
ಕೊರೋನಾ 2ನೇ ಅಲೆಯನ್ನು ಸಾಧ್ಯವಾದಷ್ಟು ಬೇಗ ತಡೆಯಬೇಕು. ಇಲ್ಲದಿದ್ದರೆ ದೇಶಾದ್ಯಂತ ಮಹಾಮಾರಿ ಮಹಾ ಸ್ಫೋಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ಕೊರೋನಾ 2ನೇ ಅಲೆಯನ್ನು ಸಾಧ್ಯವಾದಷ್ಟು ಬೇಗ ತಡೆಯಬೇಕು. ಇಲ್ಲದಿದ್ದರೆ ದೇಶಾದ್ಯಂತ ಮಹಾಮಾರಿ ಮಹಾ ಸ್ಫೋಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವುದರಿಂದ ವಿಡಿಯೋ ಕಾನ್ಫೆರನ್ಸ್ ಮೂಲಕ ಸಿಎಂಗಳ ಜೊತೆ ಮಾತನಾಡಿದ ಪ್ರಧಾನಿ ಮೋದಿ ಅವರು, ಮಾಸ್ಕ್ ಕಡ್ಡಾಯ ಮಾಡಬೇಕು. ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು. ಅಲ್ಲದೆ ಕ್ಲಿನಿಕಲ್ ಸೌಲಭ್ಯ ಹೆಚ್ಚು ಮಾಡುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಮಾಸ್ಕ್ ಧರಿಸುವ ವಿಚಾರದಲ್ಲಿ ಕಠಿಣ ಕ್ರಮ ಅನಿವಾರ್ಯ. ಮಾಸ್ಕ್ ಧರಿಸುವುದನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ. ಇದು ಸ್ಥಳೀಯ ಜಿಲ್ಲಾಡಳಿತದ ವೈಫಲ್ಯವಾಗಿದೆ. ರಾಜ್ಯಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಅಗತ್ಯವಾಗಿದ್ದು ಹಳ್ಳಿಗಳಿಗೆ ಸೋಂಕು ವ್ಯಾಪಿಸಿದರೆ ಕಷ್ಟ. ಹೀಗಾಗಿ ಚಿಕ್ಕ ಚಿಕ್ಕ ಪಟ್ಟಣಗಳಲ್ಲೂ ಪರೀಕ್ಷೆಗಳನ್ನು ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ.
ದೇಶದಲ್ಲಿ ಕೊರೋನಾ ಎರಡನೇ ಅಲೆ ಕಂಡು ಬರುತ್ತಿದೆ. ಭಾರತದಲ್ಲಿ ಶೇ. 96 ಹೆಚ್ಚು ಪ್ರಕರಣಗಳು ಚೇತರಿಸಿಕೊಂಡಿವೆ. ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವು ಸಹ ಒಂದು ಎಂದರು. ಸೋಂಕಿತ ವ್ಯಕ್ತಿಯನ್ನು ಶೀಘ್ರದಲ್ಲಿ ಪತ್ತೆ ಹಚ್ಚಬೇಕು. ಆರ್ ಟಿಪಿಸಿಆರ್ ಶೇ. 70ರಷ್ಟು ಹೆಚ್ಚಿಸಬೇಕು. ನಗರಗಳಿಗೆ ಸೋಂಕು ಹೆಚ್ಚು ವ್ಯಾಪಿಸುತ್ತಿದೆ. ಮೊದಲು ಟಿ1 ನಗರಗಳಲ್ಲಿ ಸೋಂಕು ಹೆಚ್ಚಿತ್ತು. ಹೀಗಾಗಿ ಸಣ್ಣ ಊರುಗಳಲ್ಲಿ ಹೆಚ್ಚು ಮಾಡಬೇಕು. ಟೆಸ್ಟಿಂಗ್ ಹೆಚ್ಚಿಸದಿದ್ದರೆ ಪರಿಸ್ಥಿತಿ ಗಂಭೀರವಾಗಿರುತ್ತದೆ ಎಂದರು.
ದೇಶದಲ್ಲಿ ಲಸಿಕೆಗಳು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ. ಲಸಿಕೆ ವೇಸ್ಟ್ ಆಗದಂತೆ ಟಾರ್ಗೆಟ್ ಹಾಕಿಕೊಳ್ಳಬೇಕು. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರಪ್ರದೇಶಗಳಲ್ಲಿ ವ್ಯಾಕ್ಸಿನ್ ವ್ಯರ್ಥವಾಗುತ್ತಿದೆ ಎಂದರು. (kpc)



