ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಬೆಂಗಳೂರು: ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಸಿಡಿ ಪ್ರಕರಣದ ನಂತರ ಮೊದಲ ಬಾರಿ ಮಾಧ್ಯಮಗಳ ಮುಂದೆ ಕಾಣಿಸಲಿರುವ ಮಾಜಿ ಸಚಿವರ ಈ ಸುದ್ದಿಗೋಷ್ಯಿಯಲ್ಲಿ ಯಾವ ವಿಷಯ ಬಹಿರಂಗ ಪಡಿಸಲಿದ್ದಾರೆ ಎಂಬುದು ಎಲ್ಲರಲ್ಲೂ ಕುತೂಹೂಲ ಮೂಡಿಸಿದೆ.
https://imasdk.googleapis.com/js/core/bridge3.446.1_en.html#goog_891953513
ಸಿಡಿ ಬಹಿರಂಗವಾದ ಬಳಿಕ ರಾಜೀನಾಮೆ ನೀಡಿದ್ದ ರಮೇಶ್ ನಂತರ ಮಾಧ್ಯಮಗಳಿಂದ ದೂರ ಉಳಿದಿದ್ದರು. ಇದೀಗ ಅಜ್ಞಾತ ಸ್ಥಳದಿಂದ ಆಚೆ ಬಂದು ಬೆಳಗ್ಗೆ 10.30ಕ್ಕೆ ಸದಾಶಿವನಗರದ ಮನೆಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದವರು ರಮೇಶ್ ಜಾರಕಿಹೊಳಿ. ಸರ್ಕಾರದಲ್ಲಿ ಪ್ರಭಾವಿ ಖಾತೆ ಪಡೆಯುವ ಮೂಲಕ ಬಿಜೆಪಿ ಸರ್ಕಾರದಲ್ಲಿ ಶಕ್ತಿ ಹೆಚ್ಚಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ಈಗ ಮಾಜಿ ಸಚಿವರು. ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು (kpc)