
ಮಂಗಳೂರು : ಬಿಜೆಪಿ ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಂಸದ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎಂದಿದ್ದಾರೆ.
ಇಲ್ಲಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಸಚಿವ ಕೆ ಎಸ್ ಈಶ್ವರಪ್ಪ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ತಿಳಿಸಿದರು.
ಸಚಿವ ಈಶ್ವರಪ್ಪ ಅವರ ಜೊತೆಗೆ ನಾನು ಮಾತಾಡಿದ್ದೇನೆ. ಈಶ್ವರಪ್ಪನವರು ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರು ಬಿಜೆಪಿ ರಾಜ್ಯ ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ. ನಾವು ಈಗ ಚುನಾವಣಾ ಕ್ಯಾಂಪೇನ್ ಗಾಗಿ ಬಂದಿದ್ದೇವೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಊರಿನ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇವೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ನಡೆಯುವ ಉಪ ಚುನಾವಣಾ ಪ್ರಚಾರ ನಡೆಸಲಿದ್ದೇವೆ. ಲೋಕಸಭಾ, ವಿಧಾನಸಭಾ ಚಚಚುನಾವಣೆಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ತಿಳಿಸಿದರು.
