congress-bjp tweet war- ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ, ಲಜ್ಜೆಗೇಡಿತನಕ್ಕೆ ಏನೆನ್ನಬೇಕು?: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ!’

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾಗುತ್ತಿರುವ ಹಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ರಂಧ್ರ ಕೊರೆಯುತ್ತಿದ್ದಾರೆ ಎಂಬ ಬಿಜೆಪಿ ಟ್ವೀಟ್ ಗೆ ಕಾಂಗ್ರೆಸ್ ತಿರುಗೇಟು ನೀಡಿದೆ. 

Representational image

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾಂಗ್ರೆಸ್ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾಗುತ್ತಿರುವ ಹಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ರಂಧ್ರ ಕೊರೆಯುತ್ತಿದ್ದಾರೆ ಎಂಬ ಬಿಜೆಪಿ ಟ್ವೀಟ್ ಗೆ ಕಾಂಗ್ರೆಸ್ ತಿರುಗೇಟು ನೀಡಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ  ಕಾಂಗ್ರೆಸ್ ‘ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ. ಆದರೂ, ಬೇರೆ ಕಡೆ ಬೆರಳು ತೋರಿಸುವ ನಿಮ್ಮ ಲಜ್ಜೆಗೇಡಿತನಕ್ಕೆ ಏನೆನ್ನಬೇಕು! ಒಬ್ಬ ಯತ್ನಾಳ್‌ರನ್ನ, ಮತ್ತೊಬ್ಬ ಈಶ್ವರಪ್ಪನವರನ್ನ ಸಂಬಾಳಿಸಲಾಗದ ನಿಮ್ಮ ಹಡಗು ಅರ್ಧ ಮುಳುಗಿದೆ. ಉಪಚುನಾವಣೆ ಬಳಿಕ ಪೂರ್ತಿ ಮುಳುಗಲಿದೆ ಕಳೆದ ಬಾರಿಯೇ ರಾಜ್ಯ ಕಂಡಿಲ್ಲವೇ ನಿಮ್ಮ ಘನಂದಾರಿ ಆಡಳಿತವನ್ನು ಎಂದು ಆಕ್ರೋಶವ್ಯಕ್ತಪಡಿಸಿದೆ.

ಇನ್ನೂ ಮಸ್ಕಿಯಲ್ಲಿ ಹಣ ಹಂಚುತ್ತಿರುವ ಆರೋಪ ಮಾಡಿರುವ ಕಾಂಗ್ರೆಸ್, ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ. ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ ವಿಡಿಯೋ ಇದು. ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ?” ಎಂದು ಪ್ರಶ್ನಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *