ಹಳದಿಪುರ ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ಹೊನ್ನಾವರ ಪೊಲೀಸರು

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ದಿನಾಂಕ 01-03-2021 ರಂದು ಮಧ್ಯಾಹ್ನ 01:00 ಗಂಟೆಯಿಂದ ರಾತ್ರಿ 08:00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ಪಿರ್ಯಾಧಿ ಶ್ರೀ ಗಣಪತಿ ಸಭಾಹಿತ ಸಾ// ಅಗ್ರಹಾರ ಹಳದಿಪುರ ಗ್ರಾಮ ಹೊನ್ನಾವರ ತಾಲೂಕು ಇವರು ಹೊನ್ನಾವರ ಠಾಣೆಯಲ್ಲಿ ನೀಡಿದ್ದ ದೂರಿನ ಮೇರೆಗೆ ಅಪರಾಧ ಸಂಖ್ಯೆ 55/2021 ಕಲಂ 454, 457, 380 ಐಪಿಸಿ ರೀತ್ಯ ಪ್ರಕರಣ ದಾಖಲಾಗಿದ್ದು ಇರುತ್ತದೆ.

ಶ್ರೀ ಶಿವಪ್ರಕಾಶ ದೇವರಾಜು ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ, ಶ್ರೀ ಎಸ್. ಬದ್ರಿನಾಥ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ ಹಾಗೂ ಶ್ರೀ ಬೆಳ್ಳಿಯಪ್ಪ ಮಾನ್ಯ ಪೊಲೀಸ್ ಉಪಾಧೀಕ್ಷಕರು ಭಟ್ಕಳ ಉಪವಿಭಾಗ ಭಟ್ಕಳ ರವರ ಮಾರ್ಗದರ್ಶನದಲ್ಲಿ ಶ್ರೀಧರ ಎಸ್.ಆರ್ ಸಿ‌.ಪಿ.ಐ ಹೊನ್ನಾವರ ವೃತ್ತ ರವರ ನೇತೃತ್ವದಲ್ಲಿ ಹೊನ್ನಾವರ ಠಾಣೆಯ ಅಧಿಕಾರಿ ಸಿಬ್ಬಂದಿಯವರಾದ 1) ಶ್ರೀ ಶಶಿಕುಮಾರ ಪಿ.ಎಸ್.ಐ ಕಾ&ಸು 2) ಶ್ರೀಮತಿ ಸಾವಿತ್ರಿ ನಾಯಕ ಪಿ.ಎಸ್.ಐ ಕ್ರೈಂ, 3) ಶ್ರೀ ಗಣೇಶ ಎಚ್ ನಾಯ್ಕ ಎ.ಎಸ್.ಐ , 4) ಸಿ.ಎಚ್.ಸಿ ಶ್ರೀ ಕೃಷ್ಣಾ ಡಿ ಗೌಡ, 5) ಸಿ.ಎಚ್.ಸಿ ಶ್ರೀ ಉದಯ ಮಗದೂರ, 6) ಸಿ.ಎಚ್.ಸಿ ರಮಾನಂದ ನಾಯ್ಕ 7) ಸಿ.ಎಚ್.ಸಿ ಶಿವಾನಂದ ಚಿತ್ರಗಿ 8) ಸಿಪಿಸಿ ಶ್ರೀ ರಮೇಶ ಲಮಾಣಿ 9) ಸಿಪಿಸಿ ರಯೀಸ್ ಭಗವಾನ್ 10) ಸಿಪಿಸಿ ಮಹಾವೀರ 11) ಎ.ಎಚ್.ಸಿ ಶ್ರೀ ಚಂದ್ರು ನಾಯ್ಕ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿಯವರಾದ 12) ಸಿ.ಎಚ್.ಸಿ ಶ್ರೀ ಸುಧೀರ್ ಮಡಿವಾಳ, 13) ಸಿಪಿಸಿ ಶ್ರೀ ರಮೇಶ ನಾಯ್ಕ ಇವರನ್ನೊಳಗೊಂಡ ತಂಡವು ದೇವಸ್ಥಾನ ಕಳ್ಳತನ ಪ್ರಕರಣವನ್ನು ಬೇಧಿಸಿ *ಆರೋಪಿ ಅನಿಲ ತಂದೆ ವೆಂಕಟೇಶ ರಾಯ್ಕರ ಪ್ರಾಯ 33 ವರ್ಷ ಸಾ// ಸೋನಾರಕೇರಿ ಕರ್ಕಿ, ಹೊನ್ನಾವರ ತಾಲೂಕು ಈತನನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸ್ತಗಿರಿ ಮಾಡಿ ಅರೋಪಿಯಿಂದ ಕಳುವಾದ ಸುಮಾರು ರೂ.84000/- ಮೌಲ್ಯದ 21 ಗ್ರಾಂ ಚಿನ್ನ ವನ್ನು ಹಾಗೂ ರೂ.4000 /- ಮೌಲ್ಯದ ಮೊಬೈಲ್ ಪೋನ್ ನ್ನು ಜಪ್ತುಪಡಿಸಿಕೊಂಡಿರುತ್ತಾರೆ*. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿರುತ್ತಾನೆ‌. ದೇವಸ್ಥಾನ ಕಳ್ಳತನ ಪ್ರಕರಣದ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿ ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ ರವರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *