

ಬೆಂಬಲ ಬೆಲೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ. ಕೃಷಿ ಸಂಬಂಧಿ ಹೊಸ ಕಾಯ್ದೆಗಳ ಜಾರಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಮತ್ತು ಬೆಂಬಲ ಬೆಲೆ ವ್ಯವಸ್ಥೆಗಳು ನಾಶವಾಗಲಿವೆ. ಕರ್ನಾಟಕದಲ್ಲೇ ಇದಕ್ಕೆ ಸಾಕ್ಷ್ಯ ದೊರೆತಿದೆ’ ಎಂದರು.

ಬೆಂಗಳೂರು: ಕಲಬುರ್ಗಿಯಿಂದ ಆರಂಭವಾಗಿರುವ ಬೆಂಬಲ ಬೆಲೆ ಹಕ್ಕೊತ್ತಾಯ ದೇಶದಾದ್ಯಂತ ಮುಂದುವರಿಯಲಿದೆ. ಹೋರಾಟದ ಭಾಗವಾಗಿ ಕರ್ನಾಟಕ ಸಂಯುಕ್ತ ಹೋರಾಟ ಮೈತ್ರಿಕೂಟದ ನೇತೃತ್ವದಲ್ಲಿ ರೈತರು ವಿಧಾನಸೌಧಕ್ಕೆಮುತ್ತಿಗೆ ಹಾಕಲಿದ್ದಾರೆ ಎಂದು ಅಖಿಲ ಭಾರತ ರೈತ ಸಂಘಟನೆಗಳ ಮೈತ್ರಿಕೂಟದ ಸಂಚಾಲನಾ ಸಮಿತಿ ಸದಸ್ಯ ಯೋಗೇಂದ್ರ ಯಾದವ್ ಪ್ರಕಟಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಮುಖ್ಯಸ್ಥ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಬಿ. ನಾಗೇಂದ್ರ ಯೋಗೇಂದ್ರ ಯಾದವ್ ಅವರಿಗೆ ಬೆಂಬಲ ನೀಡಿದ್ದಾರೆ. ಡಾ. ಯೋಗೆಂದ್ರ ಯಾದವ್, ಸಿಂಗ್ ಮತ್ತು ಲಂಬಾ ಅವರು ಬಳ್ಳಾರಿಗೆ ತೆರಳಿ ಅಲ್ಲಿ ಹೆಚ್ಚಿನ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ಬೆಂಬಲ ಬೆಲೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ. ಕೃಷಿ ಸಂಬಂಧಿ ಹೊಸ ಕಾಯ್ದೆಗಳ ಜಾರಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಮತ್ತು ಬೆಂಬಲ ಬೆಲೆ ವ್ಯವಸ್ಥೆಗಳು ನಾಶವಾಗಲಿವೆ. ಕರ್ನಾಟಕದಲ್ಲೇ ಇದಕ್ಕೆ ಸಾಕ್ಷ್ಯ ದೊರೆತಿದೆ’ ಎಂದರು.
ಹೈಬ್ರಿಡ್ ಜೋಳಕ್ಕೆ ಕ್ವಿಂಟಾಲ್‌ಗೆ 2,600 ರೂ. ಪಡೆಯುವ ಬದಲು 1,728 ರೂ. ಮತ್ತು ಮೆಕ್ಕೆ ಜೋಳಕ್ಕೆ ಕ್ವಿಂಟಾಲ್‌ಗೆ 1,850 ರೂ ಬದಲು ಕಾ ಕೇವಲ 1,459 ರೂ. ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ದ್ವಿದಳ ಧಾನ್ಯಗಳು ಸೇರಿದಂತೆ ಅನೇಕ ಧಾನ್ಯಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
ಕೇಂದ್ರದ ಕೃಷಿ ಕಾಯ್ದೆ ತಿದ್ದುಪಡಿ ನೀತಿಯನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಈಗಾಗಲೇ ಜಯ ಸಿಕ್ಕಿದೆ. ಸುದೀರ್ಘ ರೈತ ಚಳುವಳಿಯಿಂದ ಜನಪರ ಹೋರಾಟಕ್ಕೆ ಮತ್ತಷ್ಟುಬಲ ಬಂದಿದೆ. ರೈತರು ಒಗ್ಗೂಡಲು ಸಾಧ್ಯವಾಗಿದೆ. ಇನ್ನು ಮುಂದೆ ಯಾವುದೇ ಸರ್ಕಾರಗಳು ರೈತ ವಿರೋಧಿ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ಮುಖಂಡ ಯೋಗೇಂದ್ರ ಯಾದವ್ ತಿಳಿಸಿದ್ದಾರೆ. (kpc)
