ಶಿವರಾಜ್‌ಕುಮಾರ್ 125ನೇ ಚಿತ್ರ ‘ವೇದ’

ಶಿವರಾಜ್‌ಕುಮಾರ್ ಮತ್ತು ನಿರ್ದೇಶಕ ಹರ್ಷ ಶಿವಣ್ಣನ 125ನೇ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೇ ತಿಳಿದಿದೆ. ಇಂದಿನ ಹೊಸ ವಿಷಯವೆಂದರೆ ಈ ಸಿನಿಮಾಗೆ ಶೀರ್ಷಿಕೆ ಫಿಕ್ಸ್ ಆಗಿದೆ.

ಶಿವರಾಜ್‌ಕುಮಾರ್ ಮತ್ತು ನಿರ್ದೇಶಕ ಹರ್ಷ ಶಿವಣ್ಣನ 125ನೇ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೇ ತಿಳಿದಿದೆ. ಇಂದಿನ ಹೊಸ ವಿಷಯವೆಂದರೆ ಈ ಸಿನಿಮಾಗೆ ಶೀರ್ಷಿಕೆ ಫಿಕ್ಸ್ ಆಗಿದೆ. ಈ ಚಿತ್ರಕ್ಕೆ “ವೇದ” ಎಂದು ಹೆಸರಿಡಲಾಗಿದೆ ಮತ್ತು “ದಿ ಬ್ರೂಟಲ್ 1960” ಎಂದು ಟ್ಯಾಗ್ ಲೈನ್ ಸಹ ಕೊಡಲಾಗಿದೆ. ಮಹಾಶಿವರಾತ್ರಿಯ ದಿನವಾದ ಗುರುವಾರ ಬೆಳಿಗ್ಗೆ ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ಶಿವರಾಜ್‌ಕುಮಾರ್ ಹೋಮ್ ಬ್ಯಾನರ್ ನಿರ್ಮಾಣದ ಮೊದಲ ಚಲನಚಿತ್ರ ಇದಾಗಿದ್ದು ಮೂಲವೊಂದರ ಪ್ರಕಾರ, ಶಿವರಾತ್ರಿಯ ಸಂದರ್ಭದಲ್ಲಿ ಸರಳ ಪೂಜೆ ಮತ್ತು ಪೋಸ್ಟರ್ ಬಿಡುಗಡೆಯೊಂದಿಗೆ ಇದರ ಬಗ್ಗೆ ಪ್ರಕಟಣೆ ಹೊರಡಿಸಲಾಗುತ್ತದೆ.

1960 ರ ದಶಕದ ಕಥಾವಸ್ತುವನ್ನು ಈ ಸಿನಿಮಾ ಹೊಂದಿರಲಿದೆ ಎಂದು ಚಿತ್ರದ ಟ್ಯಾಗ್ ಲೈನ್ ಸುಳೀವು ನೀಡುತ್ತಿದೆ. ಹಳ್ಳಿಯ ಕಥಾನಕ ಇದಾಗಿದ್ದು ಈ ಚಿತ್ರದ ಮೂಲಕ ನಟ-ನಿರ್ದೇಶಕ ಜೋಡಿ ನಾಲ್ಕನೇ ಬಾರಿ ಒಟ್ಟಿಗೆ ಸೇರುತ್ತಿದೆ. ಈ ಹಿಂದೆ “ವಜ್ರಕಾಯ”, “ಭಜರಂಗಿ” ಹಾಗೂ ಇನ್ನೂ ಬಿಡುಗಡೆಯಾಗಬೇಕಿರುವ “ಭಜರಂಗಿ 2” ಚಿತ್ರದಲ್ಲಿ ಇವರು ಒಂದಾಗಿ ಕೆಲಸ ಮಾಡಿದ್ದಾರೆ.

Bild

ಸೆಂಚುರಿ ಸ್ಟಾರ್ ಶಿವಣ್ಣ ಸಧ್ಯ “ಶಿವಪ್ಪ” ಸಿನಿಮಾ ಚಿತ್ರೀಕರಣದಲ್ಲಿದ್ದಾರೆ. ವಿಜಯ್ ಮಿಲ್ಟನ್ ನಿರ್ದೇಶನದ ಈ ಚಿತ್ರವು ಪ್ರಸ್ತುತ ಚಿತ್ರೀಕರಣ ಹಂತದಲ್ಲಿದೆ. ತಂಡವು ತಮ್ಮ ಎರಡನೇ ಶೆಡ್ಯೂಲ್ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ. ಅವರ ಮುಂದಿನ ಮತ್ತು 124 ನೇ ಚಿತ್ರ ಲೇಖಕರೂ ಆದ ನಿರ್ದೇಶಕ ರಾಮ್ ಧುಲಿಪುಡಿ ಅವರದ್ದಾಗಿದ್ದು ಹರ್ಷ ಜತೆಗಿನ ಸಿನಿಮಾ ಈ ವರ್ಷ ಜೂನ್ ಅಥವಾ ಜುಲೈನಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇದೆ. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *