
ರಾಜ್ಯದಲ್ಲಿ ದಿನ ಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆಯ ಲಕ್ಷಣಗಳು ಸ್ಪಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದುಬಾರಿ ದಂಡಾಸ್ತ್ರ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರಂತೆ ಬಿಗಿ ನಿಯಮ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಬೆಂಗಳೂರು: ರಾಜ್ಯದಲ್ಲಿ ದಿನ ಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆಯ ಲಕ್ಷಣಗಳು ಸ್ಪಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದುಬಾರಿ ದಂಡಾಸ್ತ್ರ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರಂತೆ ಬಿಗಿ ನಿಯಮ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊರೋನಾ ನಿಯಮ ಉಲ್ಲಂಘಿಸುವವರಿಗೆ ಹಾಗೂ ಸಂಬಂಧಪಟ್ಟ ಸ್ಥಳದ ಮಾಲೀಕರಿಗೆ ದುಬಾರಿ ದಂಡ ವಿಧಿಸುವುದಾಗಿ ಆರೋಗ್ಯ ಇಲಾಖೆ 2020ರ ಡಿಸೆಂಬರ್ ನಲ್ಲಿ ಆದೇಶ ಹೊರಡಿಸಿತ್ತು. ಬಳಿಕ ಕೊರೋನಾ ಸೋಂಕು ಪ್ರಕರಣ ಕಡಿಮೆಯಾಗುತ್ತಿದ್ದಂತೆ ನಿರ್ಲಕ್ಷ್ಯವಹಿಸಿತ್ತು. ಇದೀಗ ಬುಧವಾರ ಮತ್ತೆ ಅದೇ ಆದೇಶವನ್ನು ಪುನಃ ಹೊರಡಿಸಿರುವ ಇಲಾಖೆ, ಯಾವ ಯಾವ ಉಲ್ಲಂಘನೆಗೆ ಎಷ್ಟು ದಂಡ ಸಂಗ್ರಹಿಸಬೇಕು ಎಂದು ತಿಳಿಸಿದೆ.
ಮಾರ್ಗಸೂಚಿಯಲ್ಲಿ ಮಾಸ್ಕ್ ಧರಿಸದಿದ್ದಲ್ಲಿ ಬೆಂಗಳೂರು ನಗರ ಮತ್ತು ಇತರ ನಗರಗಳಲ್ಲಿ 250 ರೂ. ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.
ಮಾಸ್ಕ್ ಧರಿಸದಿದ್ದರೆ ರೂ.250 ದಂಡ…
ಪಾಲಿಕೆ ವ್ಯಾಪ್ತಿ ಹೊರತುಪಡಿಸಿ 100 ರೂ. ದಂಡ ವಿಧಿಸಲಾಗುವುದು. ಬಿಬಿಎಂಪಿ ಮಾರ್ಷಲ್ ಗಳು, ಹೆಡ್ ಕಾನ್ ಸ್ಟೇಬಲ್ ಮತ್ತು ಮೇಲ್ಪಟ್ಟ ಪೊಲೀಸ್ ಅಧಿಕಾರಿ, ಹೆಲ್ತ್ ಇನ್ಸ್ ಪೆಕ್ಟರ್, ಪಿಡಿಒ, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ದಂಡ ವಿಧಿಸುವ ಅಧಿಕಾರ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ ಮಾಡದೇ ಇದ್ದರೆ 250 ರೂ. ದಂಡ ವಿಧಿಸಲಾಗುತ್ತದೆ.
ಜನ ಸೇರಲು ಮಿತಿ
ಮದುವೆ ಸಮಾರಂಭಕ್ಕೆ ತೆರೆದ ಪ್ರದೇಶದಲ್ಲಿ 500 ಜನ, ಒಳಾಂಗಣದಲ್ಲಿ 200 ಜನಕ್ಕಿಂತ ಹೆಚ್ಚು ಮಂದಿ ಸೇರಬಾರದು. ಹುಟ್ಟಿದ ಹಬ್ಬದ ಆಚರಣೆಗೆ ತೆರೆದ ಸ್ಥಳದಲ್ಲಿ 100 ಜನ, ಒಳಾಂಗಣದಲ್ಲಿ 50 ಜನ, ಅಂತ್ಯಕ್ರಿಯೆಗೆ 50, ಇತರೆ ಕಾರ್ಯಕ್ರಮಗಳಿಗೆ 100 ಜನ, ಧಾರ್ಮಿಕ ಆಚರಣೆಗೆ ತೆರೆದ ಪ್ರದೇಶದಲ್ಲಿ 500 ಜನರ ಮಿತಿ ಸೂಚಿಸಲಾಗಿದೆ. ಈ ನಿಯಮ ಉಲ್ಲಂಘಿಸಿದರೆ ಹಾಗೂ ತಮ್ಮ ಆವರಣದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದನ್ನು ಮಾಡದಿದ್ದರೆ ಆಯಾ ಮಾಲಿಕರನ್ನು ಹೊಣೆಯಾಗಿಸಿ ದುಬಾರಿ ದಂಡ ವಿಧಿಸಲಾಗುತ್ತದೆ.
ಮದುವೆ-ಸಮಾರಂಭಗಳಲ್ಲಿ ನಿಯಮ ಉಲ್ಲಂಘಿಸಿದರೆ ರೂ. 10 ಸಾವಿರ ದಂಡ
ನಿಯಮ ಉಲ್ಲಂಘನೆಗೆ ಎ.ಸಿ. ರಹಿತ ಪಾರ್ಟಿ ಹಾಲ್, ವಾಣಿಜ್ಯ ಮಳಿಗೆಗಳಿಗೆ ರೂ.5 ಸಾವಿರ, ಎ.ಸಿ. ಪಾರ್ಟಿ ಹಾಲ್, ವಾಣಿಜ್ಯ ಮಳಿಗೆ, ಬ್ರಾಂಡೆಡ್ ಶಾಪ್, ಶಾಪಿಂಗ್ ಮಾಲ್‌ಗಳಿಗೆ ರೂ.10 ಸಾವಿರ, ಸ್ಟಾರ್ ಹೋಟೆಲ್, ಮದುವೆ ಸಮಾರಂಭಗಳಲ್ಲಿ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ರೂ. 10 ಸಾವಿರ ಹಾಗೂ ಸಾರ್ವಜನಿಕ ಸಮಾರಂಭ ಅಥವಾ ರ್ಯಾಲಿಗಳಲ್ಲಿ ನಿಯಮ ಉಲ್ಲಂಘನೆಯಾದರೆ ಆಯೋಜಕರಿಗೆ ರೂ. 10 ಸಾವಿರ ದಂಡ ವಿಧಿಸಲು ಆರೋಗ್ಯ ಇಲಾಖೆ ಆದೇಶಿಸಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
