

ಭಾರತೀಯ ನೌಕಾಪಡೆಯ ದೊಡ್ಡ ಬೇಟೆ: ಅರಬ್ಬೀ ಸಮುದ್ರದಲ್ಲಿ 3,000 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ-ಅರಬ್ಬೀ ಸಮುದ್ರದ ಪಶ್ಚಿಮ ಕರಾವಳಿಯಲ್ಲಿ 300 ಕೆಜಿಯಷ್ಟು ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಮೀನುಗಾರಿಕಾ ಹಡಗನ್ನು ಭಾರತೀಯ ನೌಕಾಪಡೆ ವಶಪಡಿಸಿಕೊಂಡಿದೆ.

ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ: ಕೇಂದ್ರ
ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಬಹುದು ಭಾರತ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.


ನವದೆಹಲಿ: ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಬಹುದು ಭಾರತ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಇನ್ನು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್‌ನ 3ನೇ ಹಂತದಲ್ಲಿ ಬೆಲೆ ನಿಗದಿ, ಅರ್ಹತೆ, ಲಸಿಕೆಗಳ ನಿರ್ವಹಣೆಯನ್ನು ಸುಲಭವಾಗಿ ಮಾಡಲಾಗುತ್ತಿದೆ.

https://imasdk.googleapis.com/js/core/bridge3.452.0_en.html#goog_261813703
18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ -19 ವಿರುದ್ಧ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.
ಲಸಿಕೆ ತಯಾರಕರು ತಮ್ಮ ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಿಸಲು ಪ್ರೋತ್ಸಾಹ.
ಲಸಿಕೆ ತಯಾರಕರು ತಮ್ಮ ಪೂರೈಕೆಯ ಶೇ. 50ರಷ್ಟನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಪೂರ್ವ ಘೋಷಿತ ಬೆಲೆಗೆ ಬಿಡುಗಡೆ ಮಾಡಲು ಅಧಿಕಾರ ನೀಡಲಾಗಿದೆ.
ಹೆಚ್ಚುವರಿ ಲಸಿಕೆ ಪ್ರಮಾಣವನ್ನು ನೇರವಾಗಿ ಉತ್ಪಾದಕರಿಂದ ಸಂಗ್ರಹಿಸಲು ರಾಜ್ಯಗಳಿಗೆ ಅಧಿಕಾರ. ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವರ್ಗದ ಜನರು ಲಸಿಕೆ ಪಡೆಯಬಹುದು.
ನವದೆಹಲಿ: ಅರಬ್ಬೀ ಸಮುದ್ರದ ಪಶ್ಚಿಮ ಕರಾವಳಿಯಲ್ಲಿ 300 ಕೆಜಿಯಷ್ಟು ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಮೀನುಗಾರಿಕಾ ಹಡಗನ್ನು ಭಾರತೀಯ ನೌಕಾಪಡೆ ವಶಪಡಿಸಿಕೊಂಡಿದೆ.
ಇತ್ತೀಚಿನ ತಿಂಗಳುಗಳಲ್ಲಿ ಭದ್ರತಾ ಪಡೆಗಳು ಮಾದಕವಸ್ತುಗಳ ಸಾಗಣೆಯನ್ನು ಪತ್ತೆ ಹಚ್ಚಿ, ವಶಪಡಿಸಿಕೊಳ್ಳುವ ಮೂಲಕ ಯಶಸ್ವಿ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.
ಅರೇಬಿಯನ್ ಸಮುದ್ರದಲ್ಲಿ ಕಣ್ಗಾವಲು ಗಸ್ತು ತಿರುಗುತ್ತಿದ್ದ ಸುವರ್ಣ ಹೆಸರಿನ ನೌಕಾ ಹಡಗು ಸಿಬ್ಬಂದಿ ಮೀನುಗಾರಿಕಾ ಹಡಗೊಂದಿನ ಅನುಮಾನಾಸ್ಪ ಚಲನವಲಯವನ್ನು ಗುರುತಿಸಿದ್ದಾರೆ. ಕೂಡಲೇ ಹಡಗನ್ನು ನಿಲ್ಲಿಸಿದ ನೌಕಾಪಡೆಯ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದು ಈ ವೇಳೆ 300 ಕೆಜಿಗಿಂತ ಹೆಚ್ಚು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈಗ ವಶಪಡಿಸಿಕೊಳ್ಳಲಾಗಿರುವ ಮಾದಕವಸ್ತುವಿನ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಂದಾಜು ವೆಚ್ಚ 3,000 ಕೋಟಿ ರೂಪಾಯಿ ಎಂದು ಹೇಳಿದ್ದಾರೆ.
ನೌಕಾಪಡೆಯ ಪ್ರಕಾರ, ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹೆಚ್ಚಿನ ತನಿಖೆಗಾಗಿ ನೌಕಾಪಡೆ ಸಿಬ್ಬಂದಿ ಹಡಗನ್ನು ಕೇರಳದ ಕೊಚ್ಚಿ ಬಂದರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ವರ್ಷದಲ್ಲಿ, ಭಾರತೀಯ ಕೋಸ್ಟ್ ಗಾರ್ಡ್ ಸುಮಾರು 5,200 ಕೋಟಿ ರೂ.ಗಳ 1.6 ಟನ್ಗಳಷ್ಟು ಮಾದಕವಸ್ತುಗಳನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
