

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿಳಂಬವಾಗುವುದಿಲ್ಲ: ಚುನಾವಣಾ ಆಯೋಗ
ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರ ಮುಗಿಯಲಿದ್ದು, ಚುನಾವಣೆ ನಡೆಯಲಿದೆಯೋ ಇಲ್ಲವೋ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ.

ಬೆಂಗಳೂರು: ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರ ಮುಗಿಯಲಿದ್ದು, ಚುನಾವಣೆ ನಡೆಯಲಿದೆಯೋ ಇಲ್ಲವೋ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ.
ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಥಳೀಯ ಸಂಸ್ಥೆ ಚುನಾವಣೆಗಳ ಬಗ್ಗೆ ಆತಂಕಗೊಂಡಿವೆ.

https://imasdk.googleapis.com/js/core/bridge3.452.0_en.html#goog_84632924
ಮೇ ತಿಂಗಳ ಅಂತ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರವಧಿ ಮುಗಿಯಲಿದೆ, ಅಂತಿಮ ಗಡುವಿನೊಳಗೆ ಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ, ಒಂದು ವೇಳೆ ಕೋವಿಡ್ ಸಮಸ್ಯೆ ಹೆಚ್ಚಾದರೆ ಜೂನ್ ತಿಂಗಳಿನಲ್ಲಿ ಚುನಾವಣೆ ನಡೆಯುತ್ತದೆ, ಅದಕ್ಕೂ ಮೀರಿ ವಿಳಂಬವಾಗುವುದಿಲ್ಲ ಎಂದು ರಾಜ್ಯ ಚುನಾವಣಾ ಆಯುಕ್ತ ಡಾ. ಬಿ ಬಸವರಾಜು ಹೇಳಿದ್ದಾರೆ.
ಚುನಾವಣೆ ನಡೆಸಲು ನಮಗೆ ಸಂವಿಧಾನಬದ್ದವಾದ ಆದೇಶವಿದೆ, ಕಳೆದ ಬಾರಿ, ಗ್ರಾಮ ಪಂಚಾಯತ್ ಚುನಾವಣೆ ವಿಳಂಬವಾದ ಕಾರಣ, ಕೆಲವರು ಎಸ್‌ಇಸಿಗೆ ಚುನಾವಣೆಗಳನ್ನು ನಡೆಸುವಂತೆ ಒತ್ತಾಯಿಸಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದರು, ಅದಾದ ನಂತರ ಚುನಾವಣೆ ನಡೆಯಿತು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಯಾವುದೇ ವಿಳಂಬದ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿ ಮತ್ತು ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
2013 ಮತ್ತು 2018 ರ ನಡುವೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಕಳೆದ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿತು. ಈ ಬಾರಿ ಬಿಜೆಪಿ ಈ ಚುನಾವಣೆಗಳಲ್ಲಿ ಉತ್ತಮ ಸಾಧನೆ ತೋರಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಎಂಎಲ್ಸಿ ರವಿ ಕುಮಾರ್ ಹೇಳಿದ್ದಾರೆ, “ನಾವು ಚುನಾವಣೆಗೆ ತಯಾರಾಗುತ್ತಿದ್ದೇವೆ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುತ್ತದೆಯೇ ಎಂಬ ಸಾಮಾನ್ಯ ಆತಂಕವಿದೆ ಎಂದು ಹೇಳಿದ್ದಾರೆ.
ಚುನಾವಣೆಗೆ ನಾವು ಸಿದ್ಧರಿದ್ದೇವೆ. ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯ ಸವಾಲನ್ನು ಪರಿಗಣಿಸಿ, ಆಯೋಗ ದಿನಾಂಕಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲಾ ಪಕ್ಷಗಳು ಮತ್ತು ಸಂಬಂಧಪಟ್ಟ ಪ್ರತಿಯೊಬ್ಬರನ್ನು ಸಂಪರ್ಕಿಸಬೇಕು ಎಂದು ನಾನು ಭಾವಿಸುತ್ತೇನೆ. ಪರಿಸ್ಥಿತಿ ಸಮಂಜಸವಾಗಿ ಸುರಕ್ಷಿತವಾದ ನಂತರ, ನಾವು ಮತದಾನವನ್ನು ನಡೆಸಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಕೋವಿಡ್ ಪರಿಸ್ಥಿತಿ ಹದಗೆಡುತ್ತಿರುವಾಗ ನಾವು ರಾಜ್ಯಾದ್ಯಂತ ಚುನಾವಣೆಗಳನ್ನು ಹೇಗೆ ನಡೆಸಬಹುದು? ಚುನಾವಣಾ ಆಯೋಗ ಸಾರ್ವಜನಿಕ ಆರೋಗ್ಯ ಪರಿಸ್ಥಿತಿ ಸುಧಾರಿಸುವವರೆಗೆ ಚುನಾವಣೆಯನ್ನು ಮುಂದೂಡಬೇಕಾಗಬಹುದು ಎಂದು ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. (kpc)
