Covid p-2- ಸಾರಿಗೆ ಮುಷ್ಕರ ಅಂತ್ಯ, ಬೇಡಕಣಿ ವಿ.ಎಸ್.ಎಸ್. ಸಿ.ಇ.ಓ. ವಿರುದ್ಧ ದೂರು, ಕರೋನಾ ನಿಯಮ ಪಾಲನೆಗೆ ಸೆಕ್ಟರ್ ತಂಡಗಳ ರಚನೆ

ವಿಧಾನಸಭಾ ಅಧ್ಯಕ್ಷರಿಗೆ ಮನವಿ- ಸಿದ್ದಾಪುರ ತಾಲೂಕಿನ ಬೇಡ್ಕಣಿ ಸೇವಾ ಸಹಕಾರಿ ಸಂಘದಲ್ಲಿ ಕರ್ತವ್ಯವನ್ನ ನಿರ್ವಹಿಸುತ್ತಿರುವ ಮುಖ್ಯ ಕಾರ್ಯನಿರ್ವಾಹಕರು ಸಂಘದ ಸದಸ್ಯರ ಮನೆಗೆ ಸಾಲ ವಸೂಲಾತಿಗೆ ಹೋದಾಗ ಅವರಿಗೆ ಅವಾಚ್ಯ ಶಬ್ದ ದಿಂದ ಬೈದು,ಬೂಟು ಕಾಲಿನಲ್ಲಿ ಮನೆಯ ಒಳಗೆ ನುಗ್ಗಿ ಅವಮಾನ ಮಾಡಿದ್ದಲ್ಲದೆ ನಿಂದನೆ ಮಾಡಿರುತ್ತಾರೆ ಇದೇ ರೀತಿ ಕೆಲವೊಂದು ಸಾಲಗಾರರ ಮನೆಗೆ ಹೋಗುವುದು ನಿಂದಿಸುವುದು ಅವಮಾನ ಮಾಡಿರುವ ಬಗ್ಗೆ ಹಲವರು ಸಂಫ ದಲ್ಲಿ ದೂರು ಮಾಡಿರುತ್ತಾರೆ ಅವರಿಗೆ ಕುನೂನೂ ಕ್ರಮ ಕೈ ಗೊಂಡು ಅವರನ್ನು ವರ್ಗಾವಣೆ ಮಾಡಬೇಕು ಎಂದು ಸೇವಾ ಸಹಕಾರಿ ಸಂಘದ ಸದಸ್ಯರು ಹಾಗೂ ಬೇಡ್ಕಣಿ ಗ್ರಾಮಸ್ಥರು ಬುಧವಾರ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಶಾಸಕರ ಆಪ್ತ ಸಲಹೆಗಾರರ ಮೂಲಕ ವಿಧಾನಸಭಾಧ್ಯಕ್ಷ ರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದಾರೆ.

ಸಿದ್ದಾಪುರ; ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕೊರೋನಾ ನಿಯಮಾವಳಿಗಳ ಮೇಲ್ವಿಚಾರಣೆಗೆ 10 ಸೆಕ್ಟರ್ ತಂಡಗಳನ್ನು ರಚಿಸಲಾಗಿದೆ., ಪಟ್ಟಣ ವ್ಯಾಪ್ತಿಯಲ್ಲಿ ಪಟ್ಟಣ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಈ ತಂಡವನ್ನು ರಚಿಸಲಾಗಿದೆ.
ಎಂದು ತಹಸೀಲ್ದಾರ್ ಪ್ರಸಾದ್ ತಿಳಿಸಿದರು ಅವರು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ತಾಲೂಕಿನಲ್ಲಿರುವ ದಿನಸಿ ವ್ಯಾಪರಸ್ಥರು, ಚರ್ಚ್ ಗಳು, ಮಸೀ ದಿಗಳು ದೇವಸ್ಥಾನ ಕಮಿಟಿಯವರು. ಆಟೋ ಚಾಲಕರು, ಮೀನುಮಾರುಕಟ್ಟೆ ಚಿಕನ್ ಮಟನ್, ಬೀದಿ ಬದಿವ್ಯಪಾರಸ್ಥರುಗಳ ಸಭೆ ನಡೆಸಿ ಕೋವಿಡ್ ನಿಯಮಗಳು ಅವುಗಳ ಪಾಲನೆ ಕುರಿತು ಮಾಹಿತಿ ನೀಡಿದರು.

ದೇವಸ್ಥಾನ ಮಸೀದಿ ಚರ್ಚ್ ಗಳಲ್ಲಿ ಪೂಜೆ ಮಾಡುವವರು ಮತ್ತು ಜೊತೆಗಾರರು ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ. ಪಾಸ್ ಇಲ್ಲದೆ ಯಾರು ಅನವಶ್ಯಕವಾಗಿ ಓಡಾಡುವಂತಿಲ್ಲ. ಹೋಟೆಲ್ನಲ್ಲಿ ಪಾರ್ಸೆಲ್ ಮಾತ್ರ ಕೊಡಲು ಅವಕಾಶವಿರುತ್ತದೆ. ಶನಿವಾರ ಮತ್ತು ಭಾನುವಾರ 6 ರಿಂದ 10 ಗಂಟೆಯವರೆಗೆ ತರಕಾರಿ, ಹಾಲು, ಹಣ್ಣು, ಮೀನು, ಮಟನ್, ಚಿಕನ್ ಅಂಗಡಿಗಳು ಮಾತ್ರ ತೆಗೆದಿರಬಹುದು. ಉಳಿದಂತೆ ಎಲ್ಲ ಅಂಗಡಿಗಳು ಎರಡು ದಿನ ಸಂಪೂರ್ಣ ಬಂದ್ ಆಗಿರಬೇಕು. ರಾತ್ರಿ 9 ನಂತರ ಯಾವುದೇ ವಾಹನಗಳ ಓಡಾಡಕ್ಕೆ ಅವಕಾಶವಿರುವುದಿಲ್ಲಾ.
ಜ್ವರ, ನೆಗಡಿ, ಮುಂತಾದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು.
ಈಗ ಮಾತಿನಲ್ಲಿ ಹೇಳುತ್ತಿದ್ದೇವೆ ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ನಂತರ ನಿರ್ಧಾಕ್ಷಿಣ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಕೊರೋನಾ ನಿಯಂತ್ರಣಕ್ಕೆ ನಿಮ್ಮೆಲ್ಲರ ಸಹಕಾರ ಬಹಳ ಮುಖ್ಯ. ಈ ಹಿಂದೆ ಕೊರೋನಾ ಕಾಲದಲ್ಲಿ ಸಿದ್ದಾಪುರ ಜನತೆ ಸಹಕರಿಸಿದ್ದಾರೆ ಈಗ ನೀವು ನಮಗೆ ಸಹಕಾರ ನೀಡುವುದರೊಂದಿಗೆ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಿ ಎಂದರು.
ಪಿಎಸ್ಐ ಮಹಂತಪ್ಪ ಕುಂಬಾರ್ ಮಾತನಾಡಿ ನಿಯಮಪಾಲನೆ ಯಾಗದಿದ್ದರೆ ಕಾನೂನಿನಲ್ಲಿರುವ ಎಲ್ಲಾ ಸೆಕ್ಷನ್ನಿನ ಅಡಿಯಲ್ಲಿ ಕ್ರಮ ಹೇರಲಾಗುವುದು. ಕರ್ಪ್ಯೂ ವೇಳೆಯಲ್ಲಿ ಯಾರಾದರೂ ಅಂಗಡಿಗಳನ್ನು ಓಪನ್ ಮಾಡಿದರೆ ಅವರ ಲೈಸನ್ಸ್ ರದ್ದುಪಡಿಸಲಾಗುವುದು. ಈ ಕಾನೂನಿಗೆ ಸಹಕಾರ ನೀಡುವುದರ ಜೊತೆಗೆ ಕರೋನಾ ನಿಯಮಗಳ ನಿಯಮಾವಳಿಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಬೇಕು ಎಂದರು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ನಂದನ್ ಬೋರ್ಕರ್ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಕುಮಾರ್ ನಾಯ್ಕ , ಉಷಾ ಪಾವಸ್ಕರ್ ಉಪಸ್ಥಿತರಿದ್ದರು.

15 ದಿನಗಳ ನಂತರ ಸಾರಿಗೆ ನೌಕರರ ಮುಷ್ಕರ ಅಂತ್ಯ, ನಿಟ್ಟುಸಿರು ಬಿಟ್ಟ ಪ್ರಯಾಣಿಕರು

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಬುಧವಾರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

KSRTC Bus Stand

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಬುಧವಾರ ಅಂತ್ಯವಾಗಿದ್ದು, ಬಸ್ ಸಂಚಾರ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇಂದು ಸಂಜೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ಹೈಕೋರ್ಟ್ ಆದೇಶ ಗೌರವಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವ ಎಂದು ಘೋಷಿಸಿದರು.

https://imasdk.googleapis.com/js/core/bridge3.452.0_en.html#goog_936582983

ಸಾರಿಗೆ ನೌಕರರ ಮುಷ್ಕರದಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ನ್ಯಾಯಮೂರ್ತಿಗಳ ಸೂಚನೆ ನೀಡಿದ್ದಾರೆ. ಅವರ ಸೂಚನೆಯನ್ನು ನಾವು ಗೌರವಿಸುತ್ತೇವೆ. ಹೈಕೋರ್ಟ್ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಇಂದು ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗುತ್ತಿದೆ. ಎರಡನೇ ಪಾಳಿಯಲ್ಲಿರುವವರು ಕರ್ತವ್ಯಕ್ಕೆ ಹಾಜರಾಗಲಿದ್ದು, ನಾಳೆಯಿಂದ ಎಲ್ಲರೂ ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದರು.

ಮುಷ್ಕರದ ವೇಳೆ 2169 ನೌಕರರನ್ನು ವಜಾ ಮಾಡಿದೆ. 2941 ನೌಕರರನ್ನು ಅಮಾನತು ಮಾಡಿದೆ. 7646 ನೌಕರರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. 8 ಸಾವಿರ ನೌಕರರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಎಲ್ಲಾ ನಿರ್ಧಾರಗಳನ್ನು ವಾಪಸ್ ಪಡೆಯಬೇಕು. ನೌಕರರ ವಿರುದ್ಧ ಕೈಗೊಂಡ ಕ್ರಮಗಳನ್ನು ಕೈಬಿಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *