

ಸ್ವಾತಂತ್ರ್ಯ ದಿನಾಚರಣೆಯ ‘ಅಮೃತ ಮಹೋತ್ಸವ’; ಮಾ.12ರಿಂದ 75 ವಾರ 75 ಕಡೆಗಳಲ್ಲಿ ಆಚರಣೆ: ಪ್ರಹ್ಲಾದ್ ಜೋಷಿ
ದೇಶಕ್ಕೆ ಮುಂದಿನ ವರ್ಷ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾಗುತ್ತಿದ್ದು, ಈ ಸಂದರ್ಭದಲ್ಲಿ ಸ್ಮರಣಾರ್ಥ ಕಾರ್ಯಕ್ರಮವಾಗಿ ನಾಡಿದ್ದು ಶುಕ್ರವಾರದಿಂದ 75 ಸ್ಥಳಗಳಲ್ಲಿ 75 ವಾರಗಳ ಕಾರ್ಯಕ್ರಮ ನಡೆಸಲಾಗುತ್ತದೆ. ಎಲ್ಲಾ ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಪ್ರಧಾನಿಯವರು ಸಲಹೆ ನೀಡಿದ್ದಾರೆ.


ನವದೆಹಲಿ: ಪಂಚರಾಜ್ಯಗಳ ಚುನಾವಣಾ ಹೊಸ್ತಿಲಿನಲ್ಲಿ ದೆಹಲಿಯಲ್ಲಿ ಬುಧವಾರ ಬಿಜೆಪಿ ಸಂಸದೀಯ ಪಕ್ಷ ಸಭೆ ಏರ್ಪಟ್ಟಿತ್ತು.
ಕೋವಿಡ್-19 ಸಾಂಕ್ರಾಮಿಕ ಇನ್ನೂ ದೇಶದಿಂದ ಸಂಪೂರ್ಣವಾಗಿ ನಿರ್ಮೂಲನೆಯಾಗದಿರುವ ಸಂದರ್ಭದಲ್ಲಿ ಆದಷ್ಟು ಲಸಿಕೆ ಅರ್ಹ ವ್ಯಕ್ತಿಗಳಿಗೆ ತಲುಪುವಂತೆ ಮಾಡಲು ಬಿಜೆಪಿ ಸಂಸದರು ಮತ್ತು ಪಕ್ಷದ ಕಾರ್ಯಕರ್ತರು ಸಹಕರಿಸಬೇಕೆಂದು, ಎಲ್ಲಾ ಸಂಸದರು ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಆಯೋಜಕರ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.
ಅಮೃತ ಮಹೋತ್ಸವ: ದೇಶಕ್ಕೆ ಮುಂದಿನ ವರ್ಷ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾಗುತ್ತಿದ್ದು, ಈ ಸಂದರ್ಭದಲ್ಲಿ ಸ್ಮರಣಾರ್ಥ ಕಾರ್ಯಕ್ರಮವಾಗಿ ನಾಡಿದ್ದು ಶುಕ್ರವಾರದಿಂದ 75 ಸ್ಥಳಗಳಲ್ಲಿ 75 ವಾರಗಳ ಕಾರ್ಯಕ್ರಮ ನಡೆಸಲಾಗುತ್ತದೆ. ಎಲ್ಲಾ ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಪ್ರಧಾನಿಯವರು ಸಲಹೆ ನೀಡಿದ್ದಾರೆ.
ಅಮೃತ ಮಹೋತ್ಸವ ಕಾರ್ಯಕ್ರಮ ಮಾರ್ಚ್ 12ರಂದು ಗುಜರಾತ್ ನ ಸಬರ್ಮತಿ ಆಶ್ರಮದಲ್ಲಿ ಆರಂಭಿಸಲಾಗುತ್ತಿದ್ದು, ದೇಶದ 75 ಕಡೆಗಳಲ್ಲಿ 75 ವಾರಗಳ ಕಾಲ ನಡೆಯಲಿದೆ. ಎಲ್ಲಾ ಸಂಸದರು ಅಮೃತ ಮಹೋತ್ಸವದಲ್ಲಿ ಭಾಗಿಯಾಗಬೇಕೆಂದು ಪ್ರಧಾನಿ ಕರೆ ನೀಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. (kpc)






_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
