ಶ್ರೀರಾಮನ ಬಗ್ಗೆ ಭೈರಪ್ಪ ಮಾತನಾಡಿದರೆ ಸುಮ್ಮನಿರುತ್ತಾರೆ, ಭಗವಾನ್ ಮಾತಾಡಿದರೆ ಮಸಿ ಬಳಿಯುತ್ತಾರೆ: ಹರಿಪ್ರಸಾದ್ ಕಿಡಿ

ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

SL Bhyrappa

ಬೆಂಗಳೂರು: ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.

ಮೇಲ್ಮನೆಯಲ್ಲಿ ಮಾತನಾಡಿದ ಹರಿಪ್ರಸಾದ್, ಸಾಹಿತಿ ಎಸ್.ಎಲ್ ಭೈರಪ್ಪ ರಾಮ ದೇವರಲ್ಲ, ಕೇವಲ ರಾಜ ಎಂದು ಹೇಳಿದ್ದಾರೆ. ರಾಮ,ಕೃಷ್ಣರ ಬಗ್ಗೆ ಮಾತಾಡುತ್ತಾರೆ. ದ್ರೌಪದಿ ಬಗ್ಗೆ ಬರೆಯುತ್ತಾರೆ. ಅವರು ನಿಮ್ಮವರು ಎಂದು ಸುಮ್ಮನಿರುತ್ತಾರೆ. 

ಅದೇ ಭಗವಾನ್ ಹೇಳಿದರೆ ಮಸಿ ಬಳಿಯುತ್ತಾರೆ. ಇಂತಹ ದ್ವಂದ್ವ ನೀತಿ ಏಕೆ? ಸಂಘ ಪರಿವಾರದವರು ಮಾತನಾಡಿದರೆ ಸುಮ್ಮನಿದ್ದು ಬೇರೆಯವರು ಮಾತನಾಡಿದರೆ ಆಕ್ಷೇಪ‌ ವ್ಯಕ್ತಪಡಿಸುವುದು ಸರಿಯಲ್ಲ. ಭೈರಪ್ಪ ಅವರ ‘ಪರ್ವ’ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ರೂ. ಕೊಡಲಾಗುತ್ತಿದೆ.

ನಿಮ್ಮ ಸಾಹಿತಿಗೆ ನೀವೇ ಪ್ರಶಸ್ತಿ ಕೊಡಿಸಿ ನಾಟಕ್ಕೂ ಹಣ ಕೊಟ್ಟಿದ್ದೀರಿ ಎಂದಾಗ ಇದಕ್ಕೆ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿ, ಭೈರಪ್ಪ ಅವರ ನಾಟಕ ‌ಸರಿಯಿಲ್ಲ‌ ಎನ್ನುವ ಹಕ್ಕು ನಿಮಗಿಲ್ಲ. ಭೈರಪ್ಪ ಜನ ಮಾನ್ಯರ ಬಗ್ಗೆ ಬರೆದಿದ್ದಾರೆ. ಅವರ ಕಾದಂಬರಿ, ಬರಹಕ್ಕೆ ಪ್ರಶಸ್ತಿ ಸಿಕ್ಕಿದೆ. ಅವರ ಒಂದು ಶಬ್ದ ಹಿಡಿದು ಈ ರೀತಿ ಹೇಳಿದರೆ ಸರಿಯಲ್ಲ ಎಂದು ಟೀಕಿಸಿದರು.

ಈ ವೇಳೆ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, ವಿಶ್ವಮಾನವ ಸಂದೇಶ ಸಾರಿದ ಕುವೆಂಪು ರಚಿತ ಮಲೆಗಳಲ್ಲಿ ಮದುಮಗಳು ನಾಟಕಕ್ಕೆ ಯಾವ ಸರ್ಕಾರವೂ ನೆರವಿಗೆ ಬರಲಿಲ್ಲ. ಈಗ‌ ಪರ್ವಕ್ಕೆ ಸಹಕಾರ ಏಕೆ? ಈ ತಾರತಮ್ಯ ಸರಿಯಲ್ಲ, ಎಷ್ಟೆಲ್ಲಾ ಬರಹಗಾರರು, ಕಾದಂಬರಿಕಾರರಿದ್ದಾರೆ. ಆದರೆ ಅದೆಲ್ಲಾ ಬಿಟ್ಟು ಭೈರಪ್ಪ ಅವರ ನಾಟಕಕ್ಕೆ ಮಾತ್ರ ಅನುದಾನ ಕೊಟ್ಟಿರುವುದು ನಾಗರಿಕ‌ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಬಿಜೆಪಿಗರು ಸಾಹಿತಿಗಳಲ್ಲೇ ಏಕೆ ತಾರತಮ್ಯ ಮಾಡುತ್ತೀರಿ. ಬೈರಪ್ಪ ಕಾದಂಬರಿಯನ್ನು ನಾಟಕ ಮಾಡಲು 1 ಕೋಟಿ ಕೊಟ್ಟಿದ್ದಾರೆ. ಇಂತಹ ತಾರತಮ್ಯ ನಿಲ್ಲಬೇಕು ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *