

ಸಾಲು ಸಾಲು ರಜೆ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಕಡಕೇರಿ ಹಾಲು ಉತ್ಪಾದಕ ಸಹಕಾರಿ ಸಂಘದ ಸಾಂದ್ರಶೀಥಲಿಕರಣ ಘಟಕದ ನಿರ್ಮಾಣಕ್ಕೆ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಬಂದ 3.5 ಲಕ್ಷ ಅನುದಾನವನ್ನು kmf ನಿರ್ದೇಶಕ ಪಿ.ವಿ.ನಾಯ್ಕ ರವರು ಸಂಘಕ್ಕೆ ಧಾರವಾಡ ಸಹಕಾರಿ ಹಾಲು ಒಕ್ಕೂಟದ ಪರವಾಗಿ ವಿತರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ವಿ.ಜಿ.ಹೆಗಡೆ ಸಂಘದ ಆಡಳಿತ ಮಂಡಳಿ ಸದಸ್ಯರು ಮುಖ್ಯಕಾರ್ಯನಿರ್ವಾಹಕರು ಹಾಗೂ ಸಿದ್ದಾಪುರ ತಾಲೂಕಿನ ವಿಸ್ತರಣಾಧಿಕಾರಿಗಳಾದ ಶ್ರೀ ಪ್ರಕಾಶ್.ಕೆ ಭಾಗವಹಿಸಿದ್ದರು…



ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇನ್ನೊಂದೇ ದಿನವಷ್ಟೇ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.
ಇತ್ತೀಚಿಗೆ ನಡೆದ ಸಂಧಾನ ಸಭೆಯಲ್ಲಿ ಯಾವುದೇ ರೀತಿ ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ. ಈ ಹಿನ್ನೆಲೆ ಮಾರ್ಚ್ 15 ಮತ್ತು 16 ರಂದು ಸುಮಾರು 10 ಲಕ್ಷ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ)ತಿಳಿಸಿದೆ. ಇದಲ್ಲದೆ, ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಮರುಪರಿಶೀಲಿಸಲು ಒಂದು ವೇಳೆ ಸರ್ಕಾರವು ಒಪ್ಪಿದರೆ ಮುಷ್ಕರವನ್ನು ಮರುಪರಿಶೀಲಿಸುವುದಾಗಿ ಬ್ಯಾಂಕ್ ನೌಕರರ ಸಂಘಟನೆಗಳು ಹೇಳಿವೆ.
ಮಾರ್ಚ್.15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್.13 ಎರಡನೇ ಶನಿವಾರವಾಗಿದ್ದು, ಮಾರ್ಚ್.14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ. (kpc)

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
