ಅನಂತಕುಮಾರ ಹೆಗಡೆ ಇದ್ದರೇನು? ಸತ್ತರೇನು? ಮಾಜಿ ಸಚಿವರ ವಿವಾದಾತ್ಮಕ ಹೇಳಿಕೆ

ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು  ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

Ananth kumar hegde

ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು  ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಸಂಸದ  ಅನಂತಕುಮಾರ ಹೆಗಡೆ ಸತ್ರೇನು, ಬದುಕಿದ್ರೇನು, ಏನೂ ಲೆಕ್ಕಕ್ಕಿಲ್ಲ. ಹೇಗೋ ಅವನು ಐದು ವರ್ಷ ನಮ್ಮ ದೃಷ್ಟಿಯಲ್ಲೇ ಇರಲ್ಲ. ಹೀಗಾಗಿ ಅವನ ಅನಾರೋಗ್ಯದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ.  

ಮಾಧ್ಯಮದೆದುರು ಮಾತನಾಡಿರುವ ಆನಂದ್ ಆಸ್ನೋಟಿಕರ್, ಅವನಿಗೆ ಅನಾರೋಗ್ಯ ಆಗಿದಕ್ಕೆ ನನ್ನ ಒಂದಿಷ್ಟು ಸ್ನೇಹಿತರು ಬಂದು ನನಗೆ ಬಿಜೆಪಿ ಹೋಗಿ ಎಂ.ಪಿ ಸೀಟ್ ಗೆ ಪ್ರಯತ್ನ ಮಾಡಿ ಎಂದರು. ನಾನು ಕೂಡಾ ಮನಸ್ಸು ಮಾಡಿದ್ದೆ ಆದರೆ, ಈಗ ಹೆಗಡೆ ಗಟ್ಟಿ ಆಗಿಬಿಟ್ಟಿದ್ದಾನೆ ಎಂದು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಅಂದು ಹಿಂದುತ್ವದ ಅಲೆ ಇದ್ದಿದ್ದರಿಂದ ಗೆಲುವು ಕಷ್ಟವಾಯಿತು. ಇದೀಗ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಇತ್ತೀಚೆಗೆ ಆರೋಗ್ಯ ಸರಿ‌ ಇರಲಿಲ್ಲ. ಶಸ್ತ್ರಚಿಕಿತ್ಸೆ ಆಗಿದೆ.  ಸ್ಥಿತಿ ಗಂಭೀರವಾಗಿದೆ. ಮುಂದಿನ ರಾಜಕೀಯ ಜೀವನ ಕಷ್ಟ ಇದೆ ಎಂದು  ಹೆಗಡೆ ಅನಾರೋಗ್ಯವನ್ನು ಟೀಕಿಸಿದ್ದಾರೆ.

ಹೇಗೂ ಆತ ಐದು ವರ್ಷ ಜನರಿಗೆ ಮುಖ ಕಾಣಿಸಲ್ಲ. ಬೋನ್ ಕ್ಯಾನ್ಸರ್ ಆಗಿದೆ ಎಂದು‌ ಕೆಲವರು ಹೇಳುತ್ತಿದ್ದರು. ಎಲ್ಲಾದರೂ ಹಿಂದು- ಮುಸ್ಲಿಂ ಗಲಾಟೆ ಆಗಬೇಕು. ಯಾರಾದರೂ ಹಿಂದು ಸಾಯ್ಬೇಕು. ಯಾರಾದರೂ ಮೀನುಗಾರ ಯುವಕ ಸಾಯ್ಬೇಕು, ಅಂಥ ಪ್ರಸಂಗದಲ್ಲಿ ಮಾತ್ರ ಅವನನ್ನು ಕಾಣಬಹುದು‌. ಹಾಗಾಗಿ ಅವನು ಸತ್ರೇನು, ಬದುಕಿದ್ರೇನು?  ಅವನ ಆರೋಗ್ಯ ಹೇಗಿದ್ಯೋ ಏನೋ, ನನಗ್ಯಾಕೆ ಬೇಕು? ಜನ ಹೇಳಿದ್ದನ್ನು ಹೇಳಿದ್ದೀನಿ ಎಂದು ಏಕವಚನದಲ್ಲೇ ಹೆಗಡೆ ವಿರುದ್ಧ ಹರಿಹಾಯ್ದಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *