national level achivement- local news- ಕಿರಿಯರ ಸಾಧನೆಗೆ ಹಿರಿಯರ ಮೆಚ್ಚುಗೆ

ಹಾಳದಕಟ್ಟಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ,
ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಳದಕಟ್ಟಾ, ಸಹಯಾನ ( ಡಾ ಆರ್.ವಿ. ಭಂಡಾರಿ ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರ) ಸಹಯೋಗದೊಂದಿಗೆ ತಾಲೂಕ ಮಟ್ಟದ ಅಸ್ಪೃಶ್ಯತೆ ಆಚರಣೆ ವಿರೋಧಿ ಜಾಗೃತಿ “ಪ್ರೀತಿ ಪದಗಳ ಪಯಣ” ನಡೆಯಿತು. ಈ ಕಾರ್ಯಕ್ರಮದಲ್ಲಿ ಎಂಜಿಸಿ ಕಾಲೇಜಿನ ಕನ್ನಡ ವಿಭಾಗದ ಡಾ. ವಿಠ್ಠಲ ಭಂಡಾರಿ ಸಂಪಾದನೆಯ ವೀಸಕ್ಕಾಗಿ ಕಾಯುವ ಜನ ( ಅಂಬೇಡ್ಕರ್ ಅವರ ಅನುಭವ ಕಥನ) ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾ ಪಂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್, ಸಿದ್ಧಾಪುರ ಹಿತರಕ್ಷಣಾ ಸಮಿತಿಯ ಎಚ್ಕೆ ಶಿವಾನಂದ, ಅಂಬೇಡ್ಕರ ಶಕ್ತಿ ಯುವಕ ಸಂಘದ ಅಧ್ಯಕ್ಷ ನಂದನ್ ಬೋರ್ಕರ್,ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಿ ಆಯ್ ಪರ್ನೇಕರ, ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ಬಸವರಾಜ್ ಬಂಡೆರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಿ ಎಸ್ ಹೆಗಡೆ,ಎಂಜಿಸಿ ಕಾಲೇಜಿನ ಕನ್ನಡ ವಿಭಾಗದ ವಿಠ್ಠಲ ಭಂಡಾರಿ, ಪಿ ಎಸ್ ಐ ಮಹಾಂತಪ್ಪ ಕುಂಬಾರ್ ಇದ್ದರು.

ಸಿದ್ಧಾಪುರ ತಾಲೂಕಿನ ಅವರಗುಪ್ಪಾದ ಎಂ.ಸಿ.ನಾಯ್ಕ ಶಿರಗಳ್ಳೆಯವರ ಮಗಳು ಪ್ರಥ್ವಿ ಮಹಾಬಲೇಶ್ವರ ನಾಯ್ಕ ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾಳೆ. ನಿರ್ಮಾಣ ತಂತ್ರಜ್ಞಾನ ಮತ್ತು ನಿರ್ವಹಣೆ ವಿಷಯದ ಬಿ.ಇ. ಪದವಿಯಲ್ಲಿ ಈ ಸಾಧನೆ ಮಾಡಿರುವ ಪ್ರಥ್ವಿ ನಾಯ್ಕರಿಗೆ ಸ್ಥಳಿಯರು ಅಭಿನಂದಿಸಿದ್ದಾರೆ.

ಮಹ್ಮದ ದಾನಿಶ ಶರೀಪ್ ಸಾಬ್.
ಸಿದ್ದಾಪುರ
ಮಹ್ಮದ ದಾನಿಷ್ ಶರೀಫ್ ಸಾಬ್ ಹಾರ್ಸಿಕಟ್ಟಾ ಏ.5ರಿಂದ ಪಂಜಾಬ ರಾಜ್ಯದ ಚಂಡೀಗಡದಲ್ಲಿ ನಡೆಯಲಿರುವ ರಾಷ್ಟ್ರೀಯಮಟ್ಟದ ರೋಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿಗೆ 14ವರ್ಷದೊಳಗಿನ ಬಾಲಕರ ಕರ್ನಾಟಕ ರಾಜ್ಯ ರೋಲರ್ ಸ್ಕೆಟಿಂಗ್ ಹಾಕಿ ತಂಡಕ್ಕೆ ಆಯ್ಕೆ ಆಗಿದ್ದಾರೆ.
ಕೈಗಾದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬಂಗಾರದ ಪದಕ ಪಡೆಯುವುದರ ಮೂಲಕ ರಾಜ್ಯ ತಂಡಕ್ಕೆ ಆಯ್ಕೆ ಆಗಿದ್ದಾರೆ. ಈತ ಯಲ್ಲಾಪುರದ ಮದರ್ ತೆರೆಸಾ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದು ಸ್ಥಳೀಯ ರೊಲರ್ ಸ್ಕೆಟಿಂಗ್ ಕ್ಲಬ್‍ನಲ್ಲಿ ದಿಲಿಪ್ ಹಣಬರ್ ಹಾಗೂ ಅಜಯ ಗಾವಡಾ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಯಲ್ಲಾಪುರದ ತಾಮೀರ್ ಕೋಆಪರೇಟಿವ್ ಬ್ಯಾಂಕ್‍ನ ವ್ಯವಸ್ಥಾಪಕ ಶರೀಫ್ ಹಸನ್ ಸಾಬ್ ಹಾರ್ಸಿಕಟ್ಟಾ ಹಾಗೂ ತೆಲಂಗಾರ ಸಹಿಪ್ರಾ ಶಾಲಾ ಶಿಕ್ಷಕಿ ಶಂಶಾದ ಶರೀಫ್ ಸಾಬ್ ಹಾರ್ಸಿಕಟ್ಟಾ ದಂಪತಿ ಪುತ್ರ.

ಸ.ಹಿ.ಪ್ರಾ.ಶಾಲೆ ಸಿದ್ದಾಪುರ ಶಿರಸಿ ಶೈಕ್ಷಣಿಕ ಜಿಲ್ಲೆ
ಸನ್ಮಾನ ಕಾರ್ಯಕ್ರಮ
ಸಿದ್ದಾಪುರ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಶ್ರೀಮತಿ ಸವಿತಾ ಶಾನಭಾಗ ದಂಪತಿಗಳಿಗೆ (ಶ್ರೀ ತಮ್ಮಣ್ಣ ಬೀಗಾರ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು) ಮತ್ತು ಸಾಮಾಜಿಕ ಸೇವಾಕಾರ್ಯ ನಿರ್ವಹಿಸಿದ ಶ್ರೀ ವಿಜಯ್ ಪೋಸ್ಟಮಾಸ್ಟರ್ ಸಿದ್ದಾಪುರರಿಗೆ ಸನ್ಮಾನ ಕಾರ್ಯಕ್ರಮ ನಡೆಸಿದರು. ಶಾಲೆಯ ಮುಖ್ಯಾಧ್ಯಾಪಕಿ ನೇತ್ರಾವತಿ ನಾಯ್ಕರವರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮಹೇಶ ಹೆಗಡೆ ಶಿಕ್ಷಣ ಸಂಯೋಜಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿದ್ದಾಪುರ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ನೂತನ ಅಧ್ಯಕ್ಷ ಸತೀಶ ಹೆಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿದ್ದಾಪುರ ಕ್ಲಸ್ಟರಿನ ಅರ್ಜುನ್ ಚೌಹಾಣರವರು ಅತಿಥಿಗಳಾಗಿ ಆಗಮಿಸಿ ಅನಿಸಿಕೆ ವ್ಯಕ್ತಪಡಿಸಿದರು. ಕುಮಾರಿ ಚಿನ್ಮಯಿ ಹಾಗೂ ಕುಮಾರಿ ಸಮಹೀರಾ 6ನೇ ತರಗತಿ ಮಕ್ಕಳು ಶಿಕ್ಷಕರ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಮುಖ್ಯಾಧ್ಯಾಪಕಿ ಸ್ವರ್ಣಲತಾ ಶಾನಭಾಗ ಶಾಲೆಯ ಅಡಿಗೆಯವರು ಭುವನೇಶ್ವರಿ ಹೆಗಡೆಯವರು ಕಾರ್ಯಕ್ರಮ ನಿರ್ವಹಿಸಿದರು. ಸನ್ಮಾನಿತರಾದ ಸವಿತಾ ಶಾನಭಾಗ, ತಮ್ಮಣ್ಣ ಬೀಗಾರ, ವಿಜಯರವರು ಶಾಲೆಯ ಕುರಿತು ತಮ್ಮ ಅನುಭವ ಹಂಚಿಕೊಂಡರು. ಸವಿತಾ ಶಾನಭಾಗ ದಂಪತಿಗಳು ಶಾಲೆಗೆ 10,000/- ಹಾಗೂ ಒಂದು ಕುಕ್ಕರ್ ದೇಣಿಗೆ ನೀಡಿದರು. , ಪಾಲಕರು, ಮಕ್ಕಳು, ಅಂಗನವಾಡಿ ಶಿಕ್ಷಕರು, ಪೋಸ್ಟ್ ಆಫಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ,ಸಿದ್ದಾಪುರ(ಉ.ಕ)
ದಿನಾಂಕ : 19-03-2021 ರ ಸಿದ್ದಾಪುರ ಪೇಟೆ ಧಾರಣೆ
ಅ.ನಂ. ಹುಟ್ಟುವಳಿಯ
ಹೆಸರು ಧಾರಣೆಗಳು (ಪ್ರತಿ ಕ್ವಿಂಟಲ್ಲಿಗೆ)
ಕನಿಷ್ಠ ಗರಿಷ್ಠ ಮಾದರಿ
1 ರಾಶಿ 39609 41899 41499
2 ತಟ್ಟಿಬೆಟ್ಟೆ 32109 38189 37869
3 ಕೆಂಪಗೋಟು 26669 29469 28689
4 ಬಿಳಿಗೋಟು 23699 30089 28609
5 ಚಾಲಿ 34689 36899 36601
6 ಕೋಕಾ 21099 28809 26609
7 ಕಾಳುಮೆಣಸು 30089 39039 38366

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *