
ಬೆಳಗಾವಿ ಲೋಕಸಭೆ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಕಾಂಗ್ರೆಸ್, ಆ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶುಕ್ರವಾರ ಅಧಿಕೃತವಾಗಿ ಟಿಕಿಟ್ ಘೋಷಿಸಿದೆ.

ಬೆಳಗಾವಿ: ಬೆಳಗಾವಿ ಲೋಕಸಭೆ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಕಾಂಗ್ರೆಸ್, ಆ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶುಕ್ರವಾರ ಅಧಿಕೃತವಾಗಿ ಟಿಕಿಟ್ ಘೋಷಿಸಿದೆ.
ಅಳೆದು ತೂಗಿದ ನಂತರ ಕಾಂಗ್ರೆಸ್ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಉಮೇದುವಾರಿಕೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನುಮತಿ ನೀಡಿದ್ದಾರೆ ಎಂದು ಎಐಸಿಸಿ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಬೆಳವಣಿಗೆ ಹಿಂದ ಹಲವು ರಾಜಕೀಯ ಲೆಕ್ಕಾಚಾರಗಳು ಜಿಲ್ಲೆಯಲ್ಲಿ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಸ್ಪರ್ಧೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎಂಬ ಚರ್ಚೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಪ್ರತ್ಯಾಸ್ತ್ರವಾಗಿ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರನ್ನು ಕಣಕ್ಕಿಳಿಸಿದೆ.
ಯಮಕನಮರಡಿ ಕ್ಷೇತ್ರದ 59 ವರ್ಷದ ಸತೀಶ್ ಜಾರಕಿಹೊಳಿ ಅವರು ಜಿಲ್ಲೆಯಲ್ಲಿ ತಮ್ಮದೇ ಹಿಡಿತ ಹೊಂದಿದ್ದಾರೆ. ಇದೀಗ ಲೋಕಸಭೆ ಉಪಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಎರಡು ಸಲ ಎಂಎಲ್ ಸಿ ಹಾಗೂ ಸತತ ಮೂರು ಬಾರಿ ಯಮಕನಮರಡಿ ಕ್ಷೇತ್ರದಿಂದ ಶಾಸಕರಾಗಿ ಸತೀಶ ಜಾರಕಿಹೊಳಿ ಆಯ್ಕೆಯಾಗಿದ್ದಾರೆ. (kpc)
