಾಗಿ ನಮ್ಮ ವಿರುದ್ಧದ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವುದಾಗಿ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದರು.

ಕಾರವಾರದಲ್ಲಿ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್, ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ರಾಜಕೀಯ ಪಿತೂರಿಯಾಗಿದೆ, ಬಿಜೆಪಿ ಸರ್ಕಾರ ಬರಲು ಕಾರಣರಾದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ.

https://imasdk.googleapis.com/js/core/bridge3.445.1_en.html#goog_188719171

ರಾಜಿನಾಮೆ ನೀಡಿ ಮುಂಬಯಿಗೆ ತೆರಳಿದ್ದ ಶಾಸಕರನ್ನು ಟಾರ್ಗೆಟ್ ಮಾಡಲಾಗಿದೆ, ಮುಂದಿನ ಬಲಿಪಶು ನಾನೇ ಆಗಿರಬಹುದು, ಹೀಗಾಗಿ ನಮ್ಮ ಸೇಫ್ಟಿಗೆ ನಾವು ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದರೆ ಜನರು ನಮಗೆ  ಗೌರವ ನೀಡುತ್ತಾರೆಯೇ ಎಂದು ಪ್ರಶ್ನಿಸಿದರು, .
 (kpc)

https://www.youtube.com/watch?v=x6ritbquAZo&t=3s

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *