

ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಾರಾ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ? ಅವರ ಕಾರ್ಯದರ್ಶಿ ಏನಂತಾರೆ?
ಉತ್ತರ ಕನ್ನಡ ಜಿಲ್ಲೆಯ ಖ್ಯಾತ ರಾಜಕೀಯ ಮುಖಂಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ರಾಜಕೀಯ ಬದುಕಿಗೆ ನಿವೃತ್ತಿ ಘೋಷಿಸುತ್ತಾರಾ ಎಂಬ ಊಹಾಪೋಹ, ವದಂತಿ ಕೇಳಿಬರುತ್ತಿದೆ.
ಸಿದ್ದಾಪುರ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಭ್ರಷ್ಟಾಚಾರ, ಅನಾಚಾರ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 50 ಪೈಸೆ ದರ ಏರಿಕೆಗೆ ಬೀದಿಗಿಳಿಯುತ್ತಿದ್ದ ಬಿಜೆಪಿಯವರು ಈಗ ಎಲ್ಲಿ ಹೋಗಿದ್ದಾರೆ. ಬೆಲೆಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತದೆ ಎಂಬುದು ಪ್ರಧಾನಿಗಳಿಗೆ ಅರಿವಿದ್ದಂತ್ತಿಲ್ಲಾ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಅವರು ಇಂದು ಹಲಗೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ನಂತರ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿದರು.
ದಿನನಿತ್ಯದ ವಸ್ತುಗಳ ಬೆಲೆಯು ದಿನದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾದರೆ ದೇಶದ ಸ್ಥಿತಿ ಏನು ಎಂಬುದನ್ನು ಜನರಿಗೆ ಜಾಗೃತಿ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಮೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಗೆದ್ದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರುಗಳಿಗೆ ಪಕ್ಷ ಸಂಘಟನೆಯ ಜೊತೆಗೆ ಜನರೊಟ್ಟಿಗೆ ಹೇಗೆ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು ಎಂಬುದರ ಕುರಿತು ಮನವರಿಕೆ ಮಾಡಲು ಸಭೆಯನ್ನು ನಡೆಸಲಾಗುತ್ತಿದೆ. ಪಕ್ಷ ಸಂಘಟನೆಯ ಕೇವಲ ಜಿಲ್ಲಾ ಪಂಚಾಯತ್ ಮತ್ತು ತಾಲೂಕ್ ಪಂಚಾಯತ್ ಚುನಾವಣೆಗೆ ಮಾತ್ರ ಸೀಮಿತವಾಗಿರದೆ ನಿರಂತರವಾಗಿದ್ದು ಮುಂದಿನ ದಿನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವಂತೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಈ ರೀತಿ ಸಭೆಗಳನ್ನು ನಿರಂತರವಾಗಿ ನಡೆಸಲಾಗುತ್ತದೆ. ಅಧಿಕಾರದಲ್ಲಿರುವ ಪಕ್ಷದ ಸದಸ್ಯರು ತಾಲೂಕ ಅಧ್ಯಕ್ಷರ ನೇತೃತ್ವದಲ್ಲಿ ನಿರಂತರವಾಗಿ ಸಭೆ ನಡೆಸಿ ಅಭಿವೃದ್ಧಿಗೆ ಪೂರಕವಾದ ಚಿಂತನೆಯನ್ನು ಮಾಡಲಾಗುತ್ತದೆ ಎಂದರು.
ಈಗ ರಾಜ್ಯದಲ್ಲಿ ಕೇಳಿಬರುತ್ತಿರುವ ಸಿಡಿ ಪ್ರಕರಣದ ಕುರಿತು ಹಾಗೂ ಕೆಲವು ಸದಸ್ಯರು ಕೋರ್ಟಿಗೆ ಹೋಗಿರುವ ವಿಚಾರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅಂತಹ ಹೊಲಸು ನೀತಿಯ ಬಗ್ಗೆ ಮಾತನಾಡುವುದಿಲ್ಲ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ?. ಸಚ್ಚಾರಿತ್ರ್ಯ ಇರುವವರಾಗಿದ್ದರೆ ಏಕೆ ಕೋರ್ಟಿಗೆ ಹೋಗಬೇಕಿತ್ತು. ಯಾರು ಕೋರ್ಟಿಗೆ ಹೋಗಿದ್ದಾರೆಯೋ ಅವರು ಮಾನ ಮರ್ಯಾದೆ ಇದ್ದರೆ ಗೌರವಯುತ ವಾಗಿ ರಾಜೀನಾಮೆ ನೀಡಬೇಕು ಎಂದರು.
ಸಂಸದರು ಅನಾರೋಗ್ಯದಿಂದ ಬೇಗ ಗುಣಮುಖರಾಗಲಿ ಎಂದ ಅವರು ಸಂಸದರಾಗಿ ಇಷ್ಟು ವರ್ಷ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿಲ್ಲ. ನಮ್ಮ ಕ್ಷೇತ್ರದವರು ಸಭಾಧ್ಯಕ್ಷರ ಎಂಬ ಹೆಮ್ಮೆಯಿದೆ.ಆ ಹೆಮ್ಮೆಯಿಂದಲೇ ಅಭಿವೃದ್ಧಿಯ ಕೆಲಸವನ್ನು ಮಾಡಲಿ.
ಪಕ್ಷ ಸಂಘಟನೆ ನಿರಂತರವಾಗಿ ನಡೆಯುತ್ತಿದ್ದರೂ ಕೆಲವು ಮುಖಂಡರು ವೇದಿಕೆಯಲ್ಲಿ ಕಾಣಿಸುತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಪಕ್ಷದ ವೇದಿಕೆಯಲ್ಲಿ ಬಿಚ್ಚುಮನಸ್ಸಿನಿಂದ ಮಾತನಾಡಿ ಒಂದಾಗಿ ಮುಂದಿನ ವೇದಿಕೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುತ್ತೇವೆ ಸುದ್ದಿಗೋಷ್ಠಿಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ್ ಮನಮನೆ, ಜಿಲ್ಲಾ ಪಂಚಾಯತ್ ಸದಸ್ಯೆ ಸುಮಂಗಲ ನಾಯ್ಕ, ವಿ ಎನ್ ನಾಯ್ಕ, ಸಿ ಆರ್ ನಾಯ್ಕ, ಕೆಆರ್ ವಿನಾಯಕ್. ಜಿ ಟಿ ನಾಯ್ಕ, ಚಂದ್ರು ನಾಯ್ಕ, ಪಕ್ಷದ ಗ್ರಾಮ್ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಮುಖಂಡರು ಹಾಜರಿದ್ದರು.



ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಖ್ಯಾತ ರಾಜಕೀಯ ಮುಖಂಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ರಾಜಕೀಯ ಬದುಕಿಗೆ ನಿವೃತ್ತಿ ಘೋಷಿಸುತ್ತಾರಾ ಎಂಬ ಊಹಾಪೋಹ, ವದಂತಿ ಕೇಳಿಬರುತ್ತಿದೆ.
ಇದಕ್ಕೆ ಅವರ ಖಾಸಗಿ ಕಾರ್ಯದರ್ಶಿ ಉತ್ತರ ನೀಡಿದ್ದು ಅನಂತ ಕುಮಾರ್ ಹೆಗಡೆಯವರು ರಾಜಕೀಯಕ್ಕೆ ನಿವೃತ್ತಿ ಹೇಳುವುದಿಲ್ಲ, ಅವರ ಮಂಡಿ ಸರ್ಜರಿಯಾಗಿದ್ದು ವೈದ್ಯರು ಸಂಪೂರ್ಣ ವಿಶ್ರಾಂತಿ ಘೋಷಿಸಿದ್ದಾರೆ ಎಂದರು.
ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಜನಪ್ರಿಯರಾಗಿರುವ ಅನಂತ ಕುಮಾರ್ ಹೆಗಡೆ ಕಳೆದ ಕೆಲವು ಸಮಯಗಳಿಂದ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ, ಸೋಷಿಯಲ್ ಮೀಡಿಯಾಗಳಲ್ಲಿ ಕೂಡ ಸಕ್ರಿಯವಾಗಿಲ್ಲ, ಅನಾರೋಗ್ಯವಿದೆ, ಹಾಗಾದರೆ ಅವರು ರಾಜಕಾರಣಕ್ಕೆ ನಿವೃತ್ತಿ ಹೇಳುತ್ತಾರೆಯೇ, ಅವರ ಭವಿಷ್ಯವೇನು ಎಂಬ ಬಗ್ಗೆ ಜಿಲ್ಲಾ ಬಿಜೆಪಿ ಘಟಕದಲ್ಲಿ ಇತ್ತೀಚೆಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.
ಅವರ ಅನುಯಾಯಿಗಳು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಟ್ವೀಟ್ ಪ್ರಕಾರ ಕೇಂದ್ರ ಸರ್ಕಾರದ ಸಂಪುಟದಲ್ಲಿ ಅವರು ಮತ್ತೆ ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ನರೇಂದ್ರ ಮೋದಿಯವರ ಮೊದಲ ಅವಧಿಯ ಆಡಳಿತದಲ್ಲಿ ಅನಂತ ಕುಮಾರ್ ಹೆಗಡೆಯವರು ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾಗಿದ್ದರು. ತಮ್ಮ ಬಗ್ಗೆ ಕೇಳಿಬರುತ್ತಿರುವ ಊಹಾಪೋಹದ ಬಗ್ಗೆ ಇದುವರೆಗೆ ಅನಂತ ಕುಮಾರ್ ಹೆಗಡೆಯವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಅವರ ಖಾಸಗಿ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಬೆನ್ನು ನೋವು ಮತ್ತು ಮಂಡಿ ನೋವಿನಿಂದ ಬಳಲುತ್ತಿದ್ದ ಅನಂತ ಕುಮಾರ್ ಹೆಗಡೆಯವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ವೈದ್ಯರು ಸಂಪೂರ್ಣ ವಿಶ್ರಾಂತಿ ಸೂಚಿಸಿದ್ದಾರೆ ಎಂದರು. (kpc)
