ಬೆಳಗಾವಿ ಲೋಕಸಭೆ ಉಪಚುನಾವಣೆ: ತೇಜಸ್ವಿನಿ ಅನಂತ್ ಕುಮಾರ್ ಗೆ ಒಂದು ನ್ಯಾಯ? ಮಂಗಳಾ ಅಂಗಡಿಗೆ ಒಂದು ನ್ಯಾಯವೇ?…………
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ವಿವಿಧ ವಿಭಾಗಗಳ ಸದಸ್ಯರು,ಅಧ್ಯಕ್ಷರ ನೇಮಕಾತಿ ಪ್ರಕ್ರೀಯೆ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾಗಿ ಅಂಕೋಲಾದ ಸುಜಾತಾ ಗಾಂವಕರ್ ಮುಂದುವರಿದಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮಾಜಿ nwkrtc ಉಪಾಧ್ಯಕ್ಷ ನಾಗರಾಜ್ ನಾರ್ವೇಕರ್ ನೇಮಕವಾಗಿದ್ದು, ನಾಗರಾಜ್ ನಾರ್ವೇಕರ ಹಿಂದುಳಿದ ವರ್ಗಗಳ ಜಿಲ್ಲಾಘಟಕದ ಅಧ್ಯಕ್ಷರಾದ ಮಾರನೇ ದಿನವೇ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಸಿದ್ಧಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಜಗದೀಶ್ ನಾಗರಾಜ್ ಮಡಿವಾಳ ಹೊಸೂರು ಆಯ್ಕೆಯಾಗಿದ್ದಾರೆ.
ಸಿದ್ಧಾಪುರ ಹಸ್ವಂತೆಯ ಗಣಪತಿ ಸಿ. ನಾಯ್ಕ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಸದಸ್ಯರಾಗಿ ನೇಮಕವಾಗಿದ್ದಾರೆ. ಮೋಹನ ಧರ್ಮಾ ಜೊಗಳೇಕರ್, ನಟರಾಜ್ ಮೈಲಪ್ಪ ಮಡಿವಾಳ,ರನ್ನು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮೀತಿ ಸದಸ್ಯರುಗಳನ್ನಾಗಿ ನೇಮಕ ಮಾಡಿದ್ದರೆ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹನುಮಂತ ನಾಯ್ಕ ಹೊಸೂರು ರನ್ನು ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ರನ್ನಾಗಿ ನೇಮಕಾತಿ ಮಾಡಲಾಗಿದೆ. ಸಿದ್ಧಾಪುರ ತಾಲೂಕಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಗಾಂಧೀಜಿ ನಾಯ್ಕ ನೇಮಕವಾಗಿದ್ದಾರೆ.
ಬೆಳಗಾವಿ ಲೋಕಸಭೆ ಉಪಚುನಾವಣೆ: ತೇಜಸ್ವಿನಿ ಅನಂತ್ ಕುಮಾರ್ ಗೆ ಒಂದು ನ್ಯಾಯ? ಮಂಗಳಾ ಅಂಗಡಿಗೆ ಒಂದು ನ್ಯಾಯವೇ?
ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ದಿವಂಗತ ಸಂಸದ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಸ್ಪರ್ಧಿಸುವುದು ಅಧಿಕೃತವಾಗಿದೆ.
ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ದಿವಂಗತ ಸಂಸದ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಸ್ಪರ್ಧಿಸುವುದು ಅಧಿಕೃತವಾಗಿದೆ.
2004 ರಿಂದಲೂ ಈ ಕ್ಷೇತ್ರ ಬಿಜೆಪಿಯ ಪಾಲಾಗಿದೆ. ಹೀಗಾಗಿ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.
https://imasdk.googleapis.com/js/core/bridge3.447.1_en.html#goog_618045245
ರಮಶ್ ಜಾರಕಿಹೊಳಿ ಸೆಕ್ಸ್ ಸಿಡಿ ಹಗರಣ ಪಕ್ಷದ ವರ್ಚಸ್ಸಿನ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಪಕ್ಷ ಚಿಂತಿಸಿದೆ, ಇದೇ ವೇಳೆ ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಿಂದ ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದ್ದಾರೆ.
ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಆ ಸಮಯದಲ್ಲಿ ಸಹಾನೂಭೂತಿ ಆಧಾರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನೀಡಲು ಪಕ್ಷ ನಿರ್ಲಕ್ಷ್ಯಿಸಿತ್ತು, ಆದರೆಮಂಗಳಾ ಅಂಗಡಿ ಅವರಿಗೆ ಅನುಕಂಪದ ಆಧಾರದ ಮೇಲೆ ಟಿಕೆಟ್ ನೀಡೀರುವುದು ಚರ್ಚೆಗೆ ಕಾರಣವಾಗಿದೆ.
ಇನ್ನೂ ಮಸ್ಕಿ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶರಣು ಸಲಗಾರ್ ಅವರು ಕಣಕ್ಕಿಳಿದಿದ್ದಾರೆ.
ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಚುನಾವಣೆಯ ಅಭ್ಯರ್ಥಿಯನ್ನಾಗಿ ಬಿಜೆಪಿಯ ಘೋಷಿಸಿದೆ. ಐಎಎಸ್‌ನ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ರತ್ನಪ್ರಭಾ, ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು. ಈ ಹಿಂದೆ ಕಲಬುರಗಿ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನ ಪ್ರಭ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂದು ಹೇಳಲಾಗಿತ್ತು. (kpc)